ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿ ವಿತರಣೆ: ಸಾರ್ಥಕ ಹುಟ್ಟುಹಬ್ಬ ಆಚರಿಸಿಕೊಂಡ ಹರ್ಷಿತಾ ಅನಿಲ್

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿ ವಿತರಣೆ: ಸಾರ್ಥಕ ಹುಟ್ಟುಹಬ್ಬ ಆಚರಿಸಿಕೊಂಡ ಹರ್ಷಿತಾ ಅನಿಲ್

Harshitha Anil celebrated her birthday by distributing exam pads, pens, and sweets to 93 students of two government schools in Ripponpete, setting an inspiring example of social responsibility.

​ರಿಪ್ಪನ್‌ಪೇಟೆ (ಜುಲೈ 23): ಹುಟ್ಟುಹಬ್ಬವನ್ನು ಕೇವಲ ವೈಯಕ್ತಿಕ ಸಂಭ್ರಮಾಚರಣೆಗೆ ಸೀಮಿತಗೊಳಿಸದೆ, ಸಮಾಜಮುಖಿ ಕಾರ್ಯಗಳ ಮೂಲಕ ಆಚರಿಸುವವರ ಸಂಖ್ಯೆ ವಿರಳ. ಇದಕ್ಕೆ ಅತ್ಯುತ್ತಮ ಉದಾಹರಣೆಯಾಗಿ ರಿಪ್ಪನ್‌ಪೇಟೆಯ ಹರ್ಷಿತಾ ಅನಿಲ್ ಅವರು ತಮ್ಮ ಜನ್ಮದಿನದಂದು ಎರಡು ಸರ್ಕಾರಿ ಶಾಲೆಗಳ ಮಕ್ಕಳಿಗೆ ಶೈಕ್ಷಣಿಕ ಸಾಮಗ್ರಿಗಳನ್ನು ವಿತರಿಸುವ ಮೂಲಕ ಮಾದರಿಯಾಗಿದ್ದಾರೆ.

​ಪಟ್ಟಣದ ಡಿ-ಗ್ರೂಪ್ ನೌಕರರಾದ ದಿನೇಶ್ ಮತ್ತು ಶೈಲಾ ದಂಪತಿಯ ಪ್ರಥಮ ಪುತ್ರಿ ಹರ್ಷಿತಾ ಅನಿಲ್ ಅವರು ಜುಲೈ 23ರಂದು ತಮ್ಮ ಹುಟ್ಟುಹಬ್ಬದ ಪ್ರಯುಕ್ತ ತಾವು ಅಕ್ಷರ ಕಲಿತ ಗವಟೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಬ್ರಹ್ಮೇಶ್ವರದ ಪುಣಜೆ ಸರ್ಕಾರಿ ಶಾಲೆಗೆ ಭೇಟಿ ನೀಡಿ ​ಈ ಎರಡೂ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಒಟ್ಟು 93 ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ಯಾಡ್ (Exam Pad), ಪೆನ್ ಹಾಗೂ ಸಿಹಿಯನ್ನು ವಿತರಿಸುವ ಮೂಲಕ ತಮ್ಮ ಜನ್ಮದಿನದ ಸಂತಸವನ್ನು ಎಳೆಯರೊಂದಿಗೆ ಹಂಚಿಕೊಂಡರು.

​ತಾವು ಹುಟ್ಟಿ ಬೆಳೆದ ಹಾಗೂ ನಂಟು ಹೊಂದಿರುವ ಎರಡೂ ಗ್ರಾಮಗಳ ಸರ್ಕಾರಿ ಶಾಲೆಗಳ ಮಕ್ಕಳಿಗೆ ನೆರವಾಗುವ ಮೂಲಕ ಹರ್ಷಿತಾ ಮತ್ತು ಅನಿಲ್ ದಂಪತಿ ಸಮಾಜಕ್ಕೆ ಉತ್ತಮ ಸಂದೇಶ ಸಾರಿದ್ದಾರೆ.

​ಈ ಸಂದರ್ಭದಲ್ಲಿ ಎರಡೂ ಶಾಲೆಗಳ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಹರ್ಷಿತಾ ಅನಿಲ್ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಿ, ಅವರ ಈ ಉದಾತ್ತ ಕಾರ್ಯವನ್ನು ಮುಕ್ತಕಂಠದಿಂದ ಶ್ಲಾಘಿಸಿದರು.

​ಈ ಅರ್ಥಪೂರ್ಣ ಕಾರ್ಯಕ್ರಮದಲ್ಲಿ ಹರ್ಷಿತಾ ಅವರ ಪೋಷಕರು, ಪತಿ ಅನಿಲ್ ಹಾಗೂ ಎರಡೂ ಶಾಲೆಗಳ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…

8 hours ago

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…

10 hours ago

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…

11 hours ago

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…

11 hours ago

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…

12 hours ago

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…

1 day ago