ಮುಖ್ಯಮಂತ್ರಿ ಪಿಎ ಎಂದು ಸುಳ್ಳು ಪರಿಚಯ: ರಿಕ್ರಿಯೇಷನ್ ಕ್ಲಬ್ ಲೈಸೆನ್ಸ್ ಹೆಸರಿನಲ್ಲಿ ₹15 ಲಕ್ಷ ವಂಚನೆ, ಆರೋಪಿ ಬಂಧನ

ಮುಖ್ಯಮಂತ್ರಿ ಪಿಎ ಎಂದು ಸುಳ್ಳು ಪರಿಚಯ: ರಿಕ್ರಿಯೇಷನ್ ಕ್ಲಬ್ ಲೈಸೆನ್ಸ್ ಹೆಸರಿನಲ್ಲಿ ₹15 ಲಕ್ಷ ವಂಚನೆ, ಆರೋಪಿ ಬಂಧನ

A man posing as Karnataka Chief Minister D.K. Shivakumar’s personal assistant allegedly cheated a farmer of ₹15 lakh by promising a recreation club licence. Thunganagar Police arrested the accused and are continuing the investigation.

ಶಿವಮೊಗ್ಗ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವೈಯಕ್ತಿಕ ಸಹಾಯಕ (ಪಿ.ಎ.) ಎಂದು ಸುಳ್ಳು ಪರಿಚಯಿಸಿಕೊಂಡು ರಿಕ್ರಿಯೇಷನ್ ಕ್ಲಬ್ ಲೈಸೆನ್ಸ್ ಕೊಡಿಸುವುದಾಗಿ ನಂಬಿಸಿ ₹15 ಲಕ್ಷ ವಂಚನೆ ಎಸಗಿದ ಆರೋಪದಡಿ ತುಂಗಾನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಶಿವಮೊಗ್ಗದ ಕೆಎಚ್‌ಬಿ ಕಾಲೋನಿಯ ನಿವಾಸಿ ಹಾಗೂ ರೈತರಾದ ಮಂಜುನಾಥ ಹಂಜಿ ನೀಡಿದ ದೂರಿನ ಮೇರೆಗೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 504/2026ರಡಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 318(4) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ಪ್ರಮುಖ ಆರೋಪಿಯಾಗಿರುವ ಹೇಮಂತ್ ಕುಮಾರ್ ಅಲಿಯಾಸ್ ಗಣೇಶ್ ಎಂಬಾತ ತಾನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪಿ.ಎ. ಎಂದು ಪರಿಚಯಿಸಿಕೊಂಡು, ರಿಕ್ರಿಯೇಷನ್ ಕ್ಲಬ್ ಲೈಸೆನ್ಸ್ ಕೊಡಿಸುವುದಾಗಿ ನಂಬಿಸಿದ್ದಾನೆ ಎನ್ನಲಾಗಿದೆ. ಈ ನೆಪದಲ್ಲಿ ದೂರುದಾರರಿಂದ ವಿವಿಧ ಹಂತಗಳಲ್ಲಿ ಒಟ್ಟು ₹15 ಲಕ್ಷ ಹಣ ಪಡೆದುಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.

ಆರೋಪಿ ಫೋನ್‌ಪೇ ಮೂಲಕ ಹಣ ವರ್ಗಾವಣೆ ಮಾಡಿಸಿಕೊಂಡಿದ್ದಲ್ಲದೆ, ಶಿವಮೊಗ್ಗದ ಸಾಯಿ ಇಂಟರ್‌ನ್ಯಾಷನಲ್ ಹೋಟೆಲ್ ಹಾಗೂ ವಡ್ಡಿನಕೊಪ್ಪದಲ್ಲಿ ನಗದು ರೂಪದಲ್ಲಿಯೂ ಹಣ ಸ್ವೀಕರಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಬಳಿಕ ಲೈಸೆನ್ಸ್ ಕೊಡಿಸದೇ ಹಣದೊಂದಿಗೆ ತಲೆಮರೆಸಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.

ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ತುಂಗಾನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿ ಹೇಮಂತ್ ಕುಮಾರ್ ಅಲಿಯಾಸ್ ಗಣೇಶ್‌ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಕಲೆಹಾಕುವ ಜೊತೆಗೆ ಇದೇ ರೀತಿಯಲ್ಲಿ ಇತರರಿಗೂ ವಂಚನೆ ನಡೆಸಿರುವ ಸಾಧ್ಯತೆ ಕುರಿತು ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…

4 hours ago

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…

5 hours ago

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

9 hours ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

13 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

15 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

1 day ago