Headlines

ಭಾರಿ ಮಳೆ : ಹೊಸನಗರ ಹಾಗೂ ಸಾಗರ ತಾಲೂಕಿನ ಎಲ್ಲಾ ಶಾಲೆ-ಕಾಲೇಜುಗಳಿಗೆ ನಾಳೆ (07-07-2026) ರಜೆ ಘೋಷಣೆ

ಭಾರಿ ಮಳೆ : ಹೊಸನಗರ ಹಾಗೂ ಸಾಗರ ತಾಲೂಕಿನ ಎಲ್ಲಾ ಶಾಲೆ-ಕಾಲೇಜುಗಳಿಗೆ ನಾಳೆ (07-07-2026) ರಜೆ ಘೋಷಣೆ

Heavy rain lashes Hosanagara and Sagara taluks in Shivamogga district. Authorities declare a holiday for all schools, colleges, and Anganwadi centres on July 7, 2026, as a precautionary safety measure.

ಹೊಸನಗರ ಹಾಗೂ ಸಾಗರ ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಬಿರುಗಾಳಿಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ (ಜುಲೈ 7, ಮಂಗಳವಾರ) ಎಲ್ಲಾ ಶಾಲೆ, ಕಾಲೇಜು ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ.

ಸಾಗರ ಹಾಗೂ ಹೊಸನಗರ ತಾಲೂಕಿನಲ್ಲಿ ಭಾರಿ ಮಳೆಯೊಂದಿಗೆ ಗಾಳಿ ತೀವ್ರವಾಗಿ ಬೀಸುತ್ತಿರುವ ಕಾರಣ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತು ಸಾಗರ ತಹಶೀಲ್ದಾರ್ ಪ್ರತಿಮಾ ಹಾಗೂ ಹೊಸನಗರ ತಹಶೀಲ್ದಾರ್ ಭರತ್ ರಾಜ್ ಆದೇಶ ಹೊರಡಿಸಿದ್ದಾರೆ.

ರಜೆ ಆದೇಶವು ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು, ಪದವಿ ಕಾಲೇಜುಗಳು ಹಾಗೂ ಅಂಗನವಾಡಿ ಕೇಂದ್ರಗಳಿಗೆ ಅನ್ವಯವಾಗಲಿದೆ.

ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಪಾಲಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

About The Author

Exit mobile version