ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಹರತಾಳು 100% ಸಾಧನೆ – ಅಧಿಕಾರಿಗಳನ್ನು ಸನ್ಮಾನಿಸಿದ ಹರತಾಳು ಹಾಲಪ್ಪ
Haratalu Gram Panchayat Booth No. 195 becomes the first booth in Sagar-Hosanagara constituency to achieve 100% voter list revision. Former Minister Haratalu Halappa felicitates BLO, PDO and officials.
ಹೊಸನಗರ: ಸಾಗರ–ಹೊಸನಗರ ವಿಧಾನಸಭಾ ಕ್ಷೇತ್ರದಲ್ಲಿ ಶೇ.100ರಷ್ಟು ಮತದಾರರ ಪಟ್ಟಿ ಪರಿಷ್ಕರಣೆ ಪೂರ್ಣಗೊಳಿಸಿದ ಮೊದಲ ಬೂತ್ ಎಂಬ ಹೆಗ್ಗಳಿಕೆಗೆ ಹರತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೂತ್ ಸಂಖ್ಯೆ 195 ಪಾತ್ರವಾಗಿದೆ. ಈ ಸಾಧನೆಯ ಹಿನ್ನೆಲೆಯಲ್ಲಿ ಮಾಜಿ ಸಚಿವ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ ಅವರು ಬಿಎಲ್‌ಒ, ಪಿಡಿಒ ಸೇರಿದಂತೆ ಅಧಿಕಾರಿಗಳನ್ನು ಸನ್ಮಾನಿಸಿ ಅಭಿನಂದಿಸಿದರು.
ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಬಿಎಲ್‌ಒ ಕಾವ್ಯಾ, ಗ್ರಾಮ ಲೆಕ್ಕಾಧಿಕಾರಿ ಶೋಭಾ, ಪಿಡಿಒ ಪರಮೇಶ್ವರ್ ಬಿ.ಬಿ. ಸೇರಿದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಹಾಲಪ್ಪ ಅವರು ಹಾರ ಹಾಕಿ, ಶಾಲು ಹೊದಿಸಿ ಗೌರವಿಸಿದರು. ಇದೇ ಬೂತ್‌ನ ಬಿಎಲ್‌ಎ-2 ಆಗಿ ಹರತಾಳು ಹಾಲಪ್ಪ ಅವರು ಸಹ ಕಾರ್ಯನಿರ್ವಹಿಸಿದ್ದರು.
ಸಾಗರ–ಹೊಸನಗರ ವಿಧಾನಸಭಾ ಕ್ಷೇತ್ರದಲ್ಲಿ ಶೇ.100ರಷ್ಟು ಮತದಾರರ ಪಟ್ಟಿ ಪರಿಷ್ಕರಣೆ ಪೂರ್ಣಗೊಳಿಸಿದ ಮೊದಲ ಬೂತ್ ಎಂಬ ದಾಖಲೆಗೆ ಅಧಿಕಾರಿಗಳು, ಸಿಬ್ಬಂದಿ, ಕಾರ್ಯಕರ್ತರು ಹಾಗೂ ಸ್ಥಳೀಯರ ಸಹಕಾರ ಕಾರಣವಾಗಿದೆ ಎಂದು ಹಾಲಪ್ಪ ಹೇಳಿದರು.
ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, “ಮತದಾರರ ಪಟ್ಟಿ ಪರಿಷ್ಕರಣೆ ಪ್ರಜಾಪ್ರಭುತ್ವದ ಅತ್ಯಂತ ಮಹತ್ವದ ಪ್ರಕ್ರಿಯೆ. ಪ್ರತಿಯೊಬ್ಬ ಅರ್ಹ ಮತದಾರರ ಹೆಸರನ್ನು ಪಟ್ಟಿಯಲ್ಲಿ ಸೇರಿಸುವ ಜವಾಬ್ದಾರಿಯನ್ನು ಅಧಿಕಾರಿಗಳು ಅತ್ಯಂತ ಸಮರ್ಪಕವಾಗಿ ನಿರ್ವಹಿಸಿದ್ದಾರೆ. ಈ ಸಾಧನೆಗೆ ಶ್ರಮಿಸಿದ ಎಲ್ಲ ಅಧಿಕಾರಿಗಳು, ಸಿಬ್ಬಂದಿ ಹಾಗೂ ಕಾರ್ಯಕರ್ತರನ್ನು ಅಭಿನಂದಿಸುತ್ತೇನೆ ಎಂದು ಹೇಳಿದರು.
