w
Headlines
Home » ನ್ಯಾಮತಿ ಬಳಿ ಕಾರು-ಬೈಕ್ ಭೀಕರ ಡಿಕ್ಕಿ: ರಿಪ್ಪನ್‌ಪೇಟೆ ಮೂಲದ ಯುವಕ ಸಾವು

ನ್ಯಾಮತಿ ಬಳಿ ಕಾರು-ಬೈಕ್ ಭೀಕರ ಡಿಕ್ಕಿ: ರಿಪ್ಪನ್‌ಪೇಟೆ ಮೂಲದ ಯುವಕ ಸಾವು

Screenshot 2026 07 06 15 39 11 800 photoeditor.layout.collagemaker edit

ನ್ಯಾಮತಿ ಬಳಿ ಕಾರು-ಬೈಕ್ ಭೀಕರ ಡಿಕ್ಕಿ: ರಿಪ್ಪನ್‌ಪೇಟೆ ಮೂಲದ ಯುವಕ ಚಿಕಿತ್ಸೆ ಫಲಿಸದೆ ಸಾವು

A youth from Belanduru village near Ripponpet died after succumbing to injuries sustained in a bike and Santro car collision at Savalanga Circle under Nyamathi Police Station limits.

ರಿಪ್ಪನ್‌ಪೇಟೆ : ನ್ಯಾಮತಿ ಪೊಲೀಸ್ ಠಾಣೆ ವ್ಯಾಪ್ತಿಯ ಸವಳಂಗ ಸರ್ಕಲ್‌ನಲ್ಲಿ ಭಾನುವಾರ ಸಂಭವಿಸಿದ್ದ ಕಾರು ಹಾಗೂ ಬೈಕ್ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಿಪ್ಪನ್‌ಪೇಟೆ ಸಮೀಪದ ಬೆಳಂದೂರು ಗ್ರಾಮದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೃತರನ್ನು ಬೆಳಂದೂರು ಗ್ರಾಮದ ಶಿವಕುಮಾರ್ ಎಂದು ಗುರುತಿಸಲಾಗಿದೆ. ಭಾನುವಾರ ಶಿವಕುಮಾರ್ ಹಾಗೂ ಅವರ ಸ್ನೇಹಿತ ಸಚಿನ್ ಅವರು ಟಿವಿಎಸ್ ಅಪಾಚೆ ಬೈಕ್‌ನಲ್ಲಿ ಬೆಳಂದೂರಿನಿಂದ ನ್ಯಾಮತಿ ಮಾರ್ಗವಾಗಿ ಉಕ್ಕಡಗಾತ್ರಿ ಕಡೆಗೆ ತೆರಳುತ್ತಿದ್ದ ವೇಳೆ ಸವಳಂಗ ಸರ್ಕಲ್‌ನಲ್ಲಿ ಎದುರಿನಿಂದ ಬಂದ ಸ್ಯಾಂಟ್ರೋ ಕಾರಿನೊಂದಿಗೆ ಡಿಕ್ಕಿ ಸಂಭವಿಸಿದೆ ಎಂದು ತಿಳಿದುಬಂದಿದೆ.

ಅಪಘಾತದ ತೀವ್ರತೆಗೆ ಶಿವಕುಮಾರ್ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಅವರು ಕೊನೆಯುಸಿರೆಳೆದಿದ್ದಾರೆ.

ಅಪಘಾತದ ಕುರಿತು ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ಏನು ಎಂಬುದು ತನಿಖೆಯ ಬಳಿಕ ತಿಳಿದುಬರಬೇಕಿದೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.