ಹುಂಚ ಮುತ್ತಿನಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ಯುವಕ ನೀರುಪಾಲು
A youth identified as Mahendra from Huncha Manjunatha Nagar drowned in Muttinakere near Huncha while allegedly attempting to fish. Fire and police personnel recovered the body after a search operation.
ರಿಪ್ಪನ್‌ಪೇಟೆ (ಶಿವಮೊಗ್ಗ): ಹೊಸನಗರ ತಾಲೂಕಿನ ಹುಂಚ ಸಮೀಪದ ಮುತ್ತಿನಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ಯುವಕನೊಬ್ಬ ಕಾಲು ಜಾರಿ ನೀರಿಗೆ ಬಿದ್ದು ದಾರುಣವಾಗಿ ಅಂತ್ಯಕಂಡ ಘಟನೆ ಮಂಗಳವಾರ ಮಧ್ಯಾಹ್ನ ವರದಿಯಾಗಿದೆ.
ಮೃತ ಯುವಕನನ್ನು ಹುಂಚ ಮಂಜುನಾಥ ನಗರದ ನಿವಾಸಿ ಮಹೇಂದ್ರ ಎಂದು ಗುರುತಿಸಲಾಗಿದೆ.
ಮಹೇಂದ್ರ ಹಾಗೂ ಆತನ ಸ್ನೇಹಿತರಾದ ಪ್ರದೀಪ, ಗೋವಿಂದ ಮತ್ತು ವಿನಾಯಕ ಸೇರಿ ಒಟ್ಟು ನಾಲ್ವರು ಮುತ್ತಿನಕೆರೆಯಲ್ಲಿ ಮೀನು ಹಿಡಿಯುವ ಉದ್ದೇಶದಿಂದ ತೆರಳಿದ್ದರು. ಈ ಸಂದರ್ಭದಲ್ಲಿ ಕೆರೆಯ ದಂಡೆಯ ಮೇಲೆ ನಿಂತಿದ್ದ ಮಹೇಂದ್ರ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದಿದ್ದಾನೆ. ಈಜು ಬಾರದ ಕಾರಣ ಆತ ನೀರಿನಲ್ಲಿ ಮುಳುಗಿದ್ದು, ಇದನ್ನು ಕಂಡು ಗಾಬರಿಗೊಂಡ ಆತನ ಸ್ನೇಹಿತರು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಸ್ಥಳೀಯರಿಂದ ಮಾಹಿತಿ ತಿಳಿದ ಕೂಡಲೇ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಬಳಿಕ ಅಗ್ನಿಶಾಮಕ ದಳಕ್ಕೆ ಮಾಹಿತಿ ರವಾನಿಸಲಾಯಿತು.
ಹೊಸನಗರ ಅಗ್ನಿಶಾಮಕ ಠಾಣಾಧಿಕಾರಿ ಆನಂದಪ್ಪ ಎನ್. ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ರಾಜೇಶ್ ಕೆ.ಎಚ್., ಮಂಜುನಾಥ್ ಬಿ., ಆಂಜನೇಯ ಬಿ.ಸಿ., ಸುರೇಶ್ ಗೌಡ ಸಿ. ಪಾಟೀಲ್, ಪ್ರವೀಣ್ ಕುಮಾರ್ ಬಿ.ಬಿ. ಮತ್ತು ಅಶ್ಪಕ್ ಬಿ. ಅವರು ಕಾರ್ಯಾಚರಣೆ ನಡೆಸಿ, ಕೆರೆಯಿಂದ ಮಹೇಂದ್ರನ ಮೃತದೇಹವನ್ನು ಹೊರತೆಗೆದಿದ್ದಾರೆ.
ಈ ಕುರಿತು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಯುವಕನ ಅಕಾಲಿಕ ನಿಧನದಿಂದ ಮಂಜುನಾಥ ನಗರದಲ್ಲಿ ಸೂತಕದ ಛಾಯೆ ಆವರಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…
ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…
ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…
RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…
ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…
ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…