Categories: Lifestyle

ಉಚಿತ ಬ್ಯೂಟಿ ಪಾರ್ಲರ್ ತರಬೇತಿಗೆ ಅರ್ಜಿ ಆಹ್ವಾನ: 35 ದಿನಗಳ ವಸತಿ ಸಹಿತ ಉಚಿತ ತರಬೇತಿ

ಉಚಿತ ಬ್ಯೂಟಿ ಪಾರ್ಲರ್ ತರಬೇತಿಗೆ ಅರ್ಜಿ ಆಹ್ವಾನ: 35 ದಿನಗಳ ವಸತಿ ಸಹಿತ ಉಚಿತ ತರಬೇತಿ

Canara Bank RSETI invites applications for a free 35-day Beauty Parlour Training Program for unemployed women and young women across Karnataka with free food, accommodation and government certification.

ಶಿವಮೊಗ್ಗ, ಜುಲೈ 2: ನಿರುದ್ಯೋಗಿ ಯುವತಿಯರು ಹಾಗೂ ಮಹಿಳೆಯರನ್ನು ಸ್ವಯಂ ಉದ್ಯೋಗದತ್ತ ಪ್ರೋತ್ಸಾಹಿಸುವ ಉದ್ದೇಶದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆ (RSETI) ವತಿಯಿಂದ 35 ದಿನಗಳ ಉಚಿತ ಬ್ಯೂಟಿ ಪಾರ್ಲರ್ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ.

ಜುಲೈ ತಿಂಗಳ ಮೂರನೇ ವಾರದಿಂದ ಆರಂಭವಾಗಲಿರುವ ಈ ತರಬೇತಿಯಲ್ಲಿ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ 18 ರಿಂದ 45 ವರ್ಷ ವಯಸ್ಸಿನ ನಿರುದ್ಯೋಗಿ ಯುವತಿಯರು ಹಾಗೂ ಮಹಿಳೆಯರು ಭಾಗವಹಿಸಬಹುದು.

ತರಬೇತಿ ಅವಧಿಯಲ್ಲಿ ಉಚಿತ ತರಬೇತಿ, ವಸತಿ ಹಾಗೂ ಊಟದ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಗ್ರಾಮೀಣ ಪ್ರದೇಶದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ತಿಳಿದಿರಬೇಕು ಹಾಗೂ ಕನ್ನಡ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು.

ತರಬೇತಿ ಯಶಸ್ವಿಯಾಗಿ ಪೂರ್ಣಗೊಳಿಸಿದವರಿಗೆ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣಪತ್ರ ನೀಡಲಾಗುತ್ತದೆ.

ಆಸಕ್ತ ಅಭ್ಯರ್ಥಿಗಳು ಜುಲೈ 9, 2026 (ಗುರುವಾರ) ಬೆಳಿಗ್ಗೆ 10 ಗಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ (ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವಿದ್ಯಾರ್ಹತೆ ಹಾಗೂ ವಿಳಾಸದ ದಾಖಲಾತಿಗಳೊಂದಿಗೆ ನೇರವಾಗಿ ಹಾಜರಾಗಬೇಕು.

ಸಂದರ್ಶನಕ್ಕೆ ಹಾಜರಾಗಲು ಸಾಧ್ಯವಾಗದವರು ಜುಲೈ 9ರೊಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು 8970476050, 6363139123, 9591514154, 9686248369 ಅಥವಾ 9886935603 ಸಂಖ್ಯೆಗಳಿಗೆ ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…

7 hours ago

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…

7 hours ago

ಮನೆಯಲ್ಲಿ ಒಬ್ಬರೇ ಇದ್ದ ಮಹಿಳೆ ಮೇಲೆ ಹಲ್ಲೆ; ಬಂಗಾರದ ಸರ ಕಿತ್ತುಕೊಂಡು ದುಷ್ಕರ್ಮಿ ಪರಾರಿ

ಮನೆಯಲ್ಲಿ ಒಬ್ಬರೇ ಇದ್ದ ಮಹಿಳೆ ಮೇಲೆ ಹಲ್ಲೆ; ಬಂಗಾರದ ಸರ ಕಿತ್ತುಕೊಂಡು ದುಷ್ಕರ್ಮಿ ಪರಾರಿ A woman was allegedly…

7 hours ago

30 ವರ್ಷ 8 ತಿಂಗಳ ಸಾರ್ಥಕ ಸೇವೆಗೆ ವಿರಾಮ: ಬರುವೆ ಶಾಲೆಯ ಶಿಕ್ಷಕಿ ಅಂಬಿಕಾ ಸಿ. ಅವರಿಗೆ ಆತ್ಮೀಯ ಬೀಳ್ಕೊಡುಗೆ

30 ವರ್ಷ 8 ತಿಂಗಳ ಸಾರ್ಥಕ ಸೇವೆಗೆ ವಿರಾಮ: ಶಿಕ್ಷಕಿ ಅಂಬಿಕಾ ಸಿ. ಅವರಿಗೆ ಆತ್ಮೀಯ ಬೀಳ್ಕೊಡುಗೆ Teacher Ambika…

18 hours ago

ಹುಂಚ ಹೋಬಳಿ ಕಾಂಗ್ರೆಸ್ OBC ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ

ಹುಂಚ ಹೋಬಳಿ ಕಾಂಗ್ರೆಸ್ OBC ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ Ramesh H.B. has been appointed as the…

19 hours ago

ರಿಪ್ಪನ್‌ಪೇಟೆ, ಹರತಾಳು, ಗರ್ತಿಕೆರೆಯಲ್ಲಿ ರಾಯರ 355ನೇ ಆರಾಧನೆ; ಹರಿದು ಬಂದ ಭಕ್ತ ಸಾಗರ

ರಿಪ್ಪನ್‌ಪೇಟೆ, ಹರತಾಳು, ಗರ್ತಿಕೆರೆಯಲ್ಲಿ ರಾಯರ 355ನೇ ಆರಾಧನೆ; ಹರಿದು ಬಂದ ಭಕ್ತ ಸಾಗರ Thousands of devotees participated in…

20 hours ago