ಮೈದುಂಬಿದ ಬಾಳೆಬರೆ ಫಾಲ್ಸ್‌ಗೆ ಪ್ರವಾಸಿಗರ ದಂಡು; ಹುಲಿಕಲ್ ಘಾಟಿಯಲ್ಲಿ ಪ್ರಕೃತಿ ಸೌಂದರ್ಯ ಅನಾವರಣ
Balebare Falls near Hulikal Ghat in Hosanagara, Shivamogga is flowing in full glory following heavy monsoon rains, attracting nature lovers and tourists from across Karnataka.
ಶಿವಮೊಗ್ಗ, ಜು.08: ಮಲೆನಾಡಿನಲ್ಲಿ ಮುಂಗಾರು ಮಳೆಯ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅದರ ಪರಿಣಾಮವಾಗಿ ಜಿಲ್ಲೆಯ ಜಲಪಾತಗಳು ಜೀವಕಳೆ ಪಡೆದುಕೊಂಡಿವೆ. ಅದರಲ್ಲೂ ಹೊಸನಗರ ತಾಲೂಕಿನ ಹುಲಿಕಲ್ ಘಾಟಿ ಸಮೀಪದ ಪ್ರಸಿದ್ಧ ಬಾಳೆಬರೆ ಫಾಲ್ಸ್ ಇದೀಗ ಮೈದುಂಬಿ ಹರಿಯುತ್ತಿದ್ದು, ಪ್ರಕೃತಿ ಪ್ರಿಯರು ಹಾಗೂ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದೆ.
ರಾಜ್ಯದಲ್ಲಿಯೇ ಅತಿ ಹೆಚ್ಚು ಮಳೆ ಬೀಳುವ ಪ್ರದೇಶಗಳಲ್ಲಿ ಒಂದಾದ ಹುಲಿಕಲ್ ಭಾಗದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ಬಾಳೆಬರೆ ಫಾಲ್ಸ್ ಹಾಲ್ನೊರೆಯಂತೆ ಸುಮಾರು 100 ಅಡಿ ಎತ್ತರದಿಂದ ದುಮ್ಮಿಕ್ಕಿ ಹರಿಯುತ್ತಿದೆ. ಜಲಪಾತದ ಮನಮೋಹಕ ದೃಶ್ಯಗಳು ಪ್ರವಾಸಿಗರಿಗೆ ಕಣ್ಮನ ಸೆಳೆಯುವ ಅನುಭವವನ್ನು ನೀಡುತ್ತಿವೆ.
ಹೊಸನಗರದಿಂದ ಉಡುಪಿಗೆ ಸಂಪರ್ಕಿಸುವ ಹುಲಿಕಲ್ ಘಾಟಿ ಮಾರ್ಗದಲ್ಲಿ ಮುಂಗಾರು ಆರಂಭವಾದರೆ ಸಾಕು, ಸಾಲು ಸಾಲು ಜಲಪಾತಗಳು ಪ್ರಕೃತಿಯ ಸೊಬಗನ್ನು ಅನಾವರಣಗೊಳಿಸುತ್ತವೆ. ಈ ಪೈಕಿ ಬಾಳೆಬರೆ ಫಾಲ್ಸ್ ಪ್ರಮುಖ ಆಕರ್ಷಣೆಯಾಗಿದ್ದು, ವಾರಾಂತ್ಯಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ.
ಆದರೆ, ನಿರಂತರ ಮಳೆಯಿಂದ ಜಲಪಾತದ ನೀರಿನ ಹರಿವು ತೀವ್ರವಾಗಿರುವುದರಿಂದ ಪ್ರವಾಸಿಗರು ಅಗತ್ಯ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತವಾಗಿ ಪ್ರಕೃತಿ ಸೌಂದರ್ಯವನ್ನು ಆಸ್ವಾದಿಸುವಂತೆ ಸ್ಥಳೀಯರು ಹಾಗೂ ಅಧಿಕಾರಿಗಳು ಮನವಿ ಮಾಡಿದ್ದಾರೆ.
ವೀಡಿಯೋ ಇಲ್ಲಿ ವೀಕ್ಷಿಸಿ
ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…
ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…
ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…
ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…
ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…
ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…