ಹುಂಚ ಮುತ್ತಿನಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ಯುವಕ ನೀರುಪಾಲು

ಹುಂಚ ಮುತ್ತಿನಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ಯುವಕ ನೀರುಪಾಲು

A youth identified as Mahendra from Huncha Manjunatha Nagar drowned in Muttinakere near Huncha while allegedly attempting to fish. Fire and police personnel recovered the body after a search operation.

​ರಿಪ್ಪನ್‌ಪೇಟೆ (ಶಿವಮೊಗ್ಗ): ಹೊಸನಗರ ತಾಲೂಕಿನ ಹುಂಚ ಸಮೀಪದ ಮುತ್ತಿನಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ಯುವಕನೊಬ್ಬ ಕಾಲು ಜಾರಿ ನೀರಿಗೆ ಬಿದ್ದು ದಾರುಣವಾಗಿ ಅಂತ್ಯಕಂಡ ಘಟನೆ ಮಂಗಳವಾರ ಮಧ್ಯಾಹ್ನ ವರದಿಯಾಗಿದೆ.

ಮೃತ ಯುವಕನನ್ನು ಹುಂಚ ಮಂಜುನಾಥ ನಗರದ ನಿವಾಸಿ ಮಹೇಂದ್ರ ಎಂದು ಗುರುತಿಸಲಾಗಿದೆ.

​ಮಹೇಂದ್ರ ಹಾಗೂ ಆತನ ಸ್ನೇಹಿತರಾದ ಪ್ರದೀಪ, ಗೋವಿಂದ ಮತ್ತು ವಿನಾಯಕ ಸೇರಿ ಒಟ್ಟು ನಾಲ್ವರು ಮುತ್ತಿನಕೆರೆಯಲ್ಲಿ ಮೀನು ಹಿಡಿಯುವ ಉದ್ದೇಶದಿಂದ ತೆರಳಿದ್ದರು. ಈ ಸಂದರ್ಭದಲ್ಲಿ ಕೆರೆಯ ದಂಡೆಯ ಮೇಲೆ ನಿಂತಿದ್ದ ಮಹೇಂದ್ರ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದಿದ್ದಾನೆ. ಈಜು ಬಾರದ ಕಾರಣ ಆತ ನೀರಿನಲ್ಲಿ ಮುಳುಗಿದ್ದು, ಇದನ್ನು ಕಂಡು ಗಾಬರಿಗೊಂಡ ಆತನ ಸ್ನೇಹಿತರು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

​ಸ್ಥಳೀಯರಿಂದ ಮಾಹಿತಿ ತಿಳಿದ ಕೂಡಲೇ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಬಳಿಕ ಅಗ್ನಿಶಾಮಕ ದಳಕ್ಕೆ ಮಾಹಿತಿ ರವಾನಿಸಲಾಯಿತು.

ಹೊಸನಗರ ಅಗ್ನಿಶಾಮಕ ಠಾಣಾಧಿಕಾರಿ ಆನಂದಪ್ಪ ಎನ್. ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ರಾಜೇಶ್ ಕೆ.ಎಚ್., ಮಂಜುನಾಥ್ ಬಿ., ಆಂಜನೇಯ ಬಿ.ಸಿ., ಸುರೇಶ್ ಗೌಡ ಸಿ. ಪಾಟೀಲ್, ಪ್ರವೀಣ್ ಕುಮಾರ್ ಬಿ.ಬಿ. ಮತ್ತು ಅಶ್ಪಕ್ ಬಿ. ಅವರು ಕಾರ್ಯಾಚರಣೆ ನಡೆಸಿ, ಕೆರೆಯಿಂದ ಮಹೇಂದ್ರನ ಮೃತದೇಹವನ್ನು ಹೊರತೆಗೆದಿದ್ದಾರೆ.

​ಈ ಕುರಿತು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಯುವಕನ ಅಕಾಲಿಕ ನಿಧನದಿಂದ ಮಂಜುನಾಥ ನಗರದಲ್ಲಿ ಸೂತಕದ ಛಾಯೆ ಆವರಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…

8 hours ago

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…

10 hours ago

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…

11 hours ago

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…

11 hours ago

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…

12 hours ago

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…

1 day ago