ನೀಟ್ ಅಕ್ರಮ, ರಾಹುಲ್ ಗಾಂಧಿ ಬಂಧನ ಖಂಡಿಸಿ ಹೊಸನಗರದಲ್ಲಿ ಕಾಂಗ್ರೆಸ್ ಪ್ರತಿಭಟನೆ; ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ
Hosanagara Block Congress staged a protest against the alleged NEET exam scam and the arrest of Rahul Gandhi, demanding a fair investigation and condemning police action on protesting students.
ಹೊಸನಗರ: ನೀಟ್ ಪರೀಕ್ಷೆ ಅಕ್ರಮ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬಂಧನವನ್ನು ಖಂಡಿಸಿ ಹೊಸನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.
ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ಚಂದ್ರಮೋಳಿ ಅವರ ನೇತೃತ್ವದಲ್ಲಿ ಕೋರ್ಟ್ ಸರ್ಕಲ್ ಬಳಿ ರಸ್ತೆ ತಡೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಪ್ರತಿಭಟನಾಕಾರರು ಟೈರ್ಗೆ ಬೆಂಕಿ ಹಚ್ಚಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಬಿ.ಜಿ. ಚಂದ್ರಮೋಳಿ ಅವರು, “ನೀಟ್ ಪರೀಕ್ಷೆ ಅಕ್ರಮದಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಸಂಕಷ್ಟಕ್ಕೀಡಾಗಿದೆ. ಪ್ರಕರಣದ ಕುರಿತು ಕೇಂದ್ರ ಸರ್ಕಾರ ತಕ್ಷಣ ಸಮಗ್ರ ಹಾಗೂ ಪಾರದರ್ಶಕ ತನಿಖೆ ನಡೆಸಬೇಕು. ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ನಡೆಸುವ ಹಕ್ಕನ್ನು ಹತ್ತಿಕ್ಕುವ ಉದ್ದೇಶದಿಂದ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ನಡೆಸಿರುವುದು ಹಾಗೂ ರಾಹುಲ್ ಗಾಂಧಿಯನ್ನು ಬಂಧಿಸಿರುವುದು ಖಂಡನೀಯ” ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್