Headlines

ಹುಲ್ಲಿನ ಬಣವೆಯಲ್ಲಿ ಅಡಗಿದ್ದ 10 ಅಡಿ ಉದ್ದದ ಹೆಬ್ಬಾವು ರಕ್ಷಣೆ

Screenshot 2026 07 09 17 38 04 092 com.picsart.studio edit

ಹುಲ್ಲಿನ ಬಣವೆಯಲ್ಲಿ ಅಡಗಿದ್ದ 10 ಅಡಿ ಉದ್ದದ ಹೆಬ್ಬಾವು ರಕ್ಷಣೆ

A 10-foot-long python was rescued from a haystack at a house in Kudligere village of Bhadravati taluk. Snake rescuer Benson safely captured and released the reptile into a forest as per Forest Department guidelines

ಭದ್ರಾವತಿ: ತಾಲೂಕಿನ ಕೂಡ್ಲಿಗೆರೆ ಗ್ರಾಮದ ರಾಜಣ್ಣ ಅವರ ಮನೆಯ ಆವರಣದಲ್ಲಿದ್ದ ಹುಲ್ಲಿನ ಬಣವೆಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಕಾಣಿಸಿಕೊಂಡು ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮನೆಯವರು ಹುಲ್ಲು ತೆಗೆಯುವ ವೇಳೆ ಹೆಬ್ಬಾವು ಕಣ್ಣಿಗೆ ಬಿದ್ದಿದ್ದು, ತಕ್ಷಣ ಸ್ಥಳೀಯರು ಎಚ್ಚರಿಕೆ ವಹಿಸಿ ಸ್ನೇಕ್ ರೆಸ್ಕೂವರ್‌ಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ಪಡೆದ ಸ್ನೇಕ್ ರೆಸ್ಕೂವರ್ ಬೆನ್ಸನ್ ಸುರಗಿತೋಪು (ಭದ್ರಾವತಿ) ಸ್ಥಳಕ್ಕೆ ಆಗಮಿಸಿ ಅತ್ಯಂತ ಜಾಗರೂಕತೆಯಿಂದ ಕಾರ್ಯಾಚರಣೆ ನಡೆಸಿದರು. ಸುಮಾರು 10 ಅಡಿ ಉದ್ದ ಹಾಗೂ ಸುಮಾರು 15 ಕೆಜಿ ತೂಕ ಹೊಂದಿದ್ದ ಹೆಬ್ಬಾವನ್ನು ಯಾವುದೇ ಹಾನಿಯಾಗದಂತೆ ಸುರಕ್ಷಿತವಾಗಿ ಸೆರೆಹಿಡಿಯಲಾಯಿತು.

ಬಳಿಕ ಅರಣ್ಯ ಇಲಾಖೆಯ ಮಾರ್ಗಸೂಚಿಯಂತೆ ಹೆಬ್ಬಾವನ್ನು ಸೂಕ್ತ ಅರಣ್ಯ ಪ್ರದೇಶಕ್ಕೆ ಕೊಂಡೊಯ್ದು ಸುರಕ್ಷಿತವಾಗಿ ಬಿಡಲಾಯಿತು.

ಸಮಯೋಚಿತವಾಗಿ ಕಾರ್ಯಾಚರಣೆ ನಡೆಸಿ ಹೆಬ್ಬಾವನ್ನು ಸುರಕ್ಷಿತವಾಗಿ ರಕ್ಷಿಸಿದ ಸ್ನೇಕ್ ರೆಸ್ಕೂವರ್ ಬೆನ್ಸನ್ ಅವರ ಕಾರ್ಯವನ್ನು ಗ್ರಾಮಸ್ಥರು ಶ್ಲಾಘಿಸಿದ್ದಾರೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.