37 ವರ್ಷಗಳ ಬಳಿಕ ಪೊಲೀಸರ ಬಲೆಗೆ ಬಿದ್ದ ದರೋಡೆ ಪ್ರಕರಣದ ಆರೋಪಿ : 1989 ರಲ್ಲಿ ಗುಡ್ಡೆಕೊಪ್ಪದಲ್ಲಿ ನಡೆದಿದ್ದ ದರೋಡೆ

37 ವರ್ಷಗಳ ಬಳಿಕ ಪೊಲೀಸರ ಬಲೆಗೆ ಬಿದ್ದ ದರೋಡೆ ಪ್ರಕರಣದ ಆರೋಪಿ : 1989 ರಲ್ಲಿ ಗುಡ್ಡೆಕೊಪ್ಪದಲ್ಲಿ ನಡೆದಿದ್ದ ದರೋಡೆ

Malur Police arrested Abdul Khader, an accused in a 1989 dacoity case at Mrugavadhe in Thirthahalli, after 37 years of absconding. He was traced to Kerala and remanded to judicial custody.

ಶಿವಮೊಗ್ಗ, ಜು. 30: 1989ರಲ್ಲಿ ತೀರ್ಥಹಳ್ಳಿ ತಾಲೂಕಿನ ಮೃಗವಧೆ ಗ್ರಾಮದ ಗುಡ್ಡೆಕೊಪ್ಪದಲ್ಲಿ ನಡೆದಿದ್ದ ಡಕಾಯಿತಿ ಪ್ರಕರಣದ ಪ್ರಮುಖ ಆರೋಪಿಯನ್ನು 37 ವರ್ಷಗಳ ಬಳಿಕ ಮಾಳೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

1989ರಲ್ಲಿ ನಡೆದ ಡಕಾಯಿತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಳೂರು ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂಖ್ಯೆ 63/1989 ಅಡಿಯಲ್ಲಿ ಭಾರತೀಯ ದಂಡ ಸಂಹಿತೆಯ (IPC) ಕಲಂ 395ರಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಆರೋಪಿ ಅಬ್ದುಲ್ ಖಾದರ್ @ ಮೊಣು (57), ಮೂಲತಃ ಮಂಗಳೂರು ಜಿಲ್ಲೆಯ ಬಜ್ಪೆ ಸಮೀಪದ ಪೆರ್ರ ನಿವಾಸಿಯಾಗಿದ್ದು, ಕಳೆದ 37 ವರ್ಷಗಳಿಂದ ತಲೆಮರೆಸಿಕೊಂಡಿದ್ದ.

ಈತನ ವಿರುದ್ಧ ನ್ಯಾಯಾಲಯವು LPR No. 20/2001 ದಾಖಲಿಸಿ ಪರಾರಿಯಾಗಿರುವ ಆರೋಪಿಯಾಗಿ ಘೋಷಿಸಿತ್ತು.

ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕ ನಿಖಿಲ್ ಬಿ. ಐಪಿಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕಾರ್ಯಪ್ಪ ಎ.ಜಿ., ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್‌ಪಿ ಅರವಿಂದ ಕಲಗುಚ್ಚಿ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಯಿತು.

ಮಾಳೂರು ವೃತ್ತದ ಸಿಪಿಐ ರಾಜಶೇಖರ್ ಹಾಗೂ ಮಾಳೂರು ಪೊಲೀಸ್ ಠಾಣೆಯ ಪಿಎಸ್‌ಐ ಸುನಿಲ್ ಬಿ.ಸಿ. ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಮೇಘರಾಜ್ ಮತ್ತು ಅಭಿಲಾಶ್ ಅವರು ಆರೋಪಿಯ ಬಗ್ಗೆ ಮಾಹಿತಿ ಕಲೆಹಾಕಿ, ಕೇರಳ ರಾಜ್ಯದ ಮಂಜೇಶ್ವರ ತಾಲೂಕಿನ ವರ್ಕಾಡಿ ಗ್ರಾಮ ವ್ಯಾಪ್ತಿಯ ಪಾಡಿ–ಪುರ ಸಂಗೋಡಿ ಪ್ರದೇಶದಲ್ಲಿ ವಾಸಿಸುತ್ತಿದ್ದ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದರು.

ಬಂಧಿತ ಆರೋಪಿಯನ್ನು ಶಿವಮೊಗ್ಗದ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

16 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

16 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

18 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

2 days ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

2 days ago