ಹೊಸನಗರದ 28 ವರ್ಷದ ಯುವಕ ನಾಪತ್ತೆ; ಸುಳಿವು ಸಿಕ್ಕರೆ ಪೊಲೀಸರಿಗೆ ಮಾಹಿತಿ ನೀಡಿ
Hosanagara Police have appealed to the public to help trace 28-year-old Tasinulla, who has been missing since July 25 from Church Road, Hosanagara in Shivamogga district.
ಶಿವಮೊಗ್ಗ, ಜು. 29: ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸನಗರ ಚರ್ಚ್ ರಸ್ತೆಯ ನಿವಾಸಿ ತಾಸಿನುಲ್ಲಾ (28) ಅವರು ಕಳೆದ ಜುಲೈ 25ರಿಂದ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾಪತ್ತೆಯಾಗಿರುವ ತಾಸಿನುಲ್ಲಾ ಅವರು ಸುಮಾರು 4.8 ಅಡಿ ಎತ್ತರ, ತೆಳುವಾದ ಮೈಕಟ್ಟು, ಕೋಲುಮುಖ ಹಾಗೂ ಗೋಧಿ ಮೈಬಣ್ಣ ಹೊಂದಿದ್ದಾರೆ. ಮನೆಯಿಂದ ಹೊರಡುವ ವೇಳೆ ಬಿಳಿ-ಕಪ್ಪು ಬಣ್ಣದ ಚೌಕಳಿಯ ತುಂಬು ತೋಳಿನ ಶರ್ಟ್ ಹಾಗೂ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಿದ್ದರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಅಥವಾ ಸುಳಿವು ದೊರೆತಲ್ಲಿ ಹೊಸನಗರ ಪೊಲೀಸ್ ಠಾಣೆ (ದೂ.ಸಂ.: 9480803337), ತೀರ್ಥಹಳ್ಳಿ ಪೊಲೀಸ್ ಠಾಣೆ (08181-220388) ಅಥವಾ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ (08182-261400 / 9480803364)ಗೆ ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…
ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…
ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…
ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…
ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…
ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…