ಹುಲ್ಲಿನ ಬಣವೆಯಲ್ಲಿ ಅಡಗಿದ್ದ 10 ಅಡಿ ಉದ್ದದ ಹೆಬ್ಬಾವು ರಕ್ಷಣೆ
A 10-foot-long python was rescued from a haystack at a house in Kudligere village of Bhadravati taluk. Snake rescuer Benson safely captured and released the reptile into a forest as per Forest Department guidelines
ಭದ್ರಾವತಿ: ತಾಲೂಕಿನ ಕೂಡ್ಲಿಗೆರೆ ಗ್ರಾಮದ ರಾಜಣ್ಣ ಅವರ ಮನೆಯ ಆವರಣದಲ್ಲಿದ್ದ ಹುಲ್ಲಿನ ಬಣವೆಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಕಾಣಿಸಿಕೊಂಡು ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮನೆಯವರು ಹುಲ್ಲು ತೆಗೆಯುವ ವೇಳೆ ಹೆಬ್ಬಾವು ಕಣ್ಣಿಗೆ ಬಿದ್ದಿದ್ದು, ತಕ್ಷಣ ಸ್ಥಳೀಯರು ಎಚ್ಚರಿಕೆ ವಹಿಸಿ ಸ್ನೇಕ್ ರೆಸ್ಕೂವರ್‌ಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ಪಡೆದ ಸ್ನೇಕ್ ರೆಸ್ಕೂವರ್ ಬೆನ್ಸನ್ ಸುರಗಿತೋಪು (ಭದ್ರಾವತಿ) ಸ್ಥಳಕ್ಕೆ ಆಗಮಿಸಿ ಅತ್ಯಂತ ಜಾಗರೂಕತೆಯಿಂದ ಕಾರ್ಯಾಚರಣೆ ನಡೆಸಿದರು. ಸುಮಾರು 10 ಅಡಿ ಉದ್ದ ಹಾಗೂ ಸುಮಾರು 15 ಕೆಜಿ ತೂಕ ಹೊಂದಿದ್ದ ಹೆಬ್ಬಾವನ್ನು ಯಾವುದೇ ಹಾನಿಯಾಗದಂತೆ ಸುರಕ್ಷಿತವಾಗಿ ಸೆರೆಹಿಡಿಯಲಾಯಿತು.
ಬಳಿಕ ಅರಣ್ಯ ಇಲಾಖೆಯ ಮಾರ್ಗಸೂಚಿಯಂತೆ ಹೆಬ್ಬಾವನ್ನು ಸೂಕ್ತ ಅರಣ್ಯ ಪ್ರದೇಶಕ್ಕೆ ಕೊಂಡೊಯ್ದು ಸುರಕ್ಷಿತವಾಗಿ ಬಿಡಲಾಯಿತು.
ಸಮಯೋಚಿತವಾಗಿ ಕಾರ್ಯಾಚರಣೆ ನಡೆಸಿ ಹೆಬ್ಬಾವನ್ನು ಸುರಕ್ಷಿತವಾಗಿ ರಕ್ಷಿಸಿದ ಸ್ನೇಕ್ ರೆಸ್ಕೂವರ್ ಬೆನ್ಸನ್ ಅವರ ಕಾರ್ಯವನ್ನು ಗ್ರಾಮಸ್ಥರು ಶ್ಲಾಘಿಸಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…
ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…
ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…
ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…
ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…
ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…