BMW ಕಾರಿನಲ್ಲಿ ಗಾಂಜಾ ಸಾಗಾಟ: ಶಿವಮೊಗ್ಗದಲ್ಲಿ ₹1.10 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಆರೋಪಿ ಬಂಧನ
Vinobanagar Police in Shivamogga arrested a man for transporting 2.065 kg of ganja in a BMW car. Police seized ganja worth ₹1.10 lakh, the luxury vehicle, and a mobile phone.
ಶಿವಮೊಗ್ಗ, ಜು.08: ಐಷಾರಾಮಿ BMW ಕಾರಿನಲ್ಲಿ ಗಾಂಜಾವನ್ನು ಸಾಗಿಸುತ್ತಿದ್ದ ಆರೋಪಿಯನ್ನು ವಿನೋಬನಗರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿ, ಸುಮಾರು ₹1.10 ಲಕ್ಷ ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಜುಲೈ 6ರಂದು ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮಿನಕೊಪ್ಪ ಮಾರ್ಗದಲ್ಲಿ ಮಾದಕ ವಸ್ತು ಸಾಗಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ಮಾಹಿತಿ ಆಧರಿಸಿ ತಕ್ಷಣ ಕಾರ್ಯಾಚರಣೆ ನಡೆಸಿದ ವಿನೋಬನಗರ ಪಿಎಸ್ಐ ಹಾಗೂ ಸಿಬ್ಬಂದಿಗಳ ತಂಡವು ಸ್ಥಳಕ್ಕೆ ದಾಳಿ ನಡೆಸಿ, 46 ವರ್ಷದ ಮೌಲಾಸಾಬಾ ಕರ್ಜಗಿ ಎಂಬ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಯಿತು.
ಬಂಧಿತನಿಂದ ಅಂದಾಜು ₹1,10,000 ಮೌಲ್ಯದ 2 ಕೆಜಿ 65 ಗ್ರಾಂ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅಲ್ಲದೆ, ಗಾಂಜಾ ಸಾಗಾಟಕ್ಕೆ ಬಳಸಲಾಗಿದ್ದ ಐಷಾರಾಮಿ BMW ಕಾರು ಹಾಗೂ ಒಂದು ಮೊಬೈಲ್ ಫೋನ್ನ್ನೂ ಜಪ್ತಿ ಮಾಡಲಾಗಿದೆ.
ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್