Categories: crime news

HOSANAGARA | ಪಟಗುಪ್ಪ ಸೇತುವೆ ಬಳಿ ಗೋ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು: ನಾಲ್ವರು ಆರೋಪಿಗಳ ಬಂಧನ

HOSANAGARA | ಪಟಗುಪ್ಪ ಸೇತುವೆ ಬಳಿ ಹಸುವಿನ ಕರು ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು: ನಾಲ್ವರು ಆರೋಪಿಗಳ ಬಂಧನ

Hosanagara Police in Shivamogga district arrested four accused in connection with the illegal slaughter of a calf near Hosakoppa. The accused have been produced before the court.

ಹೊಸನಗರ : ಶಿವಮೊಗ್ಗ ಜಿಲ್ಲೆಯ ಹೊಸನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಹಸುವಿನ ಕರು ಹತ್ಯೆ ಪ್ರಕರಣವನ್ನು ಹೊಸನಗರ ಪೊಲೀಸರು ಯಶಸ್ವಿಯಾಗಿ ಭೇದಿಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಅಕ್ಕಿ ಆಲೂರು ಗ್ರಾಮದ ಮಹಮದ್ ಸಲೀಂ ಬಾಳೂರ್ (34)  ಮಕಬುಲ್ ಅಹ್ಮದ್ ಬಡಿಗೇರ (22)  ಸುಲೇಮಾನ್ ಕೋಲಾರಿ (26) –ಹಾಗೂ ಮಲ್ಲಿಕ್ ರಿಹಾನ್ (25) ಎಂದು ಗುರುತಿಸಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ಜೂನ್ 19, 2026ರಂದು ಹೊಸನಗರ ತಾಲ್ಲೂಕಿನ ಹೊಸಕೊಪ್ಪ ಗ್ರಾಮದ ಪಟಗುಪ್ಪ ಸೇತುವೆ ಸಮೀಪದ ಶರಾವತಿ ಹಿನ್ನೀರಿನ ಪ್ರದೇಶದಲ್ಲಿ ದುಷ್ಕರ್ಮಿಗಳು ಹಸುವಿನ ಕರುವನ್ನು ಹತ್ಯೆ ಮಾಡಿ ಮಾಂಸ ಮಾರಾಟ ಮಾಡುವ ಉದ್ದೇಶದಿಂದ ಸ್ಥಳದಿಂದ ಪರಾರಿಯಾಗಿದ್ದರು. ಈ ಸಂಬಂಧ ಹೊಸನಗರ ಪೊಲೀಸ್ ಠಾಣೆಯ ಸಿಪಿಸಿ ಗೋಪಾಲಕೃಷ್ಣ ನೀಡಿದ ದೂರಿನ ಮೇರೆಗೆ ಗುನ್ನೆ ಸಂಖ್ಯೆ 67/2026 ದಾಖಲಿಸಿ, ಕರ್ನಾಟಕ ಜಾನುವಾರು ಹತ್ಯೆ ನಿಷೇಧ ಮತ್ತು ಸಂರಕ್ಷಣಾ ಕಾಯ್ದೆ–2020ರ ಕಲಂ 4, 7, 12 ಹಾಗೂ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಕಲಂ 11(1)(ಡಿ) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.

ಜಿಲ್ಲಾ ಪೊಲೀಸ್ ಅಧೀಕ್ಷಕರು, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಹಾಗೂ ತೀರ್ಥಹಳ್ಳಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರ ಮಾರ್ಗದರ್ಶನದಲ್ಲಿ, ಹೊಸನಗರ ವೃತ್ತದ ಪೊಲೀಸ್ ವೃತ್ತ ನಿರೀಕ್ಷಕ ಎಂ.ಐ. ಗೌಡಪ್ಪಗೌಡ್ರ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿ ಕಾರ್ಯಾಚರಣೆ ನಡೆಸಲಾಯಿತು.

ಈ ಕಾರ್ಯಾಚರಣೆಯಲ್ಲಿ ಹೊಸನಗರ ಠಾಣೆಯ ಪಿಎಸ್‌ಐ ಶಂಕರಗೌಡ ಪಾಟೀಲ್, ರಿಪ್ಪನ್‌ಪೇಟೆ ಠಾಣೆಯ ಪಿಎಸ್‌ಐ ರಾಜುರೆಡ್ಡಿ, ನಗರ ಠಾಣೆಯ ಪಿಎಸ್‌ಐ ಶಿವಾನಂದ ವೈ.ಕೆ., ಪೊಲೀಸ್ ಸಿಬ್ಬಂದಿ ಹಾಗೂ ಶಿವಮೊಗ್ಗ ಎಎನ್‌ಸಿ ವಿಭಾಗದ ಅಧಿಕಾರಿಗಳ ಸಹಕಾರದೊಂದಿಗೆ ಜುಲೈ 4ರಂದು ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾದರು.

ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಹೊಸನಗರ ಪೊಲೀಸರು ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಹೊಸನಗರ ಠಾಣೆಯ ಸಿಬ್ಬಂದಿಗಳಾದ ಕಿರಣ್ ಕುಮಾರ್ ಡಿ.ವೈ., ಶಿವಕುಮಾರನಾಯ್ಕ, ಮಾಯಪ್ಪ ಗೋಕಾವಿ, ರವಿಚಂದ್ರ, ಸುನಿಲ್, ಗೋಪಾಲಕೃಷ್ಣ , ಮಧುಸೂಧನ್ , ಜಗದೀಶ್ ಹಾಗೂ ಶಿವಮೊಗ್ಗ ಎಎನ್‌ಸಿ ವಿಭಾಗದ ಗುರುರಾಜ ಮತ್ತು ಇಂದೇಶ ಅವರು ಭಾಗವಹಿಸಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…

8 hours ago

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ​ಮಾನವೀಯತೆಯೆಂಬುದು ಕೇವಲ…

8 hours ago

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…

8 hours ago

ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ. ಭಾನುಪ್ರಕಾಶ್ ಕರೆ

ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ.ಭಾನುಪ್ರಕಾಶ್ ಕರೆ Thirthahalli DySP Dr. Bhanuprakash…

10 hours ago

ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ

ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ ಶತಮಾನೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ :…

14 hours ago

ಗಣೇಶೋತ್ಸವ ಹಿನ್ನೆಲೆ: ಸೆ.4ರಂದು ರಿಪ್ಪನ್‌ಪೇಟೆಯಲ್ಲಿ ಎಎಸ್‌ಪಿ ಭಾನುಪ್ರಕಾಶ್ ನೇತೃತ್ವದಲ್ಲಿ ಶಾಂತಿ ಸಭೆ

ಗಣೇಶೋತ್ಸವ ಹಿನ್ನೆಲೆ: ಸೆ.4ರಂದು ರಿಪ್ಪನ್‌ಪೇಟೆಯಲ್ಲಿ ಎಎಸ್‌ಪಿ ಭಾನುಪ್ರಕಾಶ್ ನೇತೃತ್ವದಲ್ಲಿ ಶಾಂತಿ ಸಭೆ A peace meeting for Ganesh festival…

2 days ago