ಐಷರಾಮಿ ವಾಹನದಲ್ಲಿ ದನ ಕಳ್ಳತನ: ಕಾರು ಸಮೇತ ಆರೋಪಿಗಳ ಹೆಡೆಮುರಿ ಕಟ್ಟಿದ ರಿಪ್ಪನ್‌ಪೇಟೆ ಪೊಲೀಸರು

ಐಷರಾಮಿ ವಾಹನದಲ್ಲಿ ದನ ಕಳ್ಳತನ: ವಾಹನ ಸಮೇತ ಆರೋಪಿಗಳ ಹೆಡೆಮುರಿ ಕಟ್ಟಿದ ರಿಪ್ಪನ್‌ಪೇಟೆ ಪೊಲೀಸರು

Ripponpet police have cracked a cattle theft case involving a luxury vehicle, arresting two accused within 15 days. The swift operation was led by PSI Raju Reddy. Read the full crime report on Postman News.

ರಿಪ್ಪನ್‌ಪೇಟೆ: ಯಾರಿಗೂ ಅನುಮಾನ ಬಾರದಂತೆ ಐಷರಾಮಿ ವಾಹನವನ್ನು ಬಳಸಿಕೊಂಡು ಜಾನುವಾರುಗಳನ್ನು ಕಳವು ಮಾಡುತ್ತಿದ್ದ ಜಾಲವನ್ನು ಬೇಧಿಸುವಲ್ಲಿ ರಿಪ್ಪನ್‌ಪೇಟೆ ಪಿಎಸ್ ಐ ರಾಜುರೆಡ್ಡಿ ನೇತ್ರತ್ವದ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಜುಲೈ ತಿಂಗಳ ಆರಂಭದಲ್ಲಿ ನಡೆದಿದ್ದ ಈ ಕಳ್ಳತನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಕೇವಲ 15 ದಿನಗಳೊಳಗೆ ಇಬ್ಬರು ಆರೋಪಿಗಳನ್ನು ಬಂಧಿಸುವ ಮೂಲಕ ಮಹತ್ವದ ಕಾರ್ಯಾಚರಣೆ ನಡೆಸಿದ್ದಾರೆ.

​ಘಟನೆಯ ಹಿನ್ನೆಲೆ :

​ಜುಲೈ 3, 2026 ರ ರಾತ್ರಿ ರಿಪ್ಪನ್‌ಪೇಟೆ ಪಟ್ಟಣದ ಸಾಗರ ರಸ್ತೆಯಲ್ಲಿರುವ ಗಿರಿಗೌಡ ಎಂಬುವವರ ಮನೆಯ ಸಮೀಪ ಈ ಘಟನೆ ಜರುಗಿತ್ತು. ಕತ್ತಲಲ್ಲಿ ಐಷರಾಮಿ ವಾಹನದಲ್ಲಿ ಬಂದ ದುಷ್ಕರ್ಮಿಗಳು, ದನಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಐಷರಾಮಿ ವಾಹನ ಬಳಸಿದ್ದರಿಂದ ಸ್ಥಳೀಯರಿಗೆ ತಕ್ಷಣಕ್ಕೆ ಯಾವುದೇ ಅನುಮಾನ ಬಂದಿರಲಿಲ್ಲ. ಈ ಘಟನೆಯನ್ನು ಖಂಡಿಸಿ ಹಿಂದೂ ಜಾಗರಣ ವೇದಿಕೆಯ ಮುಖಂಡರಾದ ದೇವರಾಜ್ ಕೆರೆಹಳ್ಳಿ ಅವರು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಅಧಿಕೃತವಾಗಿ ದೂರು ದಾಖಲಿಸಿದ್ದರು.

​ಕ್ಷಿಪ್ರ ಕಾರ್ಯಾಚರಣೆ ಮತ್ತು ಬಂಧನ

​ದೂರು ದಾಖಲಿಸಿಕೊಂಡ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸ್ ಇಲಾಖೆ, ಡಿವೈಎಸ್‌ಪಿ ಅರವಿಂದ್ ಕಲಗುಜ್ಜಿ ಹಾಗೂ ಸರ್ಕಲ್ ಇನ್ಸ್‌ಪೆಕ್ಟರ್ ಗೌಡಪ್ಪ ಗೌಡರ್ ಅವರ ನೇರ ಮಾರ್ಗದರ್ಶನದಲ್ಲಿ ವಿಶೇಷ ತಂಡವನ್ನು ರಚಿಸಿತ್ತು. ಪಿಎಸ್‌ಐ ರಾಜು ರೆಡ್ಡಿ ಅವರ ನೇತೃತ್ವದ ಈ ತಂಡವು ತನಿಖೆಯನ್ನು ಚುರುಕುಗೊಳಿಸಿ, ಕೃತ್ಯ ನಡೆದ ಕೇವಲ 15 ದಿನಗಳ ಅಂತರದಲ್ಲಿ ಇಬ್ಬರು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದೆ.ಕೃತ್ಯಕ್ಕೆ ಬಳಸಿದ್ದ ಇನ್ನೋವಾ ಕಾರನ್ನು ವಶಕ್ಕೆ ಪಡೆಯಲಾಗಿದೆ.

​ಬಂಧಿತ ಆರೋಪಿಗಳನ್ನು ಶಿವಮೊಗ್ಗದ ಹಳೆಮಂಡ್ಲಿ ನಿವಾಸಿ ಅಮೀರ್ ಸುಹೇಲ್ (26 ವರ್ಷ) ಮತ್ತು ಮಹಮ್ಮದ್ ಇಸ್ರಾರ್ ಉಲ್ಲಾ ಖಾನ್ (20 ವರ್ಷ) ಎಂದು ಗುರುತಿಸಲಾಗಿದೆ. ಆರೋಪಿಗಳು ಬಳಸಿದ್ದ ಇನ್ನೀವಾ ಕಾರನ್ನು ವಶಕ್ಕೆ ಪಡೆಯಲಾಗಿದೆ.

​ಈ ಯಶಸ್ವಿ ಕಾರ್ಯಾಚರಣೆಯಲ್ಲಿಪೊಲೀಸ್ ಸಿಬ್ಬಂದಿಗಳಾದ ರಾಮಚಂದ್ರ ಎನ್.ಎಂ, ಅಶೋಕ್, ವಿಶ್ವನಾಥ್ , ಪರಮೇಶ್ವರಪ್ಪ , ಮತ್ತು ಅವಿನಾಶ್ ಅವರು ಸಕ್ರಿಯವಾಗಿ ಪಾಲ್ಗೊಂಡಿದ್ದರು.

ಆರೋಪಿಗಳು ಐಷರಾಮಿ ವಾಹನಗಳನ್ನು ಬಳಸಿಕೊಂಡು ಇನ್ನಿತರ ಕಡೆಗಳಲ್ಲೂ ಇಂತಹ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ. ಪೊಲೀಸರ ಈ ತ್ವರಿತ ಕಾರ್ಯಚರಣೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…

8 hours ago

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…

10 hours ago

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…

11 hours ago

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…

11 hours ago

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…

11 hours ago

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…

1 day ago