Headlines

ಭಾರಿ ಮಳೆ : ಹೊಸನಗರ ತಾಲೂಕಿನ ಎಲ್ಲಾ ಶಾಲೆ-ಕಾಲೇಜುಗಳಿಗೆ ನಾಳೆ (08-07-2026) ರಜೆ ಘೋಷಣೆ

Screenshot 2026 07 07 20 51 10 254 photoeditor.layout.collagemaker edit

ಭಾರಿ ಮಳೆ : ಹೊಸನಗರ ತಾಲೂಕಿನ ಎಲ್ಲಾ ಶಾಲೆ-ಕಾಲೇಜುಗಳಿಗೆ ನಾಳೆ (08-07-2026) ರಜೆ ಘೋಷಣೆ

Heavy rainfall continues in Hosanagara Taluk. The Tahsildar has declared a holiday for all schools and colleges on July 8, 2026, as a precautionary measure due to adverse weather conditions.

ಹೊಸನಗರ ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಬಿರುಗಾಳಿಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ (ಜುಲೈ 8, ಬುಧವಾರ) ಎಲ್ಲಾ ಶಾಲೆ, ಕಾಲೇಜು ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ.

ಹೊಸನಗರ ತಾಲೂಕಿನಲ್ಲಿ ಭಾರಿ ಮಳೆಯೊಂದಿಗೆ ಗಾಳಿ ತೀವ್ರವಾಗಿ ಬೀಸುತ್ತಿರುವ ಕಾರಣ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತು ಹೊಸನಗರ ತಹಶೀಲ್ದಾರ್ ಭರತ್ ರಾಜ್ ಆದೇಶ ಹೊರಡಿಸಿದ್ದಾರೆ.

ರಜೆ ಆದೇಶವು ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು, ಹಾಗೂ ಅಂಗನವಾಡಿ ಕೇಂದ್ರಗಳಿಗೆ ಅನ್ವಯವಾಗಲಿದೆ.

ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಪಾಲಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.