Categories: Blog

ದೇಶದ ಗೌರವ ಪೌರ ಪ್ರಜ್ಞೆಯಲ್ಲಿದೆ , ಶಿಕ್ಷಣ ಸಂಸ್ಕಾರದೊಂದಿಗೆ ಬೆಸೆಯಬೇಕು: ಶಾಸಕ ಆರಗ ಜ್ಞಾನೇಂದ್ರ

ದೇಶದ ಗೌರವ ಪೌರ ಪ್ರಜ್ಞೆಯಲ್ಲಿದೆ , ಶಿಕ್ಷಣ ಸಂಸ್ಕಾರದೊಂದಿಗೆ ಬೆಸೆಯಬೇಕು: ಶಾಸಕ ಆರಗ ಜ್ಞಾನೇಂದ್ರ

Araga Jnanendra said education should build character and civic responsibility while inaugurating the merit award ceremony at Government PU College, Amrutha, where 60 top-performing students were felicitated.

ರಿಪ್ಪನ್ ಪೇಟೆ : ದೇಶದ ಗೌರವವು ಆ ದೇಶದ ಪ್ರಜೆಗಳ ಪೌರ ಪ್ರಜ್ಞೆಯ ಮೇಲೆ ನಿಂತಿದೆ. ಶಿಕ್ಷಣ ಎಂದರೆ ಕೇವಲ ಅಕ್ಷರಭ್ಯಾಸವಲ್ಲ; ಅದು ನಮ್ಮ ಸಂಸ್ಕೃತಿಯ ಬೇರುಗಳನ್ನು ಅರಿತು ಪರಿಪೂರ್ಣ ವ್ಯಕ್ತಿತ್ವ ರೂಪಿಸಿಕೊಳ್ಳುವ ಪ್ರೇರಕ ಶಕ್ತಿಯಾಗಬೇಕು ಎಂದು ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಗರ್ತಿಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು ವತಿಯಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿ ಇಂದಿನ ಸಮಾಜದಲ್ಲಿ ನಡೆಯುತ್ತಿರುವ ಅನೇಕ ಅನಾಚಾರ ಮತ್ತು ಭ್ರಷ್ಟಾಚಾರಗಳಲ್ಲಿ ವಿದ್ಯಾವಂತರೇ ಭಾಗಿಯಾಗುತ್ತಿರುವುದು ದುರದೃಷ್ಟಕರ. ವಿವಿಧ ಇಲಾಖೆಗಳಲ್ಲಿನ ಲಂಚಗುಳಿತನ ಹಾಗೂ ಭ್ರಷ್ಟಾಚಾರದ ಹಿಂದೆ ಉನ್ನತ ಶಿಕ್ಷಣ ಮತ್ತು ಉನ್ನತ ಹುದ್ದೆ ಹೊಂದಿರುವವರೇ ಇರುವುದನ್ನು ನೋಡಿದಾಗ ಬೇಸರವಾಗುತ್ತದೆ ಎಂದು ಅವರು ವಿಷಾದ ವ್ಯಕ್ತಪಡಿಸಿದರು.

ಜಗತ್ತಿನ ಹಲವು ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ಭೌಗೋಳಿಕವಾಗಿ ಸಣ್ಣದಾಗಿದ್ದರೂ, ತಮ್ಮ ಪ್ರಾಮಾಣಿಕತೆ, ಕರ್ತವ್ಯನಿಷ್ಠೆ ಹಾಗೂ ಶಿಸ್ತುಬದ್ಧ ಜೀವನಶೈಲಿಯಿಂದ ವಿಶ್ವದ ಶ್ರೇಷ್ಠ ರಾಷ್ಟ್ರಗಳ ಸಾಲಿನಲ್ಲಿ ಗುರುತಿಸಿಕೊಂಡಿವೆ. ಭಾರತವೂ ಅಭಿವೃದ್ಧಿ ಹೊಂದಬೇಕಾದರೆ ಪ್ರತಿಯೊಬ್ಬ ನಾಗರಿಕನಲ್ಲಿ ಮೊದಲು ಪೌರ ಪ್ರಜ್ಞೆ ಬೆಳೆಯಬೇಕು. ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿಡುವುದು ಮತ್ತು ಸಮಾಜದ ಬಗ್ಗೆ ಜವಾಬ್ದಾರಿಯುತ ಮನೋಭಾವ ಬೆಳೆಸಿಕೊಳ್ಳುವುದು ಅಗತ್ಯ ಎಂದು ಹೇಳಿದರು.

