ಆಗುಂಬೆ ಘಾಟಿಯಲ್ಲಿ ಭೀಕರ ರಸ್ತೆ ಅಪಘಾತ: ಖಾಸಗಿ ಬಸ್–ಕಾರು ಮುಖಾಮುಖಿ ಡಿಕ್ಕಿ
A private bus and a car collided head-on at Agumbe Ghat in Shivamogga district. No fatalities were reported as the bus driver managed to control the vehicle, preventing a major tragedy.
ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯಲ್ಲಿ ಭಾನುವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ತೀರ್ಥಹಳ್ಳಿಯಿಂದ ಉಡುಪಿಯತ್ತ ತೆರಳುತ್ತಿದ್ದ ಖಾಸಗಿ ಬಸ್‌ಗೆ ಎದುರಿನಿಂದ ಬಂದ ಕಾರು ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಕಾರು ಏಕಾಏಕಿ ರಸ್ತೆಯ ಮಧ್ಯಭಾಗಕ್ಕೆ ಬಂದ ಪರಿಣಾಮ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ವಾಹನದಲ್ಲಿದ್ದವರು ಆತಂಕಕ್ಕೊಳಗಾದರು.
ಆದರೆ, ಬಸ್ ಚಾಲಕ ಸಮಯಪ್ರಜ್ಞೆ ಪ್ರದರ್ಶಿಸಿ ವಾಹನವನ್ನು ನಿಯಂತ್ರಣಕ್ಕೆ ತಂದಿದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಇದರಿಂದ ಸಂಭವಿಸಬಹುದಾಗಿದ್ದ ಭಾರೀ ಅನಾಹುತ ತಪ್ಪಿದಂತಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಪರಿಣಾಮ ಆಗುಂಬೆ ಘಾಟಿ ರಸ್ತೆಯಲ್ಲಿ ಕೆಲಕಾಲ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಬಳಿಕ ಅಪಘಾತಕ್ಕೀಡಾದ ವಾಹನಗಳನ್ನು ತೆರವುಗೊಳಿಸಿ ಸಂಚಾರವನ್ನು ಪುನಃ ಸುಗಮಗೊಳಿಸಲಾಯಿತು.
ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…
ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…
ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ಮಾನವೀಯತೆಯೆಂಬುದು ಕೇವಲ…
ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…
ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ.ಭಾನುಪ್ರಕಾಶ್ ಕರೆ Thirthahalli DySP Dr. Bhanuprakash…
ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ ಶತಮಾನೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ :…