ಬೈಕ್‌ಗಳ ಮುಖಾಮುಖಿ ಡಿಕ್ಕಿ: ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ದುರ್ಮರಣ
A government school headmaster died in a head-on motorcycle collision near Nedaravalli on Tuesday evening while returning home after school duties. A case has been registered at Anandapuram Police Station.
ಆನಂದಪುರಂ: ಶಾಲೆಯ ಕರ್ತವ್ಯ ಮುಗಿಸಿ ಬೈಕ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರು ಬೈಕ್‌ಗಳ ಮುಖಾಮುಖಿ ಡಿಕ್ಕಿಯಲ್ಲಿ ಮೃತಪಟ್ಟಿರುವ ದುರ್ಘಟನೆ ಮಂಗಳವಾರ ಸಂಜೆ ನಡೆದಿದೆ.
ಮೃತರನ್ನು ಹೊಸನಗರ ತಾಲ್ಲೂಕಿನ ಆಲಗೇರಿ ಮಂಡ್ರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಡ್ತಿ ಮುಖ್ಯ ಶಿಕ್ಷಕರಾಗಿದ್ದ ಹಾಗೂ ಸಾಗರ ತಾಲ್ಲೂಕಿನ ನೇದರವಳ್ಳಿ ಗ್ರಾಮದ ನಿವಾಸಿ ನಾರಾಯಣಪ್ಪ (58) ಎಂದು ಗುರುತಿಸಲಾಗಿದೆ.
ಮಾಹಿತಿಯ ಪ್ರಕಾರ, ನಾರಾಯಣಪ್ಪ ಅವರು ಶಾಲೆಯ ಕರ್ತವ್ಯ ಮುಗಿಸಿಕೊಂಡು ತಮ್ಮ ಬೈಕ್‌ನಲ್ಲಿ ನೇದರವಳ್ಳಿಯಲ್ಲಿರುವ ಮನೆಗೆ ತೆರಳುತ್ತಿದ್ದರು. ಈ ವೇಳೆ ನೇದರವಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಎದುರಿನಿಂದ ಬಂದ ಮತ್ತೊಂದು ಬೈಕ್ ಅವರ ಬೈಕ್‌ಗೆ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಅಪಘಾತದ ಪರಿಣಾಮ ನಾರಾಯಣಪ್ಪ ಅವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರು ತಕ್ಷಣವೇ ಅವರನ್ನು ಸಾಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ.
ಘಟನೆ ಸಂಬಂಧ ಆನಂದಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…
ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…
ಮನೆಯಲ್ಲಿ ಒಬ್ಬರೇ ಇದ್ದ ಮಹಿಳೆ ಮೇಲೆ ಹಲ್ಲೆ; ಬಂಗಾರದ ಸರ ಕಿತ್ತುಕೊಂಡು ದುಷ್ಕರ್ಮಿ ಪರಾರಿ A woman was allegedly…
30 ವರ್ಷ 8 ತಿಂಗಳ ಸಾರ್ಥಕ ಸೇವೆಗೆ ವಿರಾಮ: ಶಿಕ್ಷಕಿ ಅಂಬಿಕಾ ಸಿ. ಅವರಿಗೆ ಆತ್ಮೀಯ ಬೀಳ್ಕೊಡುಗೆ Teacher Ambika…
ಹುಂಚ ಹೋಬಳಿ ಕಾಂಗ್ರೆಸ್ OBC ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ Ramesh H.B. has been appointed as the…
ರಿಪ್ಪನ್‌ಪೇಟೆ, ಹರತಾಳು, ಗರ್ತಿಕೆರೆಯಲ್ಲಿ ರಾಯರ 355ನೇ ಆರಾಧನೆ; ಹರಿದು ಬಂದ ಭಕ್ತ ಸಾಗರ Thousands of devotees participated in…