ಶಿವಮೊಗ್ಗದ ಹಿರಿಯ ನಾಯಕ, ಮಾಜಿ ಶಾಸಕ ಹೆಚ್.ಎಂ. ಚಂದ್ರಶೇಖರಪ್ಪ ಇನ್ನಿಲ್ಲ! ಅಂತಿಮ ದರ್ಶನ, ಅಂತ್ಯಕ್ರಿಯೆ ಎಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ…

ಶಿವಮೊಗ್ಗದ ಹಿರಿಯ ನಾಯಕ, ಮಾಜಿ ಶಾಸಕ ಹೆಚ್.ಎಂ. ಚಂದ್ರಶೇಖರಪ್ಪ ಇನ್ನಿಲ್ಲ! ಅಂತಿಮ ದರ್ಶನ, ಅಂತ್ಯಕ್ರಿಯೆ ಎಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ…

Former Shivamogga MLA and senior Congress leader H.M. Chandrashekharappa passed away at the age of 78. Public viewing will be held on July 27, followed by the last rites in Shivamogga.

ಶಿವಮೊಗ್ಗ: ಶಿವಮೊಗ್ಗದ ಮಾಜಿ ಶಾಸಕ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಹೆಚ್.ಎಂ. ಚಂದ್ರಶೇಖರಪ್ಪ (78) ಅವರು ಭಾನುವಾರ ಸಂಜೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು.

ಕಳೆದ ಎರಡು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

1999ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ಅವರನ್ನು ಸೋಲಿಸಿ ಶಿವಮೊಗ್ಗ ನಗರ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದ ಹೆಚ್.ಎಂ. ಚಂದ್ರಶೇಖರಪ್ಪ ಅವರು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿ ಗುರುತಿಸಿಕೊಂಡಿದ್ದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ಶಿವಮೊಗ್ಗ ನಗರಸಭೆ ಅಧ್ಯಕ್ಷ, ವೀರಶೈವ-ಲಿಂಗಾಯತ ಮಹಾಸಭಾದ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಶಾಸಕರ ವೇದಿಕೆಯ ರಾಜ್ಯ ಅಧ್ಯಕ್ಷರಾಗಿ ಸೇರಿದಂತೆ ಹಲವು ಪ್ರಮುಖ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದರು.

ಅವರ ನಿಧನಕ್ಕೆ ಜಿಲ್ಲಾ ಕಾಂಗ್ರೆಸ್ ಸೇರಿದಂತೆ ವಿವಿಧ ರಾಜಕೀಯ, ಸಾಮಾಜಿಕ ಹಾಗೂ ಸಾರ್ವಜನಿಕ ವಲಯದ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ನಾಳೆ ಅಂತಿಮ ದರ್ಶನ

ಅವರ ಪಾರ್ಥಿವ ಶರೀರವನ್ನು ಶಿವಮೊಗ್ಗಕ್ಕೆ ತರಲಾಗುತ್ತಿದ್ದು, ಜುಲೈ 27ರಂದು ಬೆಳಿಗ್ಗೆ 9:30ರಿಂದ ಬಸವನಗುಡಿ ಮುಖ್ಯರಸ್ತೆಯಲ್ಲಿರುವ ಅವರ ಸ್ವಗೃಹದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಸಂಜೆ ಅಂತ್ಯಕ್ರಿಯೆ

ಅದೇ ದಿನ ಸಂಜೆ 4 ಗಂಟೆಗೆ ಹೊಸಳ್ಳಿಯಲ್ಲಿರುವ ಅವರ ತೋಟದಲ್ಲಿ ವೀರಶೈವ-ಲಿಂಗಾಯತ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಲಿದೆ.

ಹಿರಿಯ ನಾಯಕರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಬಸವನಗುಡಿಯಲ್ಲಿರುವ ಅವರ ನಿವಾಸದ ಬಳಿ ಸಂಬಂಧಿಕರು, ಸ್ನೇಹಿತರು, ಪಕ್ಷದ ಮುಖಂಡರು ಹಾಗೂ ಅಪಾರ ಸಂಖ್ಯೆಯ ಬೆಂಬಲಿಗರು ಆಗಮಿಸುತ್ತಿದ್ದು, ಶೋಕದ ವಾತಾವರಣ ನಿರ್ಮಾಣವಾಗಿದೆ.

ಸಂತಾಪ :

ಮಾಜಿ ಶಾಸಕ ಹೆಚ್ ಎಂ ಚಂದ್ರಶೇಖರಪ್ಪ ನಿಧನಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ , ಶಾಸಕಿ ಶಾರದಾ ಪೂರ್ಯನಾಯ್ಕ್ , ಮಾಜಿ ಸಚಿವ ಮಧು ಬಂಗಾರಪ್ಪ , ಜೆಡಿಎಸ್ ರಾಜ್ಯ ಕಾರ್ಯದರ್ಶಿ ಅರ್ ಎ ಚಾಬುಸಾಬ್ , ಮುಖಂಡರಾದ ಕಲಗೋಡು ರತ್ನಾಕರ್ , ಬಿ ಪಿ ರಾಮಚಂದ್ರ , ಮಾಸ್ತಿಕಟ್ಟೆ ಸುಬ್ರಹ್ಮಣ್ಯ , ಅಮೀರ್ ಹಂಜಾ , ಈಶ್ವರಪ್ಪಗೌಡ , ಆಸೀಫ್ ಭಾಷಾ , ಬಿ‌ಜಿ ಚಂದ್ರಮೌಳಿ ಸೇರಿದಂತೆ ಅನೇಕರು ಸಂತಾಪ ವ್ಯಕ್ತಪಡಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

5 hours ago

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…

18 hours ago

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ​ಮಾನವೀಯತೆಯೆಂಬುದು ಕೇವಲ…

18 hours ago

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…

18 hours ago

ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ. ಭಾನುಪ್ರಕಾಶ್ ಕರೆ

ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ.ಭಾನುಪ್ರಕಾಶ್ ಕರೆ Thirthahalli DySP Dr. Bhanuprakash…

20 hours ago

ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ

ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ ಶತಮಾನೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ :…

24 hours ago