w
Headlines
Home » ಭಾರಿ ಮಳೆ : ಹೊಸನಗರ ತಾಲೂಕಿನ ಎಲ್ಲಾ ಶಾಲೆ-ಕಾಲೇಜುಗಳಿಗೆ ಇಂದು (06-07-2026) ರಜೆ ಘೋಷಣೆ

ಭಾರಿ ಮಳೆ : ಹೊಸನಗರ ತಾಲೂಕಿನ ಎಲ್ಲಾ ಶಾಲೆ-ಕಾಲೇಜುಗಳಿಗೆ ಇಂದು (06-07-2026) ರಜೆ ಘೋಷಣೆ

Screenshot 2026 07 06 08 16 26 267 photoeditor.layout.collagemaker edit

ಭಾರಿ ಮಳೆ : ಹೊಸನಗರ ತಾಲೂಕಿನ ಎಲ್ಲಾ ಶಾಲೆ-ಕಾಲೇಜುಗಳಿಗೆ ಇಂದು (06-07-2026) ರಜೆ ಘೋಷಣೆ

Hosanagara Taluk has declared a holiday for all schools, colleges, and Anganwadi centres on July 6 due to heavy rainfall and strong winds. The order was issued by Tahsildar Bharat Raj.

ಹೊಸನಗರ, ಜುಲೈ 6: ತಾಲೂಕಿನಾದ್ಯಂತ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಬಿರುಗಾಳಿಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಇಂದು (ಜುಲೈ 6, ಸೋಮವಾರ) ಎಲ್ಲಾ ಶಾಲೆ, ಕಾಲೇಜು ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ.

ತಾಲೂಕಿನಲ್ಲಿ ಭಾರಿ ಮಳೆಯೊಂದಿಗೆ ಗಾಳಿ ತೀವ್ರವಾಗಿ ಬೀಸುತ್ತಿರುವ ಕಾರಣ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತು ತಹಶೀಲ್ದಾರ್ ಭರತ್ ರಾಜ್ ಆದೇಶ ಹೊರಡಿಸಿದ್ದಾರೆ.

ರಜೆ ಆದೇಶವು ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು, ಹಾಗೂ ಅಂಗನವಾಡಿ ಕೇಂದ್ರಗಳಿಗೆ ಅನ್ವಯವಾಗಲಿದೆ.

ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಪಾಲಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ತಹಶೀಲ್ದಾರ್ ಭರತ್ ರಾಜ್ ಮನವಿ ಮಾಡಿದ್ದಾರೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.