ಹಳ್ಳದಲ್ಲಿ ಮಹಿಳಾ ಬ್ಯಾಂಕ್ ಉದ್ಯೋಗಿಯ ನಗ್ನ ಮೃತದೇಹ ಪತ್ತೆ
A 38-year-old woman employee of Karnataka Grameena Bank was found dead in a drain near DC Camp Road in Ballari. Police have launched an investigation to determine the cause of death.
ಬಳ್ಳಾರಿ ; ನಗರದಲ್ಲಿ ಆತಂಕ ಸೃಷ್ಟಿಸಿರುವ ಘಟನೆಯೊಂದು ಬೆಳಕಿಗೆ ಬಂದಿದ್ದು, ಡಿ.ಸಿ. ಕ್ಯಾಂಪ್ ರಸ್ತೆ ಸಮೀಪದ ಅಂದ್ರಾಳ್ ಹಳ್ಳದಲ್ಲಿ ಮಹಿಳೆಯ ನಗ್ನ ಮೃತದೇಹ ಪತ್ತೆಯಾಗಿದೆ. ಮೃತರನ್ನು ಬಳ್ಳಾರಿ ನಗರದ ನಿವಾಸಿ ಹಾನಿಫ್ ಫಾತೀಮಾ (38) ಎಂದು ಗುರುತಿಸಲಾಗಿದ್ದು, ಅವರು ಕರ್ನಾಟಕ ಗ್ರಾಮೀಣ ಬ್ಯಾಂಕ್ನಲ್ಲಿ ಉದ್ಯೋಗಿಯಾಗಿದ್ದರು ಎಂದು ತಿಳಿದುಬಂದಿದೆ.
ಹಳ್ಳದ ಪಕ್ಕದಲ್ಲಿರುವ ಜಾಲಿ ಬೇಲಿಗೆ ಕಸ-ಕಡ್ಡಿಗಳೊಂದಿಗೆ ಮಹಿಳೆಯ ಮೃತದೇಹ ಸಿಲುಕಿಕೊಂಡ ಸ್ಥಿತಿಯಲ್ಲಿ ಕಂಡುಬಂದಿದೆ. ನಿನ್ನೆ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಮೃತದೇಹ ನೀರಿನೊಂದಿಗೆ ಕೊಚ್ಚಿಕೊಂಡು ಬಂದು ಇಲ್ಲಿ ಸಿಲುಕಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದರೆ ಮೃತದೇಹ ಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಮಹಿಳೆಯ ಶವ ಪತ್ತೆಯಾದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ನೂರಾರು ಸಾರ್ವಜನಿಕರು ಜಮಾಯಿಸಿದ್ದು, ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಘಟನೆ ಕುರಿತು ಸ್ಥಳೀಯರು ವಿವಿಧ ಅನುಮಾನಗಳನ್ನು ವ್ಯಕ್ತಪಡಿಸುತ್ತಿದ್ದು, ಸಾವಿನ ನಿಖರ ಕಾರಣ ಏನು ಎಂಬುದು ತನಿಖೆಯಿಂದಷ್ಟೇ ತಿಳಿದುಬರಬೇಕಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಎಪಿಎಂಸಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸುವ ಕಾರ್ಯ ಕೈಗೊಳ್ಳಲಾಗಿದ್ದು, ಆತ್ಮಹತ್ಯೆ ಅಥವಾ ಬೇರೆ ಯಾವುದೇ ಕಾರಣವಿದೆಯೇ ಎಂಬ ಎಲ್ಲಾ ಆಯಾಮಗಳಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ




