ಹೊಸನಗರದಲ್ಲಿ ಜು.30ರಂದು ಪತ್ರಿಕಾ ದಿನಾಚರಣೆ: ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ವೈಭವಕ್ಕೆ ಸಕಲ ಸಿದ್ಧತೆ

ಹೊಸನಗರದಲ್ಲಿ ಜು.30ರಂದು ಪತ್ರಿಕಾ ದಿನಾಚರಣೆ: ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ವೈಭವಕ್ಕೆ ಸಕಲ ಸಿದ್ಧತೆ

Karnataka Working Journalists Association, Hosanagara Taluk Unit, will celebrate Press Day on July 30 with a felicitation ceremony, cultural performances, and the participation of MLAs and distinguished guests.

ಹೊಸನಗರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಹೊಸನಗರ ತಾಲೂಕು ಶಾಖೆ ವತಿಯಿಂದ ಜುಲೈ 30ರಂದು ಬೆಳಗ್ಗೆ 11 ಗಂಟೆಗೆ ಪಟ್ಟಣದ ಸೀತಾರಾಮಚಂದ್ರ ಸಭಾಭವನದಲ್ಲಿ ಪತ್ರಿಕಾ ದಿನಾಚರಣೆ ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಾಲೂಕು ಶಾಖೆಯ ಅಧ್ಯಕ್ಷ ನಾ. ರವಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾರ್ಯಕ್ರಮವನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಉದ್ಘಾಟಿಸಲಿದ್ದು, ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಸಾಧಕರನ್ನು ಸನ್ಮಾನಿಸಲಿದ್ದಾರೆ. ಪತ್ರಿಕಾ ವಿತರಕರನ್ನು ಶಿಮುಲ್ ಅಧ್ಯಕ್ಷ ಎಚ್.ಎನ್. ವಿದ್ಯಾಧರ್ ಗೌರವಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಎಚ್. ಚಿದಂಬರ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷ ವೈದ್ಯನಾಥ್, ರಾಜ್ಯ ನಿರ್ದೇಶಕ ಎನ್. ರವಿಕುಮಾರ್, ಕೆ.ವಿ. ಶಿವಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಲಸ್ವಾಮಿ ಹಾಗೂ ಸತ್ಯನಾರಾಯಣ ಭಾಗವಹಿಸಲಿದ್ದಾರೆ.

ಇದೇ ವೇಳೆ ಶ್ರೀ ವ್ಯಾಸಮಹರ್ಷಿ ಶಾಸ್ತ್ರೀಯ ಸಂಗೀತ ಮತ್ತು ನೃತ್ಯ ಗುರುಕುಲ, ಬಟ್ಟೆಮಲ್ಲಪ್ಪ ಅವರಿಂದ “ಗಾನ.. ನೃತ್ಯ.. ವೈಭವ..” ಎಂಬ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮವೂ ನಡೆಯಲಿದ್ದು, ಸಾರ್ವಜನಿಕರು ಹಾಗೂ ಪತ್ರಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘದ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…

4 hours ago

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…

5 hours ago

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

9 hours ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

13 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

15 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

1 day ago