ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚನ್ನಮ್ಮ ನಿಧನ

Former Prime Minister H.D. Deve Gowda’s wife Chennamma passes away at 85 in Bengaluru after prolonged illness. JDS leaders and family mourn her demise.

ಬೆಂಗಳೂರು: ಭಾರತದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಚನ್ನಮ್ಮ (85) ಅವರು ಶನಿವಾರ ನಿಧನರಾಗಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಜುಲೈ 15ರಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

ಚನ್ನಮ್ಮ ಅವರ ಅಗಲಿಕೆ ದೇವೇಗೌಡರ ಕುಟುಂಬಕ್ಕೆ ಮಾತ್ರವಲ್ಲದೆ, ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೂ ತೀವ್ರ ಆಘಾತವನ್ನುಂಟು ಮಾಡಿದೆ. ದೇವೇಗೌಡರ ದೀರ್ಘ ರಾಜಕೀಯ ಜೀವನದಲ್ಲಿ ಸದಾ ಬೆನ್ನೆಲುಬಾಗಿ ನಿಂತಿದ್ದ ಅವರು, ಕುಟುಂಬದ ಸಂಪೂರ್ಣ ಜವಾಬ್ದಾರಿಯನ್ನು ಹೊತ್ತು ಸಂಸಾರವನ್ನು ಸಮರ್ಥವಾಗಿ ಮುನ್ನಡೆಸಿದ್ದರು.

ಹಾಸನ ಜಿಲ್ಲೆಯ ಮುತ್ತಿಗೆ ಹಿರೇಹಳ್ಳಿ ಗ್ರಾಮದ ಮೂಲದ ಚನ್ನಮ್ಮ ಅವರು 1954ರ ಮೇ 25ರಂದು ಹೆಚ್.ಡಿ. ದೇವೇಗೌಡ ಅವರೊಂದಿಗೆ ವಿವಾಹವಾಗಿದ್ದರು. ದೇವೇಗೌಡರು ರಾಜಕೀಯ ಜೀವನದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದರೂ, ಕುಟುಂಬದ ಜವಾಬ್ದಾರಿಯನ್ನು ಸಂಪೂರ್ಣವಾಗಿ ನಿರ್ವಹಿಸಿ ಮಕ್ಕಳನ್ನು ಉತ್ತಮ ಶಿಕ್ಷಣ ಹಾಗೂ ಶಿಸ್ತಿನೊಂದಿಗೆ ಬೆಳೆಸುವಲ್ಲಿ ಚನ್ನಮ್ಮ ಅವರ ಪಾತ್ರ ಮಹತ್ವದ್ದಾಗಿತ್ತು.

ಅವರಿಗೆ ಹೆಚ್.ಡಿ. ರೇವಣ್ಣ, ಹೆಚ್.ಡಿ. ಬಾಲಕೃಷ್ಣ, ಹೆಚ್.ಡಿ. ರಮೇಶ್ ಗೌಡ ಹಾಗೂ ಹೆಚ್.ಡಿ. ಕುಮಾರಸ್ವಾಮಿ ಸೇರಿದಂತೆ ನಾಲ್ವರು ಪುತ್ರರು ಮತ್ತು ಶೈಲಜಾ, ಅನಸೂಯಾ ಎಂಬ ಇಬ್ಬರು ಪುತ್ರಿಯರು ಇದ್ದಾರೆ. ದೇವೇಗೌಡರ ರಾಜಕೀಯ ಯಶಸ್ಸಿನ ಹಿಂದೆ ಚನ್ನಮ್ಮ ಅವರ ತ್ಯಾಗ, ಸಹಕಾರ ಹಾಗೂ ಪರಿಶ್ರಮದ ದೊಡ್ಡ ಪಾತ್ರವಿದೆ ಎಂದು ಕುಟುಂಬದ ಆಪ್ತರು ಸ್ಮರಿಸಿದ್ದಾರೆ.

