ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು
A 28-year-old tourist from Bengaluru died of a suspected heart attack near Kodachadri in Shivamogga district before beginning his trek. The incident marks the second such death in the area within a month.
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ಕೊಡಚಾದ್ರಿ ಸಮೀಪ ಪ್ರವಾಸಿಗನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತರನ್ನು ಬೆಂಗಳೂರಿನ ನಿವಾಸಿ ಶ್ರೀಕಾಂತ್ (28) ಎಂದು ಗುರುತಿಸಲಾಗಿದೆ. ಅವರು ಸ್ನೇಹಿತರೊಂದಿಗೆ ಜುಲೈ 17ರಂದು ಕೊಡಚಾದ್ರಿ ಶಿಖರ ವೀಕ್ಷಣೆಗೆ ಆಗಮಿಸಿದ್ದರು. ಸಂಪೇಕಟ್ಟೆ ಸಮೀಪದ ಕಟ್ಟಿನಹೊಳೆ ಗ್ರಾಮದಲ್ಲಿರುವ ಸ್ನೇಹಿತರ ಮನೆಯಲ್ಲಿ ತಂಗಿದ್ದ ಅವರು, ಶನಿವಾರ ಮುಂಜಾನೆ ಕೊಡಚಾದ್ರಿ ಶಿಖರಕ್ಕೆ ತೆರಳುವ ಯೋಜನೆ ಮಾಡಿಕೊಂಡಿದ್ದರು.
ಆದರೆ ಶುಕ್ರವಾರ ರಾತ್ರಿ ಏಕಾಏಕಿ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡು ಅವರು ತಂಗಿದ್ದ ಮನೆಯಲ್ಲೇ ಕುಸಿದು ಬಿದ್ದಿದ್ದಾರೆ. ಕೂಡಲೇ ಸ್ನೇಹಿತರು ಅವರನ್ನು ಹೊಸನಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ, ಪರೀಕ್ಷಿಸಿದ ವೈದ್ಯರು ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.
ಮೃತದೇಹವನ್ನು ಹೊಸನಗರ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದ್ದು, ಕುಟುಂಬಸ್ಥರು ಆಗಮಿಸಿದ ಬಳಿಕ ಮರಣೋತ್ತರ ಪರೀಕ್ಷೆ ಸೇರಿದಂತೆ ಮುಂದಿನ ಕಾನೂನು ಪ್ರಕ್ರಿಯೆ ನಡೆಸಲಾಗುತ್ತದೆ. ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಕೊಡಚಾದ್ರಿ ಹಾಗೂ ಅದರ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ ಹೃದಯಾಘಾತದಿಂದ ಇಬ್ಬರು ಪ್ರವಾಸಿಗರು ಮೃತಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ. ಪ್ರಕೃತಿ ಸೌಂದರ್ಯ ಸವಿಯಲು ಆಗಮಿಸುವ ಪ್ರವಾಸಿಗರು ತಮ್ಮ ಆರೋಗ್ಯದ ಬಗ್ಗೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕೆಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ Farmers staged a massive protest…
ಇಂಡಿಯಾ ಪೋಸ್ಟ್‌ನಲ್ಲಿ 25,000ಕ್ಕೂ ಹೆಚ್ಚು ಹುದ್ದೆ: 10ನೇ ತರಗತಿ ಪಾಸಾದವರಿಗೆ ಅವಕಾಶ, ಪರೀಕ್ಷೆ ಇಲ್ಲದೆ ನೇಮಕಾತಿ India Post GDS…
ಶಂಕರಮಠ ರಸ್ತೆಯ ರಾಹುಲ್ ಹುಂಡೈ ಶೋರೂಮ್‌ನಲ್ಲಿ ಮತ್ತೆ ಅಗ್ನಿ ಆಕಸ್ಮಿಕ Small fire accident reported at Rahul Hyundai…
ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…
ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…
ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…