Headlines

ಧರ್ಮಸ್ಥಳ 28ನೇ ವರ್ಷದ ಭಜನಾ ಕಮ್ಮಟ ಪೂರ್ವಭಾವಿ ಸಭೆ : ಕಾರ್ಯಕ್ರಮದ ಯಶಸ್ಸಿಗೆ ಎಲ್ಲರ ಸಹಕಾರ ಅಗತ್ಯ – ಸತೀಶ್ ಕೊಡೂರು

ಧರ್ಮಸ್ಥಳ 28ನೇ ವರ್ಷದ ಭಜನಾ ಕಮ್ಮಟ ಪೂರ್ವಭಾವಿ ಸಭೆ – ಕಾರ್ಯಕ್ರಮದ ಯಶಸ್ಸಿಗೆ ಎಲ್ಲರ ಸಹಕಾರ ಅಗತ್ಯ – ಸತೀಶ್ ಕೊಡೂರು

A preparatory meeting for the 28th Annual Dharmasthala Bhajana Kammata was held at Hosanagara. Organizers discussed arrangements, and Taluk Bhajana Parishat President Satish Koduru called for collective cooperation to ensure the event’s success.

ಹೊಸನಗರ, ಜು. 29: ಧರ್ಮಸ್ಥಳದಲ್ಲಿ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಅಂಗವಾಗಿ ಹೊಸನಗರ ಯೋಜನಾ ಕಚೇರಿಯಲ್ಲಿ ಬುಧವಾರ ಮಧ್ಯಾಹ್ನ ಪೂರ್ವಭಾವಿ ಸಭೆ ನಡೆಯಿತು.

ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸತೀಶ್ ಕೊಡೂರು, ಧರ್ಮಸ್ಥಳದ ಭಜನಾ ಕಮ್ಮಟವನ್ನು ಯಾವುದೇ ತೊಡಕುಗಳಿಲ್ಲದೆ, ಶಿಸ್ತುಬದ್ಧವಾಗಿ ಮತ್ತು ಯಶಸ್ವಿಯಾಗಿ ನಡೆಸಲು ಎಲ್ಲರ ಸಹಕಾರ ಅತ್ಯಗತ್ಯ ಎಂದು ಹೇಳಿದರು.

ಭಜನಾ ಮಂಡಳಿಗಳ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಸದಸ್ಯರು ತಮ್ಮ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಕಾರ್ಯಕ್ರಮದ ಯಶಸ್ಸಿಗೆ ಪ್ರತಿಯೊಬ್ಬರ ಸೇವಾ ಮನೋಭಾವ ಮತ್ತು ಸಕ್ರಿಯ ಭಾಗವಹಿಸುವಿಕೆ ಮುಖ್ಯವಾಗಿದೆ. ಕಮ್ಮಟದಲ್ಲಿ ಭಾಗವಹಿಸುವ ಭಕ್ತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು. ಎಲ್ಲ ವಿಭಾಗಗಳ ನಡುವೆ ಉತ್ತಮ ಸಮನ್ವಯದಿಂದ ಕಾರ್ಯನಿರ್ವಹಿಸಿದರೆ ಈ ವರ್ಷದ ಕಮ್ಮಟ ಮಾದರಿ ಕಾರ್ಯಕ್ರಮವಾಗಿ ಮೂಡಿಬರಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ಸಭೆಯಲ್ಲಿ ರಾಜ್ಯ ಭಜನಾ ಪರಿಷತ್ ಉಪಾಧ್ಯಕ್ಷ ರಾಜೇಂದ್ರ ಕುಮಾರ್ ಬಸ್ರೂರು, ತಾಲೂಕು ಯೋಜನಾಧಿಕಾರಿ ದಿನೇಶ್, ಜಿಲ್ಲಾ ಸಮನ್ವಯಾಧಿಕಾರಿ ರವೀಂದ್ರ ಬಸ್ರೂರು ಹಾಗೂ ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯ ದೇವಾನಂದ್ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಉಮೇಶ್ ನಿರೂಪಿಸಿದರು. ಸಹ ಕಾರ್ಯದರ್ಶಿ ಶೀಲಾ ಪ್ರಾರ್ಥನೆ ಸಲ್ಲಿಸಿದರು. ಕಾರಣಗಿರಿ ವಲಯದ ಅಧ್ಯಕ್ಷ ದೇವೇಂದ್ರ ಸ್ವಾಗತ ಕೋರಿದರು.ತಾಲೂಕು ಭಜನಾ ಪರಿಷತ್ ಉಪಾಧ್ಯಕ್ಷೆ ರಜಿನಿ ದಿನೇಶ್ ವಂದನಾರ್ಪಣೆ ನೆರವೇರಿಸಿದರು.

ಸಭೆಯಲ್ಲಿ ಧರ್ಮಸ್ಥಳದಲ್ಲಿ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಸಿದ್ಧತೆ, ಸಂಘಟನೆ ಹಾಗೂ ವಿವಿಧ ಜವಾಬ್ದಾರಿಗಳ ಕುರಿತು ಸಮಗ್ರ ಚರ್ಚೆ ನಡೆಯಿತು. ವಿವಿಧ ಭಜನಾ ಮಂಡಳಿಗಳ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಸದಸ್ಯರು ಭಾಗವಹಿಸಿ ತಮ್ಮ ಸಲಹೆ-ಸೂಚನೆಗಳನ್ನು ನೀಡಿದರು.

About The Author