ಕೇಂದ್ರದಿಂದ ಮತದಾನದ ಹಕ್ಕು ಕಸಿಯುವ ಹುನ್ನಾರ: ಶಾಸಕ ಬೇಳೂರು ಗಂಭೀರ ಆರೋಪ!

ಕೇಂದ್ರದಿಂದ ಮತದಾನದ ಹಕ್ಕು ಕಸಿಯುವ ಹುನ್ನಾರ: ಶಾಸಕ ಬೇಳೂರು ಗಂಭೀರ ಆರೋಪ!

Congress MLA Beluru Gopalakrishna alleged that the Central Government is attempting to deprive citizens of their voting rights through the SIR process during a Congress review meeting held at Ripponpete in Shivamogga district.

​ರಿಪ್ಪನ್‌ಪೇಟೆ: ಕೇಂದ್ರದ ಬಿಜೆಪಿ ಸರ್ಕಾರವು ಎಸ್.ಐ.ಆರ್ (SIR) ಮೂಲಕ ಮತದಾರರ ಹಕ್ಕುಗಳನ್ನು ಕಸಿದುಕೊಳ್ಳುವ ಹುನ್ನಾರ ನಡೆಸುತ್ತಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ.

​ರಿಪ್ಪನ್‌ಪೇಟೆಯ ಎಸ್.ಆರ್. ಕಲ್ಯಾಣ ಮಂಟಪದಲ್ಲಿ ಶನಿವಾರ ಹೊಸನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಆಯೋಜಿಸಲಾಗಿದ್ದ ಎಸ್.ಐ.ಆರ್ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿ
​”ಈ ದೇಶದಲ್ಲಿ ಇಷ್ಟು ವರ್ಷಗಳಿಂದ ವಾಸವಿದ್ದರೂ ಜನರನ್ನು ದಾಖಲೆ ಕೇಳುವ ನೀಚ ಪ್ರವೃತ್ತಿಗೆ ಕೇಂದ್ರ ಸರ್ಕಾರ ಇಳಿದಿದೆ. ನಮಗೆ ಪಾಕಿಸ್ತಾನ ಮತ್ತು ಬಾಂಗ್ಲಾದೇಶದವರ ಅವಶ್ಯಕತೆ ಇಲ್ಲ. ಆದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಮ್ಮದೇ ಜನರ ಮತದಾನದ ಹಕ್ಕಿಗಾಗಿ ಹೋರಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ,” ಎಂದು ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕಾಂಗ್ರೆಸ್ ಪಕ್ಷವು ಎಂದಿಗೂ ಧರ್ಮವನ್ನು ಒಡೆಯುವ ಸಂಸ್ಕೃತಿ ಬೆಳೆಸಿಲ್ಲ, ಸರ್ವಧರ್ಮೀಯರನ್ನು ಸಮಾನವಾಗಿ ಕಾಣುತ್ತದೆ ಎಂದು ಅವರು ಸ್ಪಷ್ಟಪಡಿಸಿದರು.

ಈಗಾಗಲೇ ಮತಗಟ್ಟೆ ಅಧಿಕಾರಿಗಳು (ಬಿಎಲ್ಓ) ಮನೆ-ಮನೆಗೆ ತೆರಳಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಮಾಡುತ್ತಿದ್ದಾರೆ. ಉದ್ಯೋಗ ನಿಮಿತ್ತ ಅಥವಾ ಇತರೆ ಕಾರಣಗಳಿಗಾಗಿ ಹೊರಗಿರುವ ಅರ್ಹ ಮತದಾರರನ್ನು ಪಟ್ಟಿಯಲ್ಲಿ ಉಳಿಸಿಕೊಳ್ಳಲು ಕಾಂಗ್ರೆಸ್ ಕಾರ್ಯಕರ್ತರು ಬಿಎಲ್ಓಗಳೊಂದಿಗೆ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ಇದು ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹೆಚ್ಚಿನ ಮತಗಳನ್ನು ಪಡೆಯಲು ಸಹಕಾರಿಯಾಗಲಿದೆ ಎಂದು ಶಾಸಕರು ಕರೆ ನೀಡಿದರು.

ಸಭೆಯಲ್ಲಿ ಮಾತನಾಡಿದ ಮಾಜಿ ಸಂಸದ ಆಯನೂರು ಮಂಜುನಾಥ್, ಕೇಂದ್ರದ ಈ ಹುನ್ನಾರದ ಬಗ್ಗೆ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಜಾಗೃತರಾಗಿರಬೇಕು ಎಂದು ತಿಳಿಸಿದರು. ಮನೆ ಸಮೀಕ್ಷೆಗೆ ಬರುವ ಬಿಎಲ್ಓಗಳಿಗೆ ಸರಿಯಾದ ಮಾಹಿತಿ ನೀಡಿ, ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಸರಿಯಾಗಿ ದಾಖಲಾಗಿರುವ ಬಗ್ಗೆ ಪ್ರತಿಯೊಬ್ಬರೂ ದೃಢಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

​ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ.ಚಂದ್ರಮೌಳಿಗೌಡ ಅಧ್ಯಕ್ಷತೆ ವಹಿಸಿದ್ದ ಈ ಸಭೆಯಲ್ಲಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ಜಿಲ್ಲಾ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಶ್ವೇತಾ ಆರ್ ಬಂಡಿ, ಗ್ಯಾರಂಟಿ ಸಮಿತಿ ಅಧ್ಯಕ್ಷ ಚಿದಂಬರ್ ಸೇರಿದಂತೆ ಹಲವು ಪ್ರಮುಖ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಕೆಡಿಪಿ ಸದಸ್ಯ ಆಸೀಪ್ ಭಾಷಾ ಕಾರ್ಯಕ್ರಮವನ್ನು ನಿರೂಪಿಸಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

4 hours ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

4 hours ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

4 hours ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

9 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

11 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

1 day ago