ನೀರು ಕೇಳಿ ಮನೆಗೆ ನುಗ್ಗಿ ಮಾಂಗಲ್ಯ ಸರ ಕಳ್ಳತನ : ಆರೇ ಗಂಟೆಯಲ್ಲಿ ಖದೀಮರ ಹೆಡೆಮುರಿಕಟ್ಟಿದ ಪೊಲೀಸರು
Hosanagara Police solved a gold chain theft case within six hours by arresting two accused from Udupi and Mangaluru after a theft in Sonale village, Shivamogga district.
ಹೊಸನಗರ ತಾಲೂಕಿನ ಸೊನಲೆ ಗ್ರಾಮದಲ್ಲಿ ನಡೆದ ಸರಗಳ್ಳತನ ಪ್ರಕರಣವನ್ನು ಕೇವಲ ಆರು ಗಂಟೆಗಳ ಒಳಗೆ ಭೇದಿಸುವ ಮೂಲಕ ಹೊಸನಗರ ಪೊಲೀಸರು ‘ಮಿಂಚಿನ ಕಾರ್ಯಾಚರಣೆ’ ನಡೆಸಿದ್ದಾರೆ. ನೀರು ಕೇಳುವ ನೆಪದಲ್ಲಿ ಬಂದು ಸರ ಕದ್ದಿದ್ದ ಇಬ್ಬರು ಆರೋಪಿಗಳನ್ನು ಇದೀಗ ಕಂಬಿ ಹಿಂದೆ ತಳ್ಳಲಾಗಿದೆ.
ಮಂಗಳವಾರ ಬೆಳಿಗ್ಗೆ ಸುಮಾರು 7 ಗಂಟೆ ಸಮಯ. ಗಾಯತ್ರಿ ಎಂಬುವವರ ಮನೆಯ ಬಾಗಿಲು ಬಡಿದ ಇಬ್ಬರು ಅಪರಿಚಿತರು, ಕುಡಿಯಲು ನೀರು ಬೇಕೆಂದು ವಿನಂತಿಸಿದ್ದಾರೆ. ಮುಗ್ಧರಾಗಿ ನಂಬಿ ನೀರು ಕೊಡಲು ಹೋದ ಮಹಿಳೆಯ ಕುತ್ತಿಗೆಯಲ್ಲಿದ್ದ 13 ಗ್ರಾಂ ತೂಕದ ಚಿನ್ನದ ಸರವನ್ನು ಕ್ಷಣಾರ್ಧದಲ್ಲಿ ದೋಚಿದ ದುಷ್ಕರ್ಮಿಗಳು, ಬೈಕ್ ಏರಿ ಸ್ಥಳದಿಂದ ಪರಾರಿಯಾಗಿದ್ದಾರೆ.
ಘಟನೆ ನಡೆದ ತಕ್ಷಣ ಎಚ್ಚೆತ್ತ ಕುಟುಂಬಸ್ಥರು 112 ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಎಚ್ಚೆತ್ತ ಹೊಸನಗರ ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದಾರೆ.
ಸರ್ಕಲ್ ಇನ್ಸ್‌ಪೆಕ್ಟರ್ ಗೌಡಪ್ಪ ಗೌಡರ್ ಮತ್ತು ಸಬ್ ಇನ್ಸ್‌ಪೆಕ್ಟರ್ ಶಂಕರಗೌಡ ಪಾಟೀಲ್ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಯಿತು.
ಆರೋಪಿಗಳ ಪತ್ತೆಗೆ ಬಲೆ ಬೀಸಿದ ಪೊಲೀಸರು ಅವರು ಪರಾರಿಯಾದ ಮಾರ್ಗವನ್ನು ಬೆನ್ನಟ್ಟಿದ್ದಾರೆ. ತನಿಖೆಯ ಫಲವಾಗಿ, ಸೊನಲೆಯಿಂದ ಸುಮಾರು 7 ಕಿಲೋಮೀಟರ್ ದೂರದಲ್ಲಿರುವ ತಟ್ಟಿಕೆವಿ ಗ್ರಾಮದ ನೂತನವಾಗಿ ನಿರ್ಮಾಣವಾಗುತ್ತಿದ್ದ ಮನೆಯೊಂದರಲ್ಲಿ ಅಡಗಿ ಕುಳಿತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಹಮ್ಮದ್ ಗೌಸಿಫ್ (33): ಉಡುಪಿ ಜಿಲ್ಲೆ , ರೋಷನ್ (44) ಮಂಗಳೂರು ಜಿಲ್ಲೆ.
ಇಬ್ಬರೂ ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಆರೋಪಿಗಳನ್ನು ಅಲ್ಪಾವಧಿಯಲ್ಲಿಯೇ ಬಂಧಿಸಿದ ಪೊಲೀಸ್ ತಂಡದ ಕಾರ್ಯವೈಖರಿಗೆ ಸಾರ್ವಜನಿಕ ವಲಯದಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…