ಶಿವಮೊಗ್ಗ ಜೈಲಿಗೆ ಕರೆದೊಯ್ಯುವಾಗ ಆರೋಪಿ ಬಟ್ಟೆಮಲ್ಲಪ್ಪ ಸರ್ಕಲ್‌ನಲ್ಲಿ ಸಿನಿಮೀಯ ಎಸ್ಕೇಪ್‌!

ಶಿವಮೊಗ್ಗ ಜೈಲಿಗೆ ಕರೆದೊಯ್ಯುವಾಗ ಆರೋಪಿ ಬಟ್ಟೆಮಲ್ಲಪ್ಪ ಸರ್ಕಲ್‌ನಲ್ಲಿ ಸಿನಿಮೀಯ ಎಸ್ಕೇಪ್‌!

ಊಟ ಕೇಳಿದ ಆರೋಪಿ ಅಧಿಕಾರಿಗಳನ್ನು ಯಾಮಾರಿಸಿ ಪರಾರಿ; ಹೊಸನಗರದಲ್ಲಿ ಪ್ರಕರಣ ದಾಖಲು

A 36-year-old accused escaped from Forest Department officials while being taken to Shivamogga Central Prison near Battemallappa Circle in Hosanagara taluk. Police have registered a case and launched a search.

ಹೊಸನಗರ : ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯುವ ವೇಳೆ ಆರೋಪಿಯೊಬ್ಬ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಸುಪರ್ದಿಯಿಂದ ತಪ್ಪಿಸಿಕೊಂಡಿರುವ ಘಟನೆ ಹೊಸನಗರ ತಾಲೂಕಿನ ಬಟ್ಟೆಮಲ್ಲಪ್ಪ ಸರ್ಕಲ್ ಬಳಿ ನಡೆದಿದೆ.

ಹೊಸನಗರ ತಾಲೂಕಿನ ಅಡುಗೋಡಿ ಗ್ರಾಮದ ವೆಂಕಟೇಶ್ (36) ಪರಾರಿಯಾದ ಆರೋಪಿ ಎಂದು ಗುರುತಿಸಲಾಗಿದೆ. ಪ್ರಕರಣವೊಂದರ ಸಂಬಂಧ ನ್ಯಾಯಾಲಯದ ವಾರಂಟ್ ಹಿನ್ನೆಲೆ ಅರಣ್ಯ ಇಲಾಖೆ ಸಿಬ್ಬಂದಿ ವೆಂಕಟೇಶ್‌ನನ್ನು ವಶಕ್ಕೆ ಪಡೆದು ಹೊಸನಗರ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ, ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯುವಂತೆ ಆದೇಶಿಸಿದ್ದರು. ಅದರಂತೆ ಅರಣ್ಯ ಉಪವಲಯ ಅಧಿಕಾರಿಗಳಾದ ಸುನೀಲ್ ಡಿ. ಕುಂಬಾರ್, ಇಬ್ರಾಹಿಂ, ಅರಣ್ಯ ವೀಕ್ಷಕ ಅಯಾನ್ ಬೆಡೆಭಾಯಿ ಹಾಗೂ ಕಳ್ಳಬೇಟೆ ತಡೆ ಶಿಬಿರದ ಸಿಬ್ಬಂದಿ ಚಕ್ರಪಾಣಿ ಅವರು ಇಲಾಖೆಯ ವಾಹನದಲ್ಲಿ ಆರೋಪಿಯನ್ನು ಶಿವಮೊಗ್ಗಕ್ಕೆ ಕರೆದುಕೊಂಡು ಹೋಗುತ್ತಿದ್ದರು.

ಮಧ್ಯಾಹ್ನ ಸುಮಾರು 2 ಗಂಟೆ ವೇಳೆಗೆ ವಾಹನವು ಬಟ್ಟೆಮಲ್ಲಪ್ಪ ಸರ್ಕಲ್ ಸಮೀಪ ತಲುಪಿದಾಗ, ತನಗೆ ಹಸಿವಾಗಿದ್ದು ಊಟ ಕೊಡಿಸುವಂತೆ ಆರೋಪಿ ವೆಂಕಟೇಶ್ ಮನವಿ ಮಾಡಿದ್ದಾನೆ ಎನ್ನಲಾಗಿದೆ.

ಆರೋಪಿಯ ಮಾತನ್ನು ನಂಬಿದ ಅಧಿಕಾರಿಗಳಾದ ಸುನೀಲ್ ಹಾಗೂ ಇಬ್ರಾಹಿಂ ಅವರು ಸಮೀಪದ ಸಹನಾ ಹೋಟೆಲ್‌ನಿಂದ ಊಟ ತರಲು ತೆರಳಿದ್ದಾರೆ.

