ಚಿನ್ನಮನೆ ಬಳಿ ಹಿಟ್ ಅಂಡ್ ರನ್: ಬೈಕ್‌ಗಳಿಗೆ ಲಾರಿ ಡಿಕ್ಕಿ, ಓರ್ವನಿಗೆ ಗಂಭೀರ ಗಾಯ – ಅರಸಾಳುವರೆಗೆ ಬೆನ್ನತ್ತಿದ ಸಾರ್ವಜನಿಕರು

ಚಿನ್ನಮನೆ ಬಳಿ ಹಿಟ್ ಅಂಡ್ ರನ್: ಬೈಕ್‌ಗಳಿಗೆ ಲಾರಿ ಡಿಕ್ಕಿ, ಓರ್ವನಿಗೆ ಗಂಭೀರ ಗಾಯ – ಅರಸಾಳುವರೆಗೆ ಬೆನ್ನತ್ತಿದ ಸಾರ್ವಜನಿಕರು

A hit-and-run incident near Chinnamane bus stand left one person seriously injured after a lorry rammed two parked motorcycles. The lorry was chased by the public up to Arasalu Railway Station before the driver fled. Police have seized the vehicle and launched an investigation.

ಆಯನೂರು : ಚಿನ್ನಮನೆ ಬಸ್ ನಿಲ್ದಾಣದ ಸಮೀಪ ಮಂಗಳವಾರ ನಡೆದ ಹಿಟ್ ಅಂಡ್ ರನ್ ಪ್ರಕರಣದಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಎರಡು ಬೈಕ್‌ಗಳಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಮತ್ತೋರ್ವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಲಾರಿ ಚಾಲಕನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬೈಕ್‌ಗಳಿಗೆ ಡಿಕ್ಕಿ ಹೊಡೆದು ನಿಲ್ಲಿಸದೆ ವೇಗವಾಗಿ ಪರಾರಿಯಾಗಲು ಯತ್ನಿಸಿದ್ದಾನೆ ಇದನ್ನು ಗಮನಿಸಿದ ಸ್ಥಳೀಯರು ಹಾಗೂ ಸಾರ್ವಜನಿಕರು ಲಾರಿಯನ್ನು ಬೆನ್ನಟ್ಟಿ ಅರಸಾಳು ರೈಲ್ವೆ ನಿಲ್ದಾಣದವರೆಗೆ ತೆರಳಿ ಅಡ್ಡಗಟ್ಟಿದರು. ಆದರೆ ಈ ವೇಳೆ ಲಾರಿ ಚಾಲಕ ವಾಹನವನ್ನು ಬಿಟ್ಟು ಪರಾರಿಯಾಗಿದ್ದಾನೆ.

ಅಪಘಾತದಲ್ಲಿ ಚಿನ್ನಮನೆಯ ರಾಘು ಎಂಬುವವರಿಗೆ ಅವರಿಗೆ ಗಂಭೀರ ಗಾಯಗಳಾಗಿದ್ದು ಶಿವಮೊಗ್ಗಕ್ಕೆ ರವಾನಿಸಲಾಗಿದೆ,ಇನ್ನೊಂದು ಬೈಕ್ ನಲ್ಲಿದ್ದ ಹಾಲೇಶಪ್ಪ  ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಘಟನೆಯಲ್ಲಿ ಎರಡು ಬೈಕ್ ನಜ್ಜುಗುಜ್ಜಾಗಿವೆ.

ಗಾಯಾಳು ರಾಘು ಎಂಬುವವರನ್ನು ಮೊದಲಿಗೆ ಆಯನೂರಿನ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ರಿಪ್ಪನ್‌ಪೇಟೆ ಪೊಲೀಸರು ಸ್ಥಳಕ್ಕೆ ಧಾವಿಸಿ ಲಾರಿಯನ್ನು ವಶಕ್ಕೆ ಪಡೆದು, ಘಟನೆ ನಡೆದಿರುವ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಗೆ ವಾಹನವನ್ನು ಕಳುಹಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಕುಂಸಿ ಪೊಲೀಸರು ಲಾರಿ ಚಾಲಕನ ಪತ್ತೆಗೆ ಕ್ರಮ ಕೈಗೊಂಡಿದ್ದು, ಅಪಘಾತಕ್ಕೆ ನಿಖರ ಕಾರಣಗಳ ಕುರಿತು ತನಿಖೆ ಮುಂದುವರಿದಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

2 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

4 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

16 hours ago

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…

16 hours ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

18 hours ago

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…

19 hours ago