ಸಂತಾಪ

ಚನ್ನಮ್ಮ ಅವರ ನಿಧನಕ್ಕೆ ಶಾಸಕಿ ಶಾರದಾ ಪೂರ್ಯನಾಯ್ಕ್, ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಆರ್.ಎ. ಚಾಬುಸಾಬ್, ಜೆಡಿಎಸ್ ಹೊಸನಗರ ತಾಲ್ಲೂಕು ಅಧ್ಯಕ್ಷ ವರ್ತೇಶ್ ಎನ್., ಮುಖಂಡರಾದ ಎಂ.ವಿ. ಜಯರಾಮ್, ವರದರಾಜ್ ಜಿ.ಎಸ್. ಸೇರಿದಂತೆ ಹಲವಾರು ಗಣ್ಯರು ಸಂತಾಪ ಸೂಚಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಮಸ್ಕಾರ, ನಾನು ರಫಿ ರಿಪ್ಪನ್‌ಪೇಟೆ. ​'ಪೋಸ್ಟ್‌ಮ್ಯಾನ್ ನ್ಯೂಸ್' ಮಾಧ್ಯಮದ ಹಿಂದಿರುವ ಓರ್ವ ಅಪ್ಪಟ ಸುದ್ದಿಪ್ರೇಮಿ ಹಾಗೂ ಪತ್ರಕರ್ತ. "ನಮ್ಮೂರ ಸುದ್ದಿಗಳು ಜಗತ್ತಿಗೆ ತಲುಪಬೇಕು" ಎಂಬ ಆರು ವರ್ಷಗಳ ಕನಸಿನ ಕೂಸೇ ಈ ನಮ್ಮ ಪೋಸ್ಟ್‌ಮ್ಯಾನ್ ನ್ಯೂಸ್. ​ಸ್ಥಳೀಯ ಪತ್ರಿಕೆಗಳಿಂದ ಹಿಡಿದು ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೂ ಮಾಧ್ಯಮದ ನಾನಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದು. ಆದರೆ, ಈ ಪಯಣದಲ್ಲಿ ನನಗೊಂದು ಕೊರತೆ ಸದಾ ಕಾಡುತ್ತಿತ್ತು; ಅದೇನೆಂದರೆ, 'ನಿಜವಾದ ಸ್ಥಳೀಯ ಧ್ವನಿಗೆ ಅಲ್ಲಿ ಸೂಕ್ತ ವೇದಿಕೆ ಇರಲಿಲ್ಲ'. ಆ ಶೂನ್ಯವನ್ನು ತುಂಬಲು ಹುಟ್ಟಿಕೊಂಡ ಪರ್ಯಾಯ ವೇದಿಕೆಯೇ “ಪೋಸ್ಟ್‌ಮ್ಯಾನ್ ನ್ಯೂಸ್.” ​ಇಲ್ಲಿ 'ಸುದ್ದಿ' ಎಂದರೆ ಕೇವಲ ಸುದ್ದಿ ಮಾತ್ರ. ಇದು ಯಾವ ವ್ಯಕ್ತಿ ಅಥವಾ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಅತ್ಯಂತ ಸ್ಪಷ್ಟ: "ಸುದ್ದಿಯನ್ನು ಪ್ರಾಮಾಣಿಕವಾಗಿ ಹೇಳಬೇಕು, ತೀರ್ಪು ಕೊಡುವ ಕೆಲಸ ನಮಗಲ್ಲ." ಕೆಲವೊಮ್ಮೆ ನಮ್ಮ ವರದಿಗಳಿಗೆ ಬರುವ ಪ್ರತಿಕ್ರಿಯೆಗಳು ಬೇರೆಯದೇ ಬಣ್ಣ ಪಡೆಯಬಹುದು, ಆದರೆ ಅದಕ್ಕೆ ನನ್ನ ಏಕೈಕ ಉತ್ತರ ಕೇವಲ ನನ್ನ ಕೆಲಸದ ಮೂಲಕ ಮಾತ್ರ. ​'ಪೋಸ್ಟ್‌ಮ್ಯಾನ್ ನ್ಯೂಸ್' ಇಂದು ಕೇವಲ ಒಂದು ಸುದ್ದಿ ಪುಟವಾಗಿ ಉಳಿದಿಲ್ಲ, ಅದೊಂದು ಜಾಗೃತಿಯ ಚಳವಳಿಯಾಗಿ ರೂಪುಗೊಳ್ಳುತ್ತಿದೆ. ಕೇವಲ ವರದಿ ಮಾಡುವುದಷ್ಟೇ ನಮ್ಮ ಉದ್ದೇಶವಲ್ಲ; ನಮ್ಮೂರಿನ ಘಟನೆಗಳು, ಎಲೆಮರೆಯ ಕಾಯಿಯಂತಿರುವ ಪ್ರತಿಭೆಗಳು, ಜ್ವಲಂತ ಸಮಸ್ಯೆಗಳು ಮತ್ತು ಸಾಧನೆಗಳನ್ನು ಹೊರಲೋಕಕ್ಕೆ ಪರಿಚಯಿಸುವ 'ಸೇತುವೆ'ಯಾಗಬೇಕೆಂಬುದು ನಮ್ಮ ಹೆಬ್ಬಯಕೆ. ಹಣ ಪಡೆದು, ಕಾಸಿಗಾಗಿ ಸುದ್ದಿ ಮಾಡುವ ಅಭ್ಯಾಸವೂ ನಮಗಿಲ್ಲ, ಆ ಹವ್ಯಾಸವೂ ನಮಗಿಲ್ಲ. ಸತ್ಯ ಮತ್ತು ನೈಜತೆಯೇ ನಮ್ಮ ಬಂಡವಾಳ. ​ನಮ್ಮ ಅಂತಿಮ ಗುರಿ ಒಂದೇ — "ಸಣ್ಣ ಊರುಗಳ ಸತ್ಯ ಕಥೆಗಳು, ಅತಿ ದೊಡ್ಡ ಮಟ್ಟದಲ್ಲಿ ಜಗತ್ತಿನ ಕಿವಿಗೆ ತಲುಪಬೇಕು." ​ತಮ್ಮ ಪ್ರೀತಿ ಮತ್ತು ಬೆಂಬಲ ಸದಾ ಹೀಗೆಯೇ ಇರಲಿ. ​ಸ್ನೇಹಪೂರ್ವಕವಾಗಿ, ರಫಿ ರಿಪ್ಪನ್‌ಪೇಟೆ ಸಂಪಾದಕರು, ಪೋಸ್ಟ್‌ಮ್ಯಾನ್ ನ್ಯೂಸ್ 🌐 [www.postmannewskannada.com]

