ಅಪ್ರಾಪ್ತ ಬಾಲಕಿಗೆ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯ ಆರೋಪ : ರಿಪ್ಪನ್ ಪೇಟೆಯಲ್ಲಿ ಗಂಡ-ಹೆಂಡತಿ ವಿರುದ್ಧ ಎಫ್‌ಐಆರ್

ಅಪ್ರಾಪ್ತ ಬಾಲಕಿಗೆ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯ ಆರೋಪ : ರಿಪ್ಪನ್ ಪೇಟೆಯಲ್ಲಿ ಗಂಡ-ಹೆಂಡತಿ ವಿರುದ್ಧ ಎಫ್‌ಐಆರ್

Rare POCSO case registered in Ripponpete. Police have booked a husband and wife over alleged sexual assault of a minor girl and are investigating the alleged involvement of seven other youths.

ರಿಪ್ಪನ್‌ಪೇಟೆ: ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಅಪರೂಪದ ರೀತಿಯ ಪೋಕ್ಸೋ (POCSO) ಪ್ರಕರಣ ದಾಖಲಾಗಿದ್ದು, ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದ ಹಿನ್ನೆಲೆಯಲ್ಲಿ ಗಂಡ-ಹೆಂಡತಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣದ ಗಂಭೀರತೆಯನ್ನು ಮನಗಂಡ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಹಾಗೂ ಸಿಬ್ಬಂದಿಗಳು ಪ್ರಕರಣ ದಾಖಲಾಗುತಿದ್ದಂತೆ ರಾತ್ರೋರಾತ್ರಿ ಕಾರ್ಯಾಚರಣೆ ನಡೆಸಿ ಹಲವು ಆರೋಪಿತರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿ ದಂಪತಿಗಳಿಬ್ಬರ ಮೇಲೆ ಪ್ರಕರಣ ದಾಖಲಿಸಿದ್ದಾರೆ.

ಪೊಲೀಸರಿಗೆ ದೊರೆತ ದೂರಿನ ಪ್ರಕಾರ, ಕೂಲಿ ಕೆಲಸ ಮಾಡುತ್ತಿದ್ದ ವಿವಾಹಿತ ವ್ಯಕ್ತಿಯೊಬ್ಬ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ. ತನಿಖೆಯ ವೇಳೆ ಲಭ್ಯವಾದ ಮಾಹಿತಿಯ ಆಧಾರದ ಮೇಲೆ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಹಕಾರ ನೀಡಿದ ಆರೋಪದಲ್ಲಿ ಆತನ ಪತ್ನಿಯ ವಿರುದ್ಧವೂ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಇದಲ್ಲದೆ, ಬೇರೆ ಬೇರೆ ಸಂದರ್ಭಗಳಲ್ಲಿ ಅಕ್ಕಪಕ್ಕದ ಗ್ರಾಮಗಳ ಕೆಲವು ಯುವಕರು ಸಹ ಬಾಲಕಿಗೆ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಆರೋಪಗಳ ಸತ್ಯಾಸತ್ಯತೆ ಕುರಿತು ಪೊಲೀಸರು ಪ್ರತ್ಯೇಕವಾಗಿ ತನಿಖೆ ನಡೆಸುತ್ತಿದ್ದಾರೆ.

ಪ್ರಕರಣದ ಸೂಕ್ಷ್ಮತೆ ಮತ್ತು ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು ಪೊಲೀಸರು ಎಲ್ಲಾ ಆಯಾಮಗಳಿಂದ ಪರಿಶೀಲನೆ ನಡೆಸಿದ್ದು, ಸಂಬಂಧಿಸಿದವರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ. ಅಪ್ರಾಪ್ತ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಕಾನೂನು ಪ್ರಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಪ್ರಸ್ತುತ ಪ್ರಕರಣ ಸಂಬಂಧ ರಿಪ್ಪನ್‌ಪೇಟೆ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದು, ಆರೋಪಿತರ ಪಾತ್ರ, ಘಟನೆಯ ಹಿನ್ನೆಲೆ ಹಾಗೂ ಇತರ ಆರೋಪಗಳ ಬಗ್ಗೆ ಸಮಗ್ರ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ತನಿಖೆ ಪೂರ್ಣಗೊಂಡ ಬಳಿಕ ಮತ್ತಷ್ಟು ಮಾಹಿತಿ ಬಹಿರಂಗವಾಗುವ ಸಾಧ್ಯತೆಯಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

5 hours ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

6 hours ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

6 hours ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

11 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

12 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

1 day ago