Headlines

ಆಯನೂರು ಬಳಿ ಭೀಕರ ರಸ್ತೆ ಅಪಘಾತ: ಖಾಸಗಿ ಬಸ್ ಚಾಲಕ ಸ್ಥಳದಲ್ಲೇ ಸಾವು

ಆಯನೂರು ಬಳಿ ಭೀಕರ ರಸ್ತೆ ಅಪಘಾತ: ಖಾಸಗಿ ಬಸ್ ಚಾಲಕ ಸ್ಥಳದಲ್ಲೇ ಸಾವು

A 28-year-old private bus driver, Veeresh, died on the spot after his motorcycle was hit by an unidentified vehicle near Ayanur on NH-206 in Shivamogga district. Police have registered a case and launched an investigation.

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ವೀರಗಾರನ ಬೈರನಕೊಪ್ಪ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ಮೃತ ದುರ್ಧೈವಿಯನ್ನು ಶಿವಮೊಗ್ಗ ನಗರದ ಗಾಡಿಕೊಪ್ಪ ನಿವಾಸಿ ಹಾಗೂ ಖಾಸಗಿ ಬಸ್ ಚಾಲಕರಾಗಿದ್ದ ವೀರೇಶ್ (28) ಎಂದು ಗುರುತಿಸಲಾಗಿದೆ.

ಬೆಂಗಳೂರು–ಹೊನ್ನಾವರ ರಾಷ್ಟ್ರೀಯ ಹೆದ್ದಾರಿಯ ವೀರಗಾರನ ಬೈರನಕೊಪ್ಪ ಬಳಿ ಸೋಮವಾರ ಮುಂಜಾನೆ ಈ ಅಪಘಾತ ಸಂಭವಿಸಿದೆ. ವೀರೇಶ್ ಅವರು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ವೀರೇಶ್ ಅವರ ತಲೆಗೆ ಗಂಭೀರ ಗಾಯಗಳಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಕುರಿತು ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ಕಾರಣವಾದ ವಾಹನ ಹಾಗೂ ಚಾಲಕರ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

About The Author