ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ: ಜುಲೈ 13 ಕೊನೆಯ ದಿನ
Applications are invited for the National Teachers Award 2026. Eligible teachers, lecturers, headmasters, principals, and recently retired teachers can apply online before July 13, 2026.
ಶಿವಮೊಗ್ಗ ಜು.08: 2026ನೇ ಸಾಲಿನ “ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ” ಪ್ರಶಸ್ತಿಗೆ ಅರ್ಹರಿರುವ ಶಿಕ್ಷಕರು, ಉಪನ್ಯಾಸಕರು, ಮುಖ್ಯಶಿಕ್ಷಕರು ಮತ್ತು ಪ್ರಾಂಶುಪಾಲರಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ ಪೋರ್ಟಲ್ ಅಥವಾ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜುಲೈ 13, 2026 ಕೊನೆಯ ದಿನವಾಗಿದೆ.
ಇದೇ ವೇಳೆ, 2026ರ ಏಪ್ರಿಲ್ 30ರವರೆಗೆ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುವ ಶಿಕ್ಷಕರೂ ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ ಎಂದು ತಿಳಿಸಲಾಗಿದೆ.
ಪ್ರಶಸ್ತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ಸಲ್ಲಿಕೆ ಕುರಿತು ಮಾರ್ಗದರ್ಶನಕ್ಕಾಗಿ ಅಭ್ಯರ್ಥಿಗಳು ತಮ್ಮ ಸಂಬಂಧಿತ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಸಂಪರ್ಕಿಸುವಂತೆ ಶಿವಮೊಗ್ಗ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆಡಳಿತ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಹ ಆಸಕ್ತರು ರಾಷ್ಟ್ರೀಯ ಪೋರ್ಟಲ್ [https://nationalawardstoteachers.education.gov.in] (https://nationalawardstoteachers.education.gov.in) ಅಥವಾ
ಶಾಲಾ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್ [https://schooleducation.karnataka.gov.in]
(https://schooleducation.karnataka.gov.in) ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…
ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…
ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…
ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…
ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…
ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…