ಈ ವೇಳೆ ವಾಹನದಲ್ಲೇ ಕಾವಲಿದ್ದ ಅರಣ್ಯ ವೀಕ್ಷಕ ಅಯಾನ್ ಬೆಡೆಭಾಯಿ ಹಾಗೂ ಸಿಬ್ಬಂದಿ ಚಕ್ರಪಾಣಿ ಅವರನ್ನು ತಳ್ಳಿಹಾಕಿ, ಹಲ್ಲೆ ನಡೆಸಿದ ಬಳಿಕ ಆರೋಪಿ ವೆಂಕಟೇಶ್ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಘಟನೆಯ ತಕ್ಷಣ ಸಿಬ್ಬಂದಿ ಬಟ್ಟೆಮಲ್ಲಪ್ಪ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವ್ಯಾಪಕ ಶೋಧ ನಡೆಸಿದರೂ ಆರೋಪಿ ಪತ್ತೆಯಾಗಿಲ್ಲ.

ಈ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾದ ಆರೋಪಿಯ ಪತ್ತೆಗೆ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…

20 hours ago

ಕುಡಿಯುವ ನೀರಿಗಾಗಿ ಬಾಳೂರು ಗ್ರಾಮಸ್ಥರ ಆಕ್ರೋಶ; ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆ

ಕುಡಿಯುವ ನೀರಿಗಾಗಿ ಬಾಳೂರು ಗ್ರಾಮಸ್ಥರ ಆಕ್ರೋಶ; ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆ Residents of Baluru and Kaleshwara villages…

20 hours ago

ಬಟಾಣಿಜಡ್ಡು, ತಮ್ಮಡಿಕೊಪ್ಪ ಭಾಗದಲ್ಲಿ ಆನೆಗಳ ಸಂಚಾರ – ತೋಟಗಳಿಗೆ ಹಾನಿ , ಜನರಿಗೆ ಅರಣ್ಯ ಇಲಾಖೆ ಎಚ್ಚರಿಕೆ

ಬಟಾಣಿಜಡ್ಡು, ತಮ್ಮಡಿಕೊಪ್ಪ ಭಾಗದಲ್ಲಿ ಆನೆಗಳ ಸಂಚಾರ – ತೋಟಗಳಿಗೆ ಹಾನಿ , ಜನರಿಗೆ ಅರಣ್ಯ ಇಲಾಖೆ ಎಚ್ಚರಿಕೆ Wild elephant…

20 hours ago

ಕಾರಿನಲ್ಲಿ ಗಾಂಜಾ ಮಾರಾಟ: ಇಬ್ಬರ ಬಂಧನ, 1.42 ಕೆಜಿ ಗಾಂಜಾ ಹಾಗೂ ಕಾರು ಜಪ್ತಿ

ಕಾರಿನಲ್ಲಿ ಗಾಂಜಾ ಮಾರಾಟ: ಇಬ್ಬರ ಬಂಧನ, 1.42 ಕೆಜಿ ಗಾಂಜಾ ಹಾಗೂ ಕಾರು ಜಪ್ತಿ Two people were arrested…

1 day ago

ಎಣ್ಣೆ ಮತ್ತಿನಲ್ಲಿ ಅಪಾಯಕಾರಿ ಆಟೋ ಚಾಲನೆ: ಚಾಲಕನ ಬಂಧನ, ವಾಹನ ಪೊಲೀಸ್ ವಶಕ್ಕೆ

ಎಣ್ಣೆ ಮತ್ತಿನಲ್ಲಿ ಅಪಾಯಕಾರಿ ಆಟೋ ಚಾಲನೆ: ಚಾಲಕನ ಬಂಧನ, ವಾಹನ ಪೊಲೀಸ್ ವಶಕ್ಕೆ Shivamogga West Traffic Police registered…

1 day ago

ಅರಸಾಳು ಬಳಿ ರೈಲ್ವೆ ಹಳಿಯ ಮೇಲೆ ಉರುಳಿದ ಮರ; ಮಾರ್ಗ ಮಧ್ಯೆ ನಿಂತ ತಾಳಗುಪ್ಪ-ಬೆಂಗಳೂರು ರೈಲು! ಪ್ರಯಾಣಿಕರ ಪರದಾಟ

ಅರಸಾಳು ಬಳಿ ರೈಲ್ವೆ ಹಳಿಯ ಮೇಲೆ ಉರುಳಿದ ಮರ; ಮಾರ್ಗ ಮಧ್ಯೆ ನಿಂತ ತಾಳಗುಪ್ಪ-ಬೆಂಗಳೂರು ರೈಲು! ಪ್ರಯಾಣಿಕರ ಪರದಾಟ The…

1 day ago