ಜಿಂಕೆ ಬೇಟೆ ಪ್ರಕರಣ: ಓರ್ವ ಬೇಟೆಗಾರ ಬಂಧನ – ಎರಡು ಜಿಂಕೆಗಳ ಕಳೇಬರ, ಕಾರು ಹಾಗೂ ಮೂರು ಬೈಕ್ ವಶ
One person was arrested in a deer poaching case near Lakshmisagara Minor Forest in Channagiri. Forest officials seized two deer carcasses, one car, and three motorcycles used in the crime. Investigation is underway.
ಭದ್ರಾವತಿ, ಜು. 30: ಅಕ್ರಮವಾಗಿ ಜಿಂಕೆಗಳನ್ನು ಬೇಟೆಯಾಡಿ ಹತ್ಯೆಗೈದಿದ್ದ ಬೇಟೆಗಾರರ ತಂಡದ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಎರಡು ಜಿಂಕೆಗಳ ಕಳೇಬರ, ಕೃತ್ಯಕ್ಕೆ ಬಳಸಿದ್ದ ಒಂದು ಕಾರು ಹಾಗೂ ಮೂರು ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಚನ್ನಗಿರಿ ತಾಲೂಕಿನ ಮಾವಿನಕಟ್ಟೆ ಶಾಖೆಯ ಲಕ್ಷ್ಮೀಸಾಗರ ಕಿರು ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಬಂಧಿತ ಆರೋಪಿಯನ್ನು ಚನ್ನಗಿರಿ ತಾಲೂಕಿನ ಮಲ್ಲಿಗೆರೆ ಗ್ರಾಮದ ದಿವಾಕರ್ ಎಂದು ಗುರುತಿಸಲಾಗಿದೆ.
ಖಚಿತ ಮಾಹಿತಿ ಆಧರಿಸಿ ಅರಣ್ಯ ಸಂಚಾರಿ ದಳ ಹಾಗೂ ಚನ್ನಗಿರಿ ವಲಯ ಅರಣ್ಯ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿದ್ದು, ಆರೋಪಿಯನ್ನು ಬಂಧಿಸಿ ವಾಹನಗಳು ಹಾಗೂ ಜಿಂಕೆಗಳ ಕಳೇಬರವನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇತರ ಆರೋಪಿಗಳ ಪತ್ತೆಗಾಗಿ ಅರಣ್ಯ ಇಲಾಖೆ ತನಿಖೆ ಮುಂದುವರಿಸಿದೆ.
ಈ ಕಾರ್ಯಾಚರಣೆ ಭದ್ರಾವತಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಚನ್ನಗಿರಿ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ಮಾರ್ಗದರ್ಶನದಲ್ಲಿ, ಚನ್ನಗಿರಿ ವಲಯ ಅರಣ್ಯಾಧಿಕಾರಿಗಳು, ಶಾಂತಿಸಾಗರ ವಲಯ ಅರಣ್ಯಾಧಿಕಾರಿಗಳು ಹಾಗೂ ಚನ್ನಗಿರಿ ಅರಣ್ಯ ಸಂಚಾರಿ ದಳದ ಸಿಬ್ಬಂದಿ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆಯಿತು.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…