ಹೊಸನಗರ : ಸೊನಲೆಯಲ್ಲಿ ಕ್ಷುಲ್ಲಕ ವಿಚಾರಕ್ಕೆ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ

ಹೊಸನಗರ : ಸೊನಲೆಯಲ್ಲಿ ಕ್ಷುಲ್ಲಕ ವಿಚಾರಕ್ಕೆ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ

A timber cutting worker was allegedly murdered by two co-workers in Sonale village of Hosanagara taluk, Shivamogga district, after an argument over family matters. Hosanagara Police have registered a murder case and launched an investigation.

ಹೊಸನಗರ: ಸಹೋದ್ಯೋಗಿಯ ಸಂಸಾರದ ವಿಚಾರವಾಗಿ ಬುದ್ಧಿವಾದ ಹೇಳಿದ್ದನ್ನು ಮನಸ್ಸಿಗೆ ತೆಗೆದುಕೊಂಡು ಇಬ್ಬರು ಸೇರಿ ಟಿಂಬರ್ ಕಟಿಂಗ್ ಕಾರ್ಮಿಕನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸೊನಲೆ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ.

ಮೃತರನ್ನು ಪರಶುರಾಮ ರಾಮಪ್ಪ ಲಮಾಣಿ (ಇಚನಹಳ್ಳಿ ತಾಂಡ, ದೇವಿಕೊಪ್ಪ ಅಂಚೆ, ಕಲಘಟಗಿ ತಾಲೂಕು, ಧಾರವಾಡ ಜಿಲ್ಲೆ) ಎಂದು ಗುರುತಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪರಶುರಾಮ ಶೆಟ್ಟಪ್ಪ ತಂಬೂರಿ ಹಾಗೂ ಅರುಣ ಪುನ್ನಪ್ಪ ಲಮಾಣಿ ವಿರುದ್ಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

ಏನಿದು ಘಟನೆ?

ಪೊಲೀಸರ ಮಾಹಿತಿ ಪ್ರಕಾರ, ಧಾರವಾಡ ಜಿಲ್ಲೆಯ ಇಚನಹಳ್ಳಿ ತಾಂಡದ ಆರು ಮಂದಿ ಕಾರ್ಮಿಕರು ಕಳೆದ ಮೂರು ತಿಂಗಳಿನಿಂದ ಹೊಸನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಟಿಂಬರ್ ಕಟಿಂಗ್ ಕೆಲಸ ಮಾಡುತ್ತಿದ್ದರು. ಇವರು ಸೊನಲೆ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದು, ಪ್ರತಿದಿನ ಕೆಲಸಕ್ಕೆ ತೆರಳುತ್ತಿದ್ದರು.

ಶನಿವಾರ ಸಂಜೆ ಕೆಲಸ ಮುಗಿಸಿ ಮನೆಗೆ ಬಂದ ಬಳಿಕ ಕೆಲವರು ಹೊಸನಗರ ಸಂತೆಯಿಂದ ತರಕಾರಿ ಹಾಗೂ ಮದ್ಯ ತಂದು ಚಿಕನ್ ಅಡುಗೆ ಮಾಡಿದ್ದರು. ಈ ವೇಳೆ ಮದ್ಯಪಾನದ ಸಂದರ್ಭದಲ್ಲಿ ಅರುಣನ ಕುಟುಂಬದ ವಿಚಾರವಾಗಿ ಮೃತ ಪರಶುರಾಮ ಲಮಾಣಿ ಬುದ್ಧಿವಾದ ಹೇಳಿದ್ದು, ಇದೇ ವಿಚಾರಕ್ಕೆ ಇಬ್ಬರ ನಡುವೆ ಮಾತಿನ ಚಕಮಕಿ ಆರಂಭವಾಗಿದೆ.

ಮೊದಲು ಅಲ್ಲಿದ್ದ ಸಹೋದ್ಯೋಗಿಗಳು ಜಗಳವನ್ನು ಶಮನಗೊಳಿಸಿದರೂ, ಸ್ವಲ್ಪ ಸಮಯದ ಬಳಿಕ ಅರುಣ ಮತ್ತೆ ಮನೆಗೆ ನುಗ್ಗಿ ಪರಶುರಾಮ ಲಮಾಣಿ ಅವರ ಕಾಲುಗಳನ್ನು ಹಿಡಿದಿದ್ದಾನೆ ಎನ್ನಲಾಗಿದೆ. ಇದೇ ವೇಳೆ ಪರಶುರಾಮ ಶೆಟ್ಟಪ್ಪ ತಂಬೂರಿ ಅಡುಗೆ ಮನೆಯಿಂದ ತರಕಾರಿ ಕತ್ತರಿಸುವ ಚಾಕು ತಂದು ಪರಶುರಾಮ ಲಮಾಣಿ ಅವರ ಕುತ್ತಿಗೆಯ ಬಲಭಾಗಕ್ಕೆ ಇರಿದಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಸ್ಥಳದಲ್ಲೇ ಸಾವು :

