POSTMANNEWS

ನೈಜ ಸುದ್ದಿ ನೇರ ಬಿತ್ತರ..

ರಿಪ್ಪನ್ ಪೇಟೆ : ರೈಲ್ವೇ ಹಳಿಯ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

JPEG 20260731 191259 5230501778935502484 wm

ರಿಪ್ಪನ್ ಪೇಟೆ : ರೈಲ್ವೇ ಹಳಿಯ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

An unidentified elderly man’s body was found on a railway track near Batanijaddu village in Ripponpet. Police suspect he was hit by the Mysuru–Talaguppa train. Investigation is underway.

ರಿಪ್ಪನ್ ಪೇಟೆ, ಜು.31: ರಿಪ್ಪನ್ ಪೇಟೆ ಸಮೀಪದ ಬಟಾಣಿಜಡ್ಡು ಗ್ರಾಮದ ಬಳಿ ಇರುವ ರೈಲ್ವೇ ಹಳಿ ಮೇಲೆ ಅಪರಿಚಿತ ವೃದ್ಧನ ಶವ ಪತ್ತೆಯಾಗಿರುವ ಘಟನೆ ಇಂದು ಬೆಳಕಿಗೆ ಬಂದಿದೆ.

ಪ್ರಾಥಮಿಕ ಮಾಹಿತಿಯಂತೆ, ಮೃತ ವ್ಯಕ್ತಿ ಸಂಜೆ ನಾಲ್ಕು ಗಂಟೆಗೆ ಸಂಚರಿಸುವ ಮೈಸೂರು–ತಾಳಗುಪ್ಪ ರೈಲಿಗೆ ಸಿಲುಕಿ ಮೃತಪಟ್ಟಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ಸ್ಥಳೀಯರು ನೀಡಿದ ಮಾಹಿತಿಯ ಮೇರೆಗೆ ಮೃತ ವ್ಯಕ್ತಿಯ ಜೇಬಿನಲ್ಲಿ ಕುಂಸಿ (Kumsi) ನಿಲ್ದಾಣದ ರೈಲು ಟಿಕೆಟ್ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಅವರು ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕೆಳಗೆ ಬಿದ್ದು ಮೃತಪಟ್ಟಿರಬಹುದೇ ಅಥವಾ ರೈಲಿಗೆ ಸಿಲುಕಿ ಸಾವನ್ನಪ್ಪಿರಬಹುದೇ ಎಂಬ ಎರಡು ಸಾಧ್ಯತೆಗಳ ಕುರಿತು ಶಂಕೆ ವ್ಯಕ್ತವಾಗಿದೆ.

ಘಟನೆ ನಡೆದ ಸ್ಥಳಕ್ಕೆ ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಹಾಗೂ ಸಿಬ್ಬಂದಿಗಳು ಭೇಟಿ ನೀಡಿದ್ದಾರೆ.ಮೃತ ವ್ಯಕ್ತಿಯ ಗುರುತು ಹಾಗೂ ಸಾವಿನ ನಿಖರ ಕಾರಣ ಪೊಲೀಸ್ ತನಿಖೆಯ ಬಳಿಕವೇ ಸ್ಪಷ್ಟವಾಗಬೇಕಿದೆ.

ಗುರುತು ಪತ್ತೆ ಹಚ್ಚಲಿ ಎನ್ನುವ ಉದ್ದೇಶದಿಂದ ಈ ಚಿತ್ರವನ್ನು ಬ್ಲರ್ ಮಾಡದೇ ಪ್ರಕಟಿಸಲಾಗಿದೆ
  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.