Headlines

ಹೊಸನಗರ ತಾಲೂಕಿನಲ್ಲಿ ಗಾಳಿ–ಮಳೆಯ ಅಬ್ಬರಕ್ಕೆ 170ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿ, ಹಲವೆಡೆ ವಿದ್ಯುತ್ ವ್ಯತ್ಯಯ

ಹೊಸನಗರ ತಾಲೂಕಿನಲ್ಲಿ ಗಾಳಿ–ಮಳೆಯ ಅಬ್ಬರಕ್ಕೆ 170ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿ, ಹಲವೆಡೆ ವಿದ್ಯುತ್ ವ್ಯತ್ಯಯ

Over 170 electricity poles collapsed across Hosanagara Taluk following heavy rain and strong winds, causing widespread power outages. Restoration work is underway.

ಹೊಸನಗರ, ಜುಲೈ 6: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಬಿರುಗಾಳಿಯ ಪರಿಣಾಮ ಹೊಸನಗರ ತಾಲೂಕಿನಾದ್ಯಂತ ಭಾರೀ ಹಾನಿ ಸಂಭವಿಸಿದೆ.

ತಾಲೂಕಿನಲ್ಲಿ 170ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿರುವುದರಿಂದ ಅನೇಕ ಗ್ರಾಮಗಳು ವಿದ್ಯುತ್ ಸಂಪರ್ಕದಿಂದ ವಂಚಿತವಾಗಿದ್ದು, ಸಾರ್ವಜನಿಕರು ಕತ್ತಲಲ್ಲೇ ದಿನ ಕಳೆಯುವಂತಾಗಿದೆ.

ರಸ್ತೆ ಬದಿಯಲ್ಲಿದ್ದ ಹಲವು ಭಾರೀ ಮರಗಳು ವಿದ್ಯುತ್ ಕಂಬಗಳ ಮೇಲೆ ಉರುಳಿ ಬಿದ್ದ ಪರಿಣಾಮ ಕಂಬಗಳು ಮುರಿದು ಬಿದ್ದಿವೆ. ಪಟ್ಟಣ ಸೇರಿದಂತೆ ವಿವಿಧ ಗ್ರಾಮೀಣ ಭಾಗಗಳಲ್ಲಿ ವಿದ್ಯುತ್ ಸರಬರಾಜು ಸಂಪೂರ್ಣ ಸ್ಥಗಿತಗೊಂಡಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ಮೆಸ್ಕಾಂ ಅಧಿಕಾರಿಗಳು ಹಾಗೂ ಸಿಬ್ಬಂದಿ ನಿರಂತರವಾಗಿ ಹಾನಿಗೊಳಗಾದ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಮುರಿದು ಬಿದ್ದ ಕಂಬಗಳನ್ನು ತೆರವುಗೊಳಿಸಿ ಹೊಸ ಕಂಬಗಳನ್ನು ಅಳವಡಿಸುವ ಕಾರ್ಯವನ್ನು ಯುದ್ಧೋಪಾದಿಯಲ್ಲಿ ನಡೆಸುತ್ತಿದ್ದಾರೆ. ಅಗತ್ಯವಿರುವ ಕಡೆಗಳಲ್ಲಿ ತಾತ್ಕಾಲಿಕ ದುರಸ್ತಿ ಕಾರ್ಯಗಳನ್ನೂ ಕೈಗೊಳ್ಳಲಾಗಿದೆ.

ಹವಾಮಾನ ಪರಿಸ್ಥಿತಿ ಅನುಕೂಲಕರವಾದ ತಕ್ಷಣ ಎಲ್ಲಾ ಪ್ರದೇಶಗಳಿಗೂ ಹಂತ ಹಂತವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು ಎಂದು ಮೆಸ್ಕಾಂ ಇಲಾಖೆ ತಿಳಿಸಿದೆ. ದುರಸ್ತಿ ಕಾರ್ಯಕ್ಕೆ ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಲಾಗಿದೆ.

ಅಧಿಕಾರಿಗಳು ಸಾರ್ವಜನಿಕರಿಗೆ ಮುರಿದು ಬಿದ್ದ ವಿದ್ಯುತ್ ತಂತಿಗಳು, ಕಂಬಗಳು ಹಾಗೂ ಅವುಗಳ ಮೇಲೆ ಬಿದ್ದಿರುವ ಮರಗಳ ಸಮೀಪ ಹೋಗದಂತೆ ಎಚ್ಚರಿಕೆ ನೀಡಿದ್ದಾರೆ. ಯಾವುದೇ ತುರ್ತು ಪರಿಸ್ಥಿತಿ ಅಥವಾ ವಿದ್ಯುತ್ ಸಂಬಂಧಿತ ಅಪಾಯ ಕಂಡುಬಂದರೆ ತಕ್ಷಣ ಇಲಾಖೆಯ ಸಿಬ್ಬಂದಿಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.

About The Author

Exit mobile version