ನ್ಯಾಮತಿ ಬಳಿ ಕಾರು-ಬೈಕ್ ಭೀಕರ ಡಿಕ್ಕಿ: ರಿಪ್ಪನ್‌ಪೇಟೆ ಮೂಲದ ಯುವಕ ಚಿಕಿತ್ಸೆ ಫಲಿಸದೆ ಸಾವು
A youth from Belanduru village near Ripponpet died after succumbing to injuries sustained in a bike and Santro car collision at Savalanga Circle under Nyamathi Police Station limits.
ರಿಪ್ಪನ್‌ಪೇಟೆ : ನ್ಯಾಮತಿ ಪೊಲೀಸ್ ಠಾಣೆ ವ್ಯಾಪ್ತಿಯ ಸವಳಂಗ ಸರ್ಕಲ್‌ನಲ್ಲಿ ಭಾನುವಾರ ಸಂಭವಿಸಿದ್ದ ಕಾರು ಹಾಗೂ ಬೈಕ್ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಿಪ್ಪನ್‌ಪೇಟೆ ಸಮೀಪದ ಬೆಳಂದೂರು ಗ್ರಾಮದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತರನ್ನು ಬೆಳಂದೂರು ಗ್ರಾಮದ ಶಿವಕುಮಾರ್ ಎಂದು ಗುರುತಿಸಲಾಗಿದೆ. ಭಾನುವಾರ ಶಿವಕುಮಾರ್ ಹಾಗೂ ಅವರ ಸ್ನೇಹಿತ ಸಚಿನ್ ಅವರು ಟಿವಿಎಸ್ ಅಪಾಚೆ ಬೈಕ್‌ನಲ್ಲಿ ಬೆಳಂದೂರಿನಿಂದ ನ್ಯಾಮತಿ ಮಾರ್ಗವಾಗಿ ಉಕ್ಕಡಗಾತ್ರಿ ಕಡೆಗೆ ತೆರಳುತ್ತಿದ್ದ ವೇಳೆ ಸವಳಂಗ ಸರ್ಕಲ್‌ನಲ್ಲಿ ಎದುರಿನಿಂದ ಬಂದ ಸ್ಯಾಂಟ್ರೋ ಕಾರಿನೊಂದಿಗೆ ಡಿಕ್ಕಿ ಸಂಭವಿಸಿದೆ ಎಂದು ತಿಳಿದುಬಂದಿದೆ.
ಅಪಘಾತದ ತೀವ್ರತೆಗೆ ಶಿವಕುಮಾರ್ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಅವರು ಕೊನೆಯುಸಿರೆಳೆದಿದ್ದಾರೆ.
ಅಪಘಾತದ ಕುರಿತು ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ಏನು ಎಂಬುದು ತನಿಖೆಯ ಬಳಿಕ ತಿಳಿದುಬರಬೇಕಿದೆ.
ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…
ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ಮಾನವೀಯತೆಯೆಂಬುದು ಕೇವಲ…
ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…
ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ.ಭಾನುಪ್ರಕಾಶ್ ಕರೆ Thirthahalli DySP Dr. Bhanuprakash…
ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ ಶತಮಾನೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ :…
ಗಣೇಶೋತ್ಸವ ಹಿನ್ನೆಲೆ: ಸೆ.4ರಂದು ರಿಪ್ಪನ್‌ಪೇಟೆಯಲ್ಲಿ ಎಎಸ್‌ಪಿ ಭಾನುಪ್ರಕಾಶ್ ನೇತೃತ್ವದಲ್ಲಿ ಶಾಂತಿ ಸಭೆ A peace meeting for Ganesh festival…