ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಕಳ್ಳತನ – ಭದ್ರಾವತಿಯ ಮೂವರು ಮಹಿಳೆಯರ ಬಂಧನ
Kollur Police solved an ₹80,000 theft at Kollur Mookambika Temple within 24 hours, arresting three women from Bhadravathi based on CCTV footage and public photographs.
ಕೊಲ್ಲೂರು, ಜುಲೈ 7: ಕೊಲ್ಲೂರಿನ ಪ್ರಸಿದ್ಧ ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತೆಯೊಬ್ಬರ ವ್ಯಾನಿಟಿ ಬ್ಯಾಗ್‌ನಲ್ಲಿದ್ದ ₹80 ಸಾವಿರ ನಗದು ಕಳ್ಳತನ ಮಾಡಿದ ಪ್ರಕರಣವನ್ನು ಕೊಲ್ಲೂರು ಪೊಲೀಸರು ಕೇವಲ 24 ಗಂಟೆಯೊಳಗೆ ಭೇದಿಸಿ ಮೂವರು ಮಹಿಳಾ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ಭದ್ರಾವತಿ ಮೂಲದ ನೇತ್ರಾವತಿ, ಶಾರದಾ ಹಾಗೂ ದುರ್ಗಮ್ಮ ಎಂದು ಗುರುತಿಸಲಾಗಿದೆ.
ದೇವಿಯ ದರ್ಶನಕ್ಕೆಂದು ದೇವಸ್ಥಾನಕ್ಕೆ ಆಗಮಿಸಿದ್ದ ನಿಮಿಶಾ ಎಂಬ ಭಕ್ತೆಯ ವ್ಯಾನಿಟಿ ಬ್ಯಾಗ್‌ನಲ್ಲಿದ್ದ ₹80 ಸಾವಿರ ನಗದು ಕಳ್ಳತನವಾಗಿತ್ತು. ಘಟನೆ ಬಳಿಕ ದೇವಸ್ಥಾನದ ಆವರಣದಲ್ಲಿ ವ್ಯಾಪಕ ಹುಡುಕಾಟ ನಡೆಸಿದರೂ ಹಣ ಪತ್ತೆಯಾಗಿರಲಿಲ್ಲ. ಬಳಿಕ ಸಂತ್ರಸ್ತೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ದೇವಸ್ಥಾನದ ಸಿಸಿಟಿವಿ ದೃಶ್ಯಾವಳಿ ಹಾಗೂ ಘಟನಾ ಸ್ಥಳದಲ್ಲಿ ಸಾರ್ವಜನಿಕರು ತಮ್ಮ ಮೊಬೈಲ್‌ಗಳಲ್ಲಿ ಸೆರೆಹಿಡಿದಿದ್ದ ಛಾಯಾಚಿತ್ರಗಳನ್ನು ಪರಿಶೀಲಿಸಿ ತನಿಖೆ ನಡೆಸಿದರು. ತನಿಖೆಯ ವೇಳೆ ಕಳ್ಳತನದಲ್ಲಿ ಭಾಗಿಯಾಗಿದ್ದ ಮೂವರು ಮಹಿಳೆಯರ ಸುಳಿವು ಪತ್ತೆಯಾಗಿದ್ದು, ಕಳ್ಳತನ ನಡೆದ 24 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, ಬಂಧಿತ ದುರ್ಗಮ್ಮ ವಿರುದ್ಧ ಈ ಹಿಂದೆ ಎರಡು ಕಳ್ಳತನ ಪ್ರಕರಣಗಳು ದಾಖಲಾಗಿದ್ದು, ಶಾರದಾ ವಿರುದ್ಧ ಮೂರು ಕಳ್ಳತನ ಪ್ರಕರಣಗಳು ದಾಖಲಾಗಿವೆ. ಆರೋಪಿಗಳಿಂದ ಇನ್ನಷ್ಟು ಕಳ್ಳತನ ಪ್ರಕರಣಗಳ ಕುರಿತು ಮಾಹಿತಿ ದೊರೆಯುವ ಸಾಧ್ಯತೆ ಇದ್ದು, ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.
ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್ Shivamogga rowdy sheeter…
ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ Kudumallige Society CEO Madan,…
ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…
ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…
ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…
ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…