Categories: Blog

29 ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಬೊಲೆರೋ ಪಲ್ಟಿ : ತಪ್ಪಿದ ಭಾರೀ ದುರಂತ

29 ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಬೊಲೆರೋ ಪಲ್ಟಿ : ತಪ್ಪಿದ ಭಾರೀ ದುರಂತ

A Bolero carrying 29 migrant workers overturned near the 15th Mile under Thunga Nagar Police limits in Shivamogga. All passengers, including women and children, escaped with minor injuries. Police have registered a case and launched an investigation.

ಶಿವಮೊಗ್ಗ, ಜು. 13: ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯ 15ನೇ ಮೈಲಿಗಲ್ಲಿನ ಬಳಿ ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬೊಲೆರೋ ವಾಹನವೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಸೋಮವಾರ ನಡೆದಿದೆ.

ವಾಹನದಲ್ಲಿ ಪ್ರಯಾಣಿಸುತ್ತಿದ್ದ 29 ಮಂದಿ ಕಾರ್ಮಿಕರು, ಮಹಿಳೆಯರು ಹಾಗೂ ಇಬ್ಬರು ಮಕ್ಕಳು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಾಹಿತಿಯಂತೆ, ವಾಹನದಲ್ಲಿ ಮಹಿಳೆಯರು ಮತ್ತು ಇಬ್ಬರು ಮಕ್ಕಳನ್ನು ಸೇರಿಸಿ ಒಟ್ಟು 29 ಮಂದಿ ಕಾರ್ಮಿಕರಿದ್ದು, ವಾಹನದಲ್ಲಿ ಮಿತಿಮೀರಿದ ಸಂಖ್ಯೆಯಲ್ಲಿ ಪ್ರಯಾಣಿಕರನ್ನು ಕರೆದೊಯ್ಯಲಾಗುತ್ತಿತ್ತು ಎನ್ನಲಾಗಿದೆ. ಇವರೆಲ್ಲರೂ ಮಧ್ಯಪ್ರದೇಶದ ರಾಜಗಢ, ವಿದಿಶಾ ಹಾಗೂ ಗುನಾ ಜಿಲ್ಲೆಗಳ ನಿವಾಸಿಗಳಾಗಿದ್ದಾರೆ.

ಮಧ್ಯಪ್ರದೇಶ ಮೂಲದ ಮೇಸ್ತ್ರಿ ಗೋವಿಂದ್ ಎಂಬುವವರು ದಿನಕ್ಕೆ ₹450 ಕೂಲಿ ನೀಡುವ ಭರವಸೆಯೊಂದಿಗೆ ಚಿಕ್ಕಮಗಳೂರು ಜಿಲ್ಲೆಯ ಕಳಸ ಭಾಗದ ಕಾಫಿ ತೋಟಗಳಲ್ಲಿ ಕೆಲಸ ಮಾಡಲು ಕಾರ್ಮಿಕರನ್ನು ಕರೆತರುತ್ತಿದ್ದರು. ಈ ವೇಳೆ ಕಳಸದತ್ತ ಸಾಗುತ್ತಿದ್ದ ಬೊಲೆರೋ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಪಲ್ಟಿಯಾಗಿದೆ.

ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ಮಹಿಳೆಯರು, ಮಕ್ಕಳು ಸೇರಿದಂತೆ ಎಲ್ಲ ಕಾರ್ಮಿಕರನ್ನು ಸುರಕ್ಷಿತವಾಗಿ ವಾಹನದಿಂದ ಹೊರತೆಗೆದರು. ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಚಾಲಕನ ಅಜಾಗರೂಕತೆ, ಅತಿವೇಗ ಅಥವಾ ವಾಹನದಲ್ಲಿ ಮಿತಿಮೀರಿದ ಜನರನ್ನು ಸಾಗಿಸಿರುವುದೇ ಅಪಘಾತಕ್ಕೆ ಕಾರಣವೇ ಎಂಬ ಕುರಿತು ತನಿಖೆ ಮುಂದುವರಿದಿದೆ. ಸ್ಥಳೀಯ ಆಡಳಿತ ಗಾಯಾಳುಗಳಿಗೆ ಅಗತ್ಯ ವೈದ್ಯಕೀಯ ನೆರವು ಒದಗಿಸುತ್ತಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

19 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

1 day ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

1 day ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

1 day ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

2 days ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

2 days ago