ಎಲ್ಲ ಅಧಿಕಾರಿಗಳು, ಸಿಬ್ಬಂದಿ ಮತ್ತು ಕಾರ್ಯಕರ್ತರು ಮನೆ ಮನೆಗೆ ತೆರಳಿ ಜವಾಬ್ದಾರಿಯಿಂದ ಕೆಲಸ ಮಾಡಿದ್ದರಿಂದ ಈ ಯಶಸ್ಸು ಸಾಧ್ಯವಾಗಿದೆ.
ಪ್ರಜಾಪ್ರಭುತ್ವದಲ್ಲಿ ಮತದಾರರ ಪಟ್ಟಿಯ ಶುದ್ಧತೆ ಅತ್ಯಂತ ಮುಖ್ಯ. ಪ್ರತಿಯೊಬ್ಬ ಅರ್ಹ ನಾಗರಿಕರ ಹೆಸರು ಮತದಾರರ ಪಟ್ಟಿಯಲ್ಲಿ ಸೇರುವುದು ನಮ್ಮೆಲ್ಲರ ಕರ್ತವ್ಯ. ಈ ನಿಟ್ಟಿನಲ್ಲಿ ಶ್ರಮಿಸಿದ ಪ್ರತಿಯೊಬ್ಬರ ಸೇವೆ ಅಭಿನಂದನೀಯವಾಗಿದೆ.ಇದೇ ರೀತಿಯ ಜನಪರ ಕಾರ್ಯಗಳು ಮುಂದೆಯೂ ಯಶಸ್ವಿಯಾಗಿ ಮುಂದುವರಿಯಲಿ” ಎಂದು ಹೇಳಿದರು.
ಈ ಸಂದರ್ಭದಲ್ಲಿ ಪಕ್ಷದ ಹಿರಿಯ ಮುಖಂಡ ಆರ್.ಟಿ. ಗೋಪಾಲ್, ಹೊಸನಗರ ತಾಲೂಕು ಬಿಜೆಪಿ ಉಪಾಧ್ಯಕ್ಷ ಮೆಣಸೆ ಆನಂದ್, ಕೆರೆಹಳ್ಳಿ ಹೋಬಳಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸುಂದರೇಶ್, ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ್, ಸ್ಥಳೀಯ ಮುಖಂಡರಾದ ಕಲ್ಲಿ ಯೋಗೇಂದ್ರಪ್ಪ, ಸುರೇಶ್, ಲೋಕೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…
ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…
ಮನೆಯಲ್ಲಿ ಒಬ್ಬರೇ ಇದ್ದ ಮಹಿಳೆ ಮೇಲೆ ಹಲ್ಲೆ; ಬಂಗಾರದ ಸರ ಕಿತ್ತುಕೊಂಡು ದುಷ್ಕರ್ಮಿ ಪರಾರಿ A woman was allegedly…
30 ವರ್ಷ 8 ತಿಂಗಳ ಸಾರ್ಥಕ ಸೇವೆಗೆ ವಿರಾಮ: ಶಿಕ್ಷಕಿ ಅಂಬಿಕಾ ಸಿ. ಅವರಿಗೆ ಆತ್ಮೀಯ ಬೀಳ್ಕೊಡುಗೆ Teacher Ambika…
ಹುಂಚ ಹೋಬಳಿ ಕಾಂಗ್ರೆಸ್ OBC ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ Ramesh H.B. has been appointed as the…
ರಿಪ್ಪನ್‌ಪೇಟೆ, ಹರತಾಳು, ಗರ್ತಿಕೆರೆಯಲ್ಲಿ ರಾಯರ 355ನೇ ಆರಾಧನೆ; ಹರಿದು ಬಂದ ಭಕ್ತ ಸಾಗರ Thousands of devotees participated in…