Recent Posts

ಅತಿ ವೇಗದ ಬೈಕ್ ಚಾಲನೆಯಿಂದ ಪಾದಚಾರಿ ಸಾವು : ಬೈಕ್ ಸವಾರನಿಗೆ 1 ವರ್ಷಕ್ಕೂ ಹೆಚ್ಚು ಜೈಲು ಶಿಕ್ಷೆ

ಅತಿ ವೇಗದ ಬೈಕ್ ಚಾಲನೆಯಿಂದ ಪಾದಚಾರಿ ಸಾವು : ಬೈಕ್ ಸವಾರನಿಗೆ 1 ವರ್ಷಕ್ಕೂ ಹೆಚ್ಚು ಜೈಲು ಶಿಕ್ಷೆ Bhadravati…

6 hours ago

ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆಗೆ ಸಾವಿರಾರು ಅಭ್ಯರ್ಥಿಗಳು –  ವಸತಿ ಕೊರತೆಯಿಂದ ಬಸ್ ನಿಲ್ದಾಣದಲ್ಲೇ ವಿಶ್ರಾಂತಿ

ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆಗೆ ಸಾವಿರಾರು ಅಭ್ಯರ್ಥಿಗಳು –  ವಸತಿ ಕೊರತೆಯಿಂದ ಬಸ್ ನಿಲ್ದಾಣದಲ್ಲೇ ವಿಶ್ರಾಂತಿ KSRP Police Constable written…

7 hours ago

ಜಿಂಕೆ ಮಾಂಸ ದಾಸ್ತಾನು ಆರೋಪ: ಇಬ್ಬರ ಬಂಧನ

ಜಿಂಕೆ ಮಾಂಸ ದಾಸ್ತಾನು ಆರೋಪ: ಇಬ್ಬರ ಬಂಧನ Forest officials in Shivamogga taluk arrested two persons for…

7 hours ago

ಕಸ್ತೂರಿರಂಗನ್ ವರದಿ ಸಂವಾದ: ಮಲೆನಾಡಿನ ರೈತರಿಗೆ ಸಿಎಂ ಡಿ.ಕೆ. ಶಿವಕುಮಾರ್ ನೀಡಿದ ಭರವಸೆಗಳೇನು?

ಮಲೆನಾಡಿನ ರೈತರ ಜಮೀನಿಗೆ ಕೈಹಾಕಬೇಡಿ: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ ಕಸ್ತೂರಿರಂಗನ್ ವರದಿ ಸಂವಾದ: ಮಲೆನಾಡಿನ ರೈತರಿಗೆ ಸಿಎಂ ಡಿ.ಕೆ.…

1 day ago

ವಿಶ್ವಕರ್ಮ ಜಯಂತಿ ಕೌಶಲ, ಶ್ರಮ ಹಾಗೂ ಸೃಜನಶೀಲತೆಯ ಪ್ರತೀಕ: ಗಣೇಶ್ ಆಚಾರ್ಯ

ವಿಶ್ವಕರ್ಮ ಜಯಂತಿ ಕೌಶಲ, ಶ್ರಮ ಹಾಗೂ ಸೃಜನಶೀಲತೆಯ ಪ್ರತೀಕ: ಗಣೇಶ್ ಆಚಾರ್ಯ Vishwakarma Jayanti was celebrated by the…

1 day ago

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ A fire caused by a…

2 days ago