w
Headlines
Home » ನೀಟ್ ಅಕ್ರಮ, ರಾಹುಲ್ ಗಾಂಧಿ ಬಂಧನ ಖಂಡಿಸಿ ಹೊಸನಗರದಲ್ಲಿ ಕಾಂಗ್ರೆಸ್ ಪ್ರತಿಭಟನೆ; ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ

ನೀಟ್ ಅಕ್ರಮ, ರಾಹುಲ್ ಗಾಂಧಿ ಬಂಧನ ಖಂಡಿಸಿ ಹೊಸನಗರದಲ್ಲಿ ಕಾಂಗ್ರೆಸ್ ಪ್ರತಿಭಟನೆ; ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ

Screenshot 2026 07 23 18 24 46 722 com.picsart.studio edit

ನೀಟ್ ಅಕ್ರಮ, ರಾಹುಲ್ ಗಾಂಧಿ ಬಂಧನ ಖಂಡಿಸಿ ಹೊಸನಗರದಲ್ಲಿ ಕಾಂಗ್ರೆಸ್ ಪ್ರತಿಭಟನೆ; ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ

Hosanagara Block Congress staged a protest against the alleged NEET exam scam and the arrest of Rahul Gandhi, demanding a fair investigation and condemning police action on protesting students.

ಹೊಸನಗರ: ನೀಟ್ ಪರೀಕ್ಷೆ ಅಕ್ರಮ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬಂಧನವನ್ನು ಖಂಡಿಸಿ ಹೊಸನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.

ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ಚಂದ್ರಮೋಳಿ ಅವರ ನೇತೃತ್ವದಲ್ಲಿ ಕೋರ್ಟ್ ಸರ್ಕಲ್ ಬಳಿ ರಸ್ತೆ ತಡೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಪ್ರತಿಭಟನಾಕಾರರು ಟೈರ್‌ಗೆ ಬೆಂಕಿ ಹಚ್ಚಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಬಿ.ಜಿ. ಚಂದ್ರಮೋಳಿ ಅವರು, “ನೀಟ್ ಪರೀಕ್ಷೆ ಅಕ್ರಮದಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಸಂಕಷ್ಟಕ್ಕೀಡಾಗಿದೆ. ಪ್ರಕರಣದ ಕುರಿತು ಕೇಂದ್ರ ಸರ್ಕಾರ ತಕ್ಷಣ ಸಮಗ್ರ ಹಾಗೂ ಪಾರದರ್ಶಕ ತನಿಖೆ ನಡೆಸಬೇಕು. ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ನಡೆಸುವ ಹಕ್ಕನ್ನು ಹತ್ತಿಕ್ಕುವ ಉದ್ದೇಶದಿಂದ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ನಡೆಸಿರುವುದು ಹಾಗೂ ರಾಹುಲ್ ಗಾಂಧಿಯನ್ನು ಬಂಧಿಸಿರುವುದು ಖಂಡನೀಯ” ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.