ಹೊಸನಗರ ತಾಲೂಕು ಗಂಗಾಮತಸ್ಥರ ಸಮಾಜದ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ; ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಕರೆ

ಹೊಸನಗರ ತಾಲೂಕು ಗಂಗಾಮತಸ್ಥರ ಸಮಾಜದ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ; ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಕರೆ

Former Zilla Panchayat President Kalagodu Ratnakar emphasized the importance of education and social unity during the Gangamathastha community’s Prathibha Puraskara programme held near Ripponpet, where meritorious SSLC and PUC students were honoured.

ರಿಪ್ಪನ್‌ಪೇಟೆ: ಸಮಾಜದಲ್ಲಿ ನೊಂದವರನ್ನು ಮುಖ್ಯವಾಹಿನಿಗೆ ತರಲು ಪ್ರತಿಯೊಬ್ಬರೂ ಕೈಜೋಡಿಸಬೇಕು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಿ ಸುಸಂಸ್ಕೃತ ಬದುಕು ಕಟ್ಟಿಕೊಡಲು ಸಮಾಜ ಒಗ್ಗಟ್ಟಿನಿಂದ ಶ್ರಮಿಸಬೇಕಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ಹೇಳಿದರು.

ಕೊಡೂರು ಸಮೀಪದ ಅಮ್ಮನಘಟ್ಟ ಸಭಾಭವನದಲ್ಲಿ ಹೊಸನಗರ ತಾಲೂಕು ಗಂಗಾಮತಸ್ಥರ ನೌಕರರ ಕ್ಷೇಮಾಭಿವೃದ್ಧಿ ಸಂಘ ಹಾಗೂ ತಾಲೂಕು ಗಂಗಾಮತಸ್ಥರ ಸಮಾಜದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಸಮಾಜದ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡುವ ಉದ್ದೇಶದಿಂದ ವಸತಿ ನಿಲಯಗಳಂತಹ ಸೌಲಭ್ಯಗಳನ್ನು ಆರಂಭಿಸಿ, ಶಿಕ್ಷಣದ ಮೂಲಕ ಸದೃಢ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು. ಯಾವುದೇ ಸಮಾಜ ಹಿಂದುಳಿದಿದ್ದರೆ ಅದನ್ನು ಮುಂಚೂಣಿಗೆ ತರುವುದು ಸಮುದಾಯದ ಜವಾಬ್ದಾರಿಯಾಗಿದೆ. ಕೀಳರಿಮೆ ಬಿಟ್ಟು ಸಮಾಜದ ಸಮಗ್ರ ಅಭಿವೃದ್ಧಿಗೆ ಎಲ್ಲರೂ ಶ್ರಮಿಸಬೇಕು ಎಂದು ಅವರು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾಲೂಕು ಗಂಗಾಮತಸ್ಥರ ಸಮಾಜದ ಅಧ್ಯಕ್ಷ ಚಿದಂಬರ ಹೂವಿನಕೋಣೆ ಮಾತನಾಡಿ, ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಶಾಶ್ವತ ಬದಲಾವಣೆ ಸಾಧ್ಯ. ಪ್ರತಿಯೊಬ್ಬರೂ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಅವರನ್ನು ಸಮಾಜದ ಆಸ್ತಿಯನ್ನಾಗಿ ರೂಪಿಸಬೇಕು ಎಂದು ಹೇಳಿದರು.

ಬಲಿಷ್ಠ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಪ್ರಮುಖ ಅಸ್ತ್ರವಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕಳೆದ ಶೈಕ್ಷಣಿಕ ವರ್ಷದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು ಎಂದು ತಿಳಿಸಿದರು.

ಸಮಾಜದ ಏಳಿಗೆಗಾಗಿ ಸಂಘವು ನಿರಂತರವಾಗಿ ಕಾರ್ಯನಿರ್ವಹಿಸಲಿದ್ದು, ಅದರ ಯಶಸ್ಸಿಗೆ ಸಮಾಜದ ಪ್ರತಿಯೊಬ್ಬರೂ ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ತಾಲೂಕ್ ಗಂಗಾಮತಸ್ಥ ಸಂಘದ ಗೌರಾವಧ್ಯಕ್ಷರಾದ ಉಮೇಶ್ ಕೆ ವೈ, ಬೆನಕಪ್ಪ , ಗಂಗಾಧರ್ ಕೆ , ಡಿ.ಬಿ. ಚಂದ್ರಪ್ಪ,ಪ್ರಕಾಶ್ ಕೆ ಡಿ , ಚಂದ್ರಶೇಖರ್, ಸತ್ಯನಾರಾಯಣ, ಗಣಪತಿ ಬಿ‌ ಕೆ,  ಮೇಘರಾಜ್, ಉಮೇಶ್ ಹೆಚ್ ಬಿ , ಲೀಲಾವತಿ ನಾಗರಾಜ್, ಸರಸ್ವತಿ ಗಣಪತಿ , ಪುಟ್ಟಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕು. ವಿದ್ಯಾ ಮಟ್ಟಿಮನೆ ಹಾಗೂ ಭುವನ್ ಜಯನಗರ ನಿರೂಪಿಸಿದರು, ಸಂಘದ ಪ್ರಧಾನ ಕಾರ್ಯದರ್ಶಿ ದಿನೇಶ್ ಕುಮಾರ್ ಜಿ ಸ್ವಾಗತಿಸಿದರು,  ಲೋಹಿತ್ ಕುಮಾರ್ ವಂದಿಸಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…

9 hours ago

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…

11 hours ago

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…

12 hours ago

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…

12 hours ago

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…

12 hours ago

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…

1 day ago