ಗ್ರಾಮೀಣ ಪ್ರದೇಶದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜು ಅತ್ಯುತ್ತಮ ಫಲಿತಾಂಶ ದಾಖಲಿಸಿ ಶಿವಮೊಗ್ಗ ಜಿಲ್ಲೆಯಲ್ಲೇ ಉತ್ತಮ ಕಾಲೇಜು ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವುದು ಹೆಮ್ಮೆಯ ವಿಷಯ. ಖಾಸಗಿ ಕಾಲೇಜುಗಳಿಗೆ ಪೈಪೋಟಿ ನೀಡುವ ಮಟ್ಟದಲ್ಲಿ ದಾಖಲಾತಿ ಹೆಚ್ಚಾಗಿರುವುದು ಹಾಗೂ ಪೋಷಕರು ಈ ಕಾಲೇಜಿನ ಮೇಲೆ ವಿಶ್ವಾಸ ಇಡುವುದು ಇಲ್ಲಿನ ಗುಣಮಟ್ಟದ ಬೋಧನೆಗೆ ಸಾಕ್ಷಿಯಾಗಿದೆ. ಇಂತಹ ಶಿಕ್ಷಣ ಸಂಸ್ಥೆಗಳು ಗ್ರಾಮೀಣ ಪ್ರತಿಭೆಗಳಿಗೆ ಉತ್ತಮ ವೇದಿಕೆಯಾಗಿವೆ ಎಂದು ಶ್ಲಾಘಿಸಿದರು.

ಕಾರ್ಯಕ್ರಮದಲ್ಲಿ 2026ರ ಮಾರ್ಚ್‌ನಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 60 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಇದೇ ಸಂದರ್ಭದಲ್ಲಿ ಪ್ರೊ. ಗಣೇಶ್ ಮೂರ್ತಿ ಶಿಕ್ಷಣ ಪ್ರತಿಷ್ಠಾನದ ಪ್ರತಿಭಾ ಪುರಸ್ಕಾರ ಹಾಗೂ ಡಾ. ಜಿ.ಡಿ. ನಾರಾಯಣಪ್ಪ ದತ್ತಿ ನಿಧಿ ಪ್ರಶಸ್ತಿಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಹಾಗೂ ವೈದ್ಯರತ್ನ ಡಾ. ಜಿ.ಡಿ. ನಾರಾಯಣಪ್ಪ, ವಿಶ್ರಾಂತ ಪ್ರಾಂಶುಪಾಲ ಮಹಮದ್ ನಜಹತ್, ಅನಂತಮೂರ್ತಿ ಅವುಕ್, ಎಸ್‌ಡಿಸಿ ಕಾರ್ಯಾಧ್ಯಕ್ಷ ಟಿ.ಡಿ. ಸೋಮಶೇಖರ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.

ಕಾಲೇಜಿನ ಪ್ರಭಾರ ಪ್ರಾಂಶುಪಾಲ ಹಾಲಪ್ಪ ಸಂಕೂರು ಅಧ್ಯಕ್ಷತೆ ವಹಿಸಿದ್ದರು.

ಹಿರಿಯ ಉಪನ್ಯಾಸಕ ಶಂಕರಪ್ಪ ಕಲ್ಲೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ನಾಗೇಶ್ ಸೋಮಯಾಜಿ ಸ್ವಾಗತಿಸಿ, ಫ್ರಾನ್ಸಿಸ್ ಬೆಂಜಮಿನ್ ಕಾರ್ಯಕ್ರಮ ನಿರೂಪಿಸಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

4 hours ago

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…

17 hours ago

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ​ಮಾನವೀಯತೆಯೆಂಬುದು ಕೇವಲ…

17 hours ago

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…

17 hours ago

ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ. ಭಾನುಪ್ರಕಾಶ್ ಕರೆ

ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ.ಭಾನುಪ್ರಕಾಶ್ ಕರೆ Thirthahalli DySP Dr. Bhanuprakash…

19 hours ago

ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ

ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ ಶತಮಾನೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ :…

23 hours ago