ಚಾಕು ಇರಿತದಿಂದ ತೀವ್ರ ರಕ್ತಸ್ರಾವಗೊಂಡ ಪರಶುರಾಮ ಲಮಾಣಿ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ಕೂಡಲೇ 112 ತುರ್ತು ಸೇವೆಗೆ ಕರೆ ಮಾಡಿ ಸಹಾಯ ಕೋರಲಾಗಿತ್ತಾದರೂ, ಅಷ್ಟರಲ್ಲೇ ಅವರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಮೃತರ ಸಹೋದ್ಯೋಗಿ ಲಕ್ಷ್ಮಣ ಗೋವಿಂದ ರಾಠೋಡ ನೀಡಿದ ದೂರಿನ ಮೇರೆಗೆ ಹೊಸನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಸ್ಥಳಕ್ಕೆ ಎಸ್ ಪಿ ನಿಖಿಲ್ ಭೇಟಿ :

ಇನ್ನೂ ಘಟನಾ ಸ್ಥಳಕ್ಕೆ ಶನಿವಾರ ತಡರಾತ್ರಿ ಎಸ್ ಪಿ ನಿಖಿಲ್ ಭೇಟಿ ನೀಡಿ ಒಅರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಪ್ರಕರಣದ ತನಿಖೆಯನ್ನು ಹೊಸನಗರ ಪೊಲೀಸ್ ಠಾಣೆಯ ಪಿಎಸ್‌ಐ ಶಂಕರಗೌಡ ಪಾಟೀಲ್ ನೇತೃತ್ವದಲ್ಲಿ ಮುಂದುವರಿಸಲಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…

6 hours ago

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…

7 hours ago

ಮನೆಯಲ್ಲಿ ಒಬ್ಬರೇ ಇದ್ದ ಮಹಿಳೆ ಮೇಲೆ ಹಲ್ಲೆ; ಬಂಗಾರದ ಸರ ಕಿತ್ತುಕೊಂಡು ದುಷ್ಕರ್ಮಿ ಪರಾರಿ

ಮನೆಯಲ್ಲಿ ಒಬ್ಬರೇ ಇದ್ದ ಮಹಿಳೆ ಮೇಲೆ ಹಲ್ಲೆ; ಬಂಗಾರದ ಸರ ಕಿತ್ತುಕೊಂಡು ದುಷ್ಕರ್ಮಿ ಪರಾರಿ A woman was allegedly…

7 hours ago

30 ವರ್ಷ 8 ತಿಂಗಳ ಸಾರ್ಥಕ ಸೇವೆಗೆ ವಿರಾಮ: ಬರುವೆ ಶಾಲೆಯ ಶಿಕ್ಷಕಿ ಅಂಬಿಕಾ ಸಿ. ಅವರಿಗೆ ಆತ್ಮೀಯ ಬೀಳ್ಕೊಡುಗೆ

30 ವರ್ಷ 8 ತಿಂಗಳ ಸಾರ್ಥಕ ಸೇವೆಗೆ ವಿರಾಮ: ಶಿಕ್ಷಕಿ ಅಂಬಿಕಾ ಸಿ. ಅವರಿಗೆ ಆತ್ಮೀಯ ಬೀಳ್ಕೊಡುಗೆ Teacher Ambika…

18 hours ago

ಹುಂಚ ಹೋಬಳಿ ಕಾಂಗ್ರೆಸ್ OBC ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ

ಹುಂಚ ಹೋಬಳಿ ಕಾಂಗ್ರೆಸ್ OBC ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ Ramesh H.B. has been appointed as the…

19 hours ago

ರಿಪ್ಪನ್‌ಪೇಟೆ, ಹರತಾಳು, ಗರ್ತಿಕೆರೆಯಲ್ಲಿ ರಾಯರ 355ನೇ ಆರಾಧನೆ; ಹರಿದು ಬಂದ ಭಕ್ತ ಸಾಗರ

ರಿಪ್ಪನ್‌ಪೇಟೆ, ಹರತಾಳು, ಗರ್ತಿಕೆರೆಯಲ್ಲಿ ರಾಯರ 355ನೇ ಆರಾಧನೆ; ಹರಿದು ಬಂದ ಭಕ್ತ ಸಾಗರ Thousands of devotees participated in…

20 hours ago