w
Headlines
Home » ಹೊಸನಗರದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಕಚೇರಿಗೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ; ಸರ್ಕಾರಿ ಶಾಲೆಯ ಸ್ಥಿತಿಗತಿ ಪರಿಶೀಲನೆ

ಹೊಸನಗರದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಕಚೇರಿಗೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ; ಸರ್ಕಾರಿ ಶಾಲೆಯ ಸ್ಥಿತಿಗತಿ ಪರಿಶೀಲನೆ

IMG 20260714

ಹೊಸನಗರದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಕಚೇರಿಗೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ; ಸರ್ಕಾರಿ ಶಾಲೆಯ ಸ್ಥಿತಿಗತಿ ಪರಿಶೀಲನೆ

PWD Minister Satish Jarkiholi visited MLA Beluru Gopalakrishna’s office in Hosanagara and later inspected the Government Model Girls Higher Primary School, encouraging students to participate in the Bharat Jodo Sports Meet.

ಹೊಸನಗರ, ಜು. 14: ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹುಲಿಕಲ್ ಘಾಟ್‌ನಲ್ಲಿ ನಡೆಯುತ್ತಿರುವ ರಸ್ತೆ ಸುರಕ್ಷತೆ ಹಾಗೂ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆಗೆ ತೆರಳುವ ವೇಳೆ ಹೊಸನಗರದಲ್ಲಿರುವ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಕಚೇರಿಗೆ ಭೇಟಿ ನೀದಿದರು.

ಈ ಸಂದರ್ಭದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸಚಿವರನ್ನು ಸ್ವಾಗತಿಸಿದರು. ಸ್ಥಳೀಯ ಅಭಿವೃದ್ಧಿ ಹಾಗೂ ವಿವಿಧ ಸಾರ್ವಜನಿಕ ವಿಚಾರಗಳ ಕುರಿತು ಸಚಿವರು ಮುಖಂಡರೊಂದಿಗೆ ಅನೌಪಚಾರಿಕವಾಗಿ ಚರ್ಚೆ ನಡೆಸಿದರು.

ಬಳಿಕ ಸಚಿವ ಸತೀಶ್ ಜಾರಕಿಹೊಳಿ ಅವರು ಹೊಸನಗರದ ಶಾಸಕರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆಗೆ ದಿಢೀರ್ ಭೇಟಿ ನೀಡಿ ಶಾಲೆಯ ಮೂಲಸೌಕರ್ಯ, ಶೈಕ್ಷಣಿಕ ವಾತಾವರಣ ಹಾಗೂ ವಿವಿಧ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು.

ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಸ್ಥಳೀಯ ನಾಯಕರೊಂದಿಗೆ ಸಭೆ ನಡೆಸಿದ ಸಚಿವರು, ಶಾಲೆಯ ಅಗತ್ಯತೆಗಳು ಮತ್ತು ಅಭಿವೃದ್ಧಿಗೆ ಸಂಬಂಧಿಸಿದ ಮಾಹಿತಿಯನ್ನು ಪಡೆದುಕೊಂಡರು. ಇದೇ ವೇಳೆ ಶಾಲೆಯ ವಿದ್ಯಾರ್ಥಿನಿಯರು ಕ್ರೀಡಾ ಕ್ಷೇತ್ರದಲ್ಲಿ ಸಾಧಿಸಿರುವ ಯಶಸ್ಸಿನ ಬಗ್ಗೆ ಮುಖ್ಯ ಶಿಕ್ಷಕರು ವಿವರಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಸತೀಶ್ ಜಾರಕಿಹೊಳಿ, ರಾಜ್ಯ ಸರ್ಕಾರದಿಂದ ಬೃಹತ್ ಮಟ್ಟದಲ್ಲಿ “ಭಾರತ್ ಜೋಡೋ ಕ್ರೀಡಾ ಕೂಟ” ಆಯೋಜಿಸಲಾಗುತ್ತಿದ್ದು, ಕ್ರೀಡಾ ಪ್ರತಿಭೆ ಹೊಂದಿರುವ ವಿದ್ಯಾರ್ಥಿಗಳು ಈ ವೇದಿಕೆಯನ್ನು ಸದುಪಯೋಗಪಡಿಸಿಕೊಂಡು ತಮ್ಮ ಪ್ರತಿಭೆಯನ್ನು ರಾಜ್ಯ ಮಟ್ಟದಲ್ಲಿ ಪ್ರದರ್ಶಿಸಬೇಕು ಎಂದು ಕರೆ ನೀಡಿದರು.

ವಿದ್ಯಾರ್ಥಿಗಳ ಕ್ರೀಡಾ ಪ್ರತಿಭೆಗೆ ಸರ್ಕಾರ ಅಗತ್ಯ ಪ್ರೋತ್ಸಾಹ ನೀಡಲಿದ್ದು, ಗ್ರಾಮೀಣ ಭಾಗದ ಪ್ರತಿಭೆಗಳು ಹೆಚ್ಚಿನ ಅವಕಾಶಗಳನ್ನು ಪಡೆದು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡುವಂತಾಗಬೇಕು ಎಂದು ಸಚಿವರು ಅಭಿಪ್ರಾಯಪಟ್ಟರು.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.