ಹುಲಿಕಲ್ ಘಾಟ್ ಕಾಮಗಾರಿ ಪರಿಶೀಲಿಸಿದ ಸಚಿವ ಸತೀಶ್ ಜಾರಕಿಹೊಳಿ : ಗುಣಮಟ್ಟಕ್ಕೆ ರಾಜಿ ಬೇಡ, ಶೀಘ್ರ ಪೂರ್ಣಗೊಳಿಸಲು ಸೂಚನೆ
PWD Minister Satish Jarkiholi inspected the ongoing retaining wall and road safety works at Hulikal Ghat in Shivamogga and directed officials to complete the project quickly without compromising quality.
ಶಿವಮೊಗ್ಗ, ಜು.14: ಶಿವಮೊಗ್ಗ ಜಿಲ್ಲೆಯ ಹುಲಿಕಲ್ ಘಾಟ್‌ನಲ್ಲಿ ರಸ್ತೆ ಸುರಕ್ಷತೆಗಾಗಿ ಕೈಗೊಳ್ಳಲಾಗುತ್ತಿರುವ ತಡೆಗೋಡೆ (ರಿಟೇನಿಂಗ್ ವಾಲ್) ಹಾಗೂ ಇತರೆ ಕಾಮಗಾರಿಗಳನ್ನು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಮಂಗಳವಾರ ಸಂಜೆ ಖುದ್ದಾಗಿ ಪರಿಶೀಲಿಸಿದರು.
ಹುಲಿಕಲ್ ಘಾಟ್‌ನಲ್ಲಿ ₹4.35 ಕೋಟಿ ಹಾಗೂ ₹1 ಕೋಟಿ ವೆಚ್ಚದಲ್ಲಿ ತಡೆಗೋಡೆ ಮತ್ತು ರಸ್ತೆ ಸುರಕ್ಷತಾ ಕಾಮಗಾರಿಗಳು ನಡೆಯುತ್ತಿದ್ದು, ಅವುಗಳನ್ನು ನಿಗದಿತ ಅವಧಿಯೊಳಗೆ ಗುಣಮಟ್ಟ ಕಾಪಾಡಿಕೊಂಡು ಶೀಘ್ರ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಘಾಟ್ ಪ್ರದೇಶದಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ ಮುಂದುವರಿದಿದ್ದರೂ, ಲಘು ವಾಹನಗಳ ಸಂಚಾರಕ್ಕೆ ಈಗಾಗಲೇ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು. ಇಲಾಖೆಯಡಿ ಸ್ಥಗಿತಗೊಂಡಿರುವ ಕಾಮಗಾರಿಗಳನ್ನು ಪುನರಾರಂಭಿಸಲು ಸಹ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಶಿವಮೊಗ್ಗ ನಗರದ ತುಂಗಾ ನದಿಗೆ ಹೊಸ ಸೇತುವೆ ನಿರ್ಮಾಣಕ್ಕೆ ₹50 ಕೋಟಿ ಮಂಜೂರಾಗಿದ್ದು, ಕಾಮಗಾರಿಯನ್ನು ನವೆಂಬರ್ ಅಥವಾ ಡಿಸೆಂಬರ್ ತಿಂಗಳಲ್ಲಿ ಆರಂಭಿಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು.
ಮಳೆಗಾಲದ ಹಿನ್ನೆಲೆಯಲ್ಲಿ ಘಾಟ್ ಪ್ರದೇಶದಲ್ಲಿ ಭೂಕುಸಿತ ತಡೆಯಲು ಹಾಗೂ ವಾಹನ ಸವಾರರ ಸುರಕ್ಷತೆಯನ್ನು ಖಚಿತಪಡಿಸಲು ಕೈಗೊಳ್ಳಲಾಗುತ್ತಿರುವ ಮುಂಜಾಗ್ರತಾ ಕ್ರಮಗಳ ಕುರಿತು ಅಧಿಕಾರಿಗಳಿಂದ ಸಚಿವರು ಸಮಗ್ರ ಮಾಹಿತಿ ಪಡೆದರು.
ಕಾಮಗಾರಿ ಸ್ಥಳವನ್ನು ಪರಿಶೀಲಿಸಿದ ಸಚಿವರು, ಘಾಟ್ ರಸ್ತೆಗಳು ಅತ್ಯಂತ ಸೂಕ್ಷ್ಮ ಪ್ರದೇಶಗಳಾಗಿರುವುದರಿಂದ ರಿಟೇನಿಂಗ್ ವಾಲ್ ನಿರ್ಮಾಣದಲ್ಲಿ ಯಾವುದೇ ಕಾರಣಕ್ಕೂ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳಬಾರದು ಎಂದು ಇಂಜಿನಿಯರ್‌ಗಳು ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು.
ಅಲ್ಲದೆ, ಮಳೆಗಾಲದಲ್ಲೂ ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು. ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ಫಲಕಗಳು ಹಾಗೂ ರಾತ್ರಿ ವೇಳೆಯಲ್ಲೂ ಸ್ಪಷ್ಟವಾಗಿ ಕಾಣುವ ಸುರಕ್ಷತಾ ಸೂಚಕಗಳನ್ನು ಅಳವಡಿಸಬೇಕು ಎಂದು ನಿರ್ದೇಶನ ನೀಡಿದರು.
“ಘಾಟ್ ಪ್ರದೇಶಗಳಲ್ಲಿ ಸಾರ್ವಜನಿಕರ ಸುರಕ್ಷತೆ ನಮ್ಮ ಮೊದಲ ಆದ್ಯತೆ. ಮಳೆಗಾಲದಲ್ಲಿ ಯಾವುದೇ ಅವಘಡ ಸಂಭವಿಸದಂತೆ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಕಾಮಗಾರಿಯ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು” ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…