ಕಾಲೇಜಿಗೆ ತೆರಳಿದ್ದ 16 ವರ್ಷದ ವಿದ್ಯಾರ್ಥಿ ನಾಪತ್ತೆ; ಸುಳಿವು ನೀಡುವಂತೆ ಪೊಲೀಸರ ಮನವಿ

ಕಾಲೇಜಿಗೆ ತೆರಳಿದ್ದ 16 ವರ್ಷದ ವಿದ್ಯಾರ್ಥಿ ನಾಪತ್ತೆ; ಸುಳಿವು ನೀಡುವಂತೆ ಪೊಲೀಸರ ಮನವಿ

A 16-year-old student from Harudike Bhimanakone village in Sagar taluk, Shivamogga district, has been missing since July 12 after leaving for college. Police have appealed to the public to share any information.

ಶಿವಮೊಗ್ಗ, ಜುಲೈ 23: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹರುಡಿಕೆ ಭೀಮನಕೋಣೆ ಗ್ರಾಮದ 16 ವರ್ಷದ ವಿದ್ಯಾರ್ಥಿಯೊಬ್ಬ ಕಾಲೇಜಿಗೆ ತೆರಳಿದ ಬಳಿಕ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ.

ಹರುಡಿಕೆ ಭೀಮನಕೋಣೆ ಗ್ರಾಮದ ನಾಗೇಂದ್ರ ಅವರ ಪುತ್ರ ನಿರಂಜನ (16) ಜುಲೈ 12ರಂದು ಮನೆಯಿಂದ ಕಾಲೇಜಿಗೆ ತೆರಳಿದ್ದಾನೆ. ಆದರೆ, ಅದಾದ ಬಳಿಕ ಮನೆಗೆ ಮರಳದೇ ನಾಪತ್ತೆಯಾಗಿದ್ದು, ಕುಟುಂಬಸ್ಥರು ಹಾಗೂ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ನಾಪತ್ತೆಯಾಗಿರುವ ನಿರಂಜನ ಸುಮಾರು 5.5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಕೋಲುಮುಖ ಹಾಗೂ ಗೋಧಿ ಮೈಬಣ್ಣ ಹೊಂದಿದ್ದಾನೆ. ಬಲಗಾಲಿನ ಮಣಿಕಟ್ಟಿನಲ್ಲಿ ಗಾಯದ ಗುರುತು ಇದೆ. ಮನೆಯಿಂದ ಹೊರಡುವಾಗ ನೀಲಿ-ಬಿಳಿ ಬಣ್ಣದ ಟಿ-ಶರ್ಟ್, ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದು, ಜೊತೆಗೆ ಶಾಲಾ ಬ್ಯಾಗ್ ಹೊಂದಿದ್ದಾನೆ ಎಂದು ತಿಳಿಸಲಾಗಿದೆ.

ನಿರಂಜನನ ಬಗ್ಗೆ ಯಾವುದೇ ಮಾಹಿತಿ ಅಥವಾ ಸುಳಿವು ದೊರೆತಲ್ಲಿ ಸಾಗರ ಗ್ರಾಮಾಂತರ ಪೊಲೀಸ್ ಠಾಣೆ (9480803361), ಸಾಗರ ಉಪ ವಿಭಾಗ ಎಸ್‌ಡಿಪಿಒ ಕಚೇರಿ (9480803322), ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿ (08182-261400 / 9480803300) ಸಂಖ್ಯೆಗಳಿಗೆ ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

2 hours ago

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…

15 hours ago

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ​ಮಾನವೀಯತೆಯೆಂಬುದು ಕೇವಲ…

15 hours ago

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…

15 hours ago

ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ. ಭಾನುಪ್ರಕಾಶ್ ಕರೆ

ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ.ಭಾನುಪ್ರಕಾಶ್ ಕರೆ Thirthahalli DySP Dr. Bhanuprakash…

17 hours ago

ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ

ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ ಶತಮಾನೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ :…

21 hours ago