ಅಂಗನವಾಡಿ ಕಾರ್ಯಕರ್ತೆ-ಸಹಾಯಕಿಯರ ಅಂತಿಮ ಆಯ್ಕೆ ಪಟ್ಟಿ ಪ್ರಕಟ
Women and Child Development Department has released the final selection list for Anganwadi Workers and Helpers in Shivamogga district. A total of 461 posts, including 53 Workers and 408 Helpers, have been filled.
ಶಿವಮೊಗ್ಗ, ಜು.21: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಇದೀಗ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಜಿಲ್ಲೆಯ ವಿವಿಧ ತಾಲೂಕುಗಳ ಅಂಗನವಾಡಿ ಕೇಂದ್ರಗಳಲ್ಲಿ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಒಟ್ಟು 53 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 408 ಅಂಗನವಾಡಿ ಸಹಾಯಕಿಯರು, ಸೇರಿದಂತೆ 461 ಹುದ್ದೆಗಳಿಗೆ ಆಯ್ಕೆ ಪಟ್ಟಿ ಪ್ರಕಟಗೊಂಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿವಮೊಗ್ಗ: 14 ಕಾರ್ಯಕರ್ತೆಯರು, 77 ಸಹಾಯಕಿಯರು
ಸಾಗರ: 2 ಕಾರ್ಯಕರ್ತೆಯರು, 52 ಸಹಾಯಕಿಯರು
ಭದ್ರಾವತಿ: 18 ಕಾರ್ಯಕರ್ತೆಯರು, 56 ಸಹಾಯಕಿಯರು
ಸೊರಬ: 1 ಕಾರ್ಯಕರ್ತೆ, 37 ಸಹಾಯಕಿಯರು
ಶಿಕಾರಿಪುರ: 1 ಕಾರ್ಯಕರ್ತೆ, 22 ಸಹಾಯಕಿಯರು
ತೀರ್ಥಹಳ್ಳಿ: 11 ಕಾರ್ಯಕರ್ತೆಯರು, 50 ಸಹಾಯಕಿಯರು
ಹೊಸನಗರ: 6 ಕಾರ್ಯಕರ್ತೆಯರು, 114 ಸಹಾಯಕಿಯರು
ಅಂತಿಮ ಆಯ್ಕೆ ಪಟ್ಟಿಯನ್ನು ಸಂಬಂಧಿತ ತಾಲೂಕುಗಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿ ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ತಮ್ಮ ಹೆಸರುಗಳನ್ನು ಪರಿಶೀಲಿಸಬಹುದಾಗಿದೆ.
ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…
ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…
ಮನೆಯಲ್ಲಿ ಒಬ್ಬರೇ ಇದ್ದ ಮಹಿಳೆ ಮೇಲೆ ಹಲ್ಲೆ; ಬಂಗಾರದ ಸರ ಕಿತ್ತುಕೊಂಡು ದುಷ್ಕರ್ಮಿ ಪರಾರಿ A woman was allegedly…
30 ವರ್ಷ 8 ತಿಂಗಳ ಸಾರ್ಥಕ ಸೇವೆಗೆ ವಿರಾಮ: ಶಿಕ್ಷಕಿ ಅಂಬಿಕಾ ಸಿ. ಅವರಿಗೆ ಆತ್ಮೀಯ ಬೀಳ್ಕೊಡುಗೆ Teacher Ambika…
ಹುಂಚ ಹೋಬಳಿ ಕಾಂಗ್ರೆಸ್ OBC ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ Ramesh H.B. has been appointed as the…
ರಿಪ್ಪನ್‌ಪೇಟೆ, ಹರತಾಳು, ಗರ್ತಿಕೆರೆಯಲ್ಲಿ ರಾಯರ 355ನೇ ಆರಾಧನೆ; ಹರಿದು ಬಂದ ಭಕ್ತ ಸಾಗರ Thousands of devotees participated in…