w
Headlines
Home » ಅಪ್ರಾಪ್ತೆಗೆ ಲೈಂಗಿಕ ಕಿರುಕುಳ – 22 ವರ್ಷದ ಯುವಕನಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಕೋರ್ಟ್ ಆದೇಶ

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ – 22 ವರ್ಷದ ಯುವಕನಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಕೋರ್ಟ್ ಆದೇಶ

Screenshot 2026 07 26 19 37 00 627 com.picsart.studio edit

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ – 22 ವರ್ಷದ ಯುವಕನಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಕೋರ್ಟ್ ಆದೇಶ

A Bhadravati youth has been sentenced to three years of rigorous imprisonment and fined ₹31,000 by a Shivamogga court after being convicted of sexually harassing a minor girl in a 2024 case.

ಶಿವಮೊಗ್ಗ/ಭದ್ರಾವತಿ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಭದ್ರಾವತಿ ತಾಲೂಕಿನ ಯುವಕನಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹31,000 ದಂಡ ವಿಧಿಸಿ ತೀರ್ಪು ನೀಡಿದೆ.

ಪ್ರಕರಣದ ವಿವರಗಳ ಪ್ರಕಾರ, 2024ರಲ್ಲಿ 20 ವರ್ಷದ ಯುವಕನೊಬ್ಬ 16 ವರ್ಷದ ಅಪ್ರಾಪ್ತ ಬಾಲಕಿಯೊಂದಿಗೆ ಪರಿಚಯ ಬೆಳೆಸಿ ಲೈಂಗಿಕ ಕಿರುಕುಳ ನೀಡಿದ್ದನು. ಈ ಸಂಬಂಧ ಭದ್ರಾವತಿ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಅಂದಿನ ತನಿಖಾಧಿಕಾರಿಯಾಗಿದ್ದ ಪಿಎಸ್‌ಐ ಕವಿತಾ ಇ. ಅವರು ಪ್ರಕರಣದ ಸಮಗ್ರ ತನಿಖೆ ನಡೆಸಿ, ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ (ಚಾರ್ಜ್‌ಶೀಟ್) ಸಲ್ಲಿಸಿದ್ದರು.

ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆದ ವಿಚಾರಣೆ ವೇಳೆ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಶ್ರೀಧರ್ ಅವರು ವಾದ ಮಂಡಿಸಿದರು.

ಪ್ರಕರಣದ ಸಾಕ್ಷ್ಯಾಧಾರಗಳು ಹಾಗೂ ವಾದ-ಪ್ರತಿವಾದಗಳನ್ನು ಪರಿಶೀಲಿಸಿದ ನ್ಯಾಯಾಧೀಶ ನಿಂಗನಗೌಡ ಬಿ. ಪಾಟೀಲ್ ಅವರು ಆರೋಪ ಸಾಬೀತಾಗಿದೆ ಎಂದು ತೀರ್ಮಾನಿಸಿ, ಆರೋಪಿಗೆ 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹31,000 ದಂಡ ವಿಧಿಸಿ ಆದೇಶ ಹೊರಡಿಸಿದರು.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.