Headlines

ಮನೆಯೊಳಗೆ ಮಹಿಳೆ ಮತ್ತು ಸಾಕು ನಾಯಿಯ ಕೊಳೆತ ಶವ ಪತ್ತೆ; ದುರ್ವಾಸನೆಯಿಂದ ಘಟನೆ ಬೆಳಕಿಗೆ

ಮನೆಯೊಳಗೆ ಮಹಿಳೆ ಮತ್ತು ಸಾಕು ನಾಯಿಯ ಕೊಳೆತ ಶವ ಪತ್ತೆ; ದುರ್ವಾಸನೆಯಿಂದ ಘಟನೆ ಬೆಳಕಿಗೆ

A 57-year-old woman and her pet dog were found dead in a decomposed state inside a house in Ravindra Nagar, Shivamogga. The incident came to light after neighbors noticed a foul smell and alerted the police.

ಶಿವಮೊಗ್ಗ, ಜೂನ್ 13: ನಗರದ ರವೀಂದ್ರನಗರದಲ್ಲಿ ವೃದ್ಧೆಯೊಬ್ಬರು ಹಾಗೂ ಅವರ ಸಾಕು ನಾಯಿಯ ಮೃತದೇಹಗಳು ಮನೆಯೊಳಗೆ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ.

ರವೀಂದ್ರನಗರದ 1ನೇ ಅಡ್ಡರಸ್ತೆಯಲ್ಲಿರುವ ಮನೆಯಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ಪ್ರಭಾವತಿ (57) ಎಂದು ಗುರುತಿಸಲಾಗಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಅವರು ಕೆಲವು ದಿನಗಳ ಹಿಂದೆಯೇ ಮೃತಪಟ್ಟಿರುವ ಸಾಧ್ಯತೆ ಇದೆ. ಅವರೊಂದಿಗೆ ಮನೆಯೊಳಗಿದ್ದ ಸಾಕು ನಾಯಿ ಕೂಡ ಸಾವನ್ನಪ್ಪಿರುವುದು ಕಂಡುಬಂದಿದೆ.

ಶುಕ್ರವಾರ ಮನೆಯಿಂದ ತೀವ್ರ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿದ ಅಕ್ಕಪಕ್ಕದ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಮನೆ ಪರಿಶೀಲನೆ ನಡೆಸಿದ ವೇಳೆ ವೃದ್ಧೆ ಹಾಗೂ ಸಾಕು ನಾಯಿಯ ಕೊಳೆತ ಸ್ಥಿತಿಯಲ್ಲಿದ್ದ ಮೃತದೇಹಗಳು ಪತ್ತೆಯಾಗಿವೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಾವಿನ ನಿಖರ ಕಾರಣ ತಿಳಿದುಬಂದಿಲ್ಲ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ತನಿಖೆ ಮುಂದುವರಿದಿದೆ.

ಈ ಘಟನೆ